ಮೊಟೊರೊಲಾ ಸ್ಮಾರ್ಟ್‌ಫೋನ್‌ಗಳಿಗೆ ಭಾರತದಲ್ಲಿ ಭಾರೀ ಡಿಮ್ಯಾಂಡ್ ಇದೆ. ಕಂಪನಿಯು ಮಿಡ್ ಬಜೆಟ್ ವಿಭಾಗದಲ್ಲಿ ಪ್ರೀಮಿಯಂ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡುತ್ತಲೇ ಬರುತ್ತಿದೆ. ಜೊತೆಗೆ ತನ್ನ ಅಭಿಮಾನಿಗಳಿಗೆ ಭರ್ಜರಿ ಆಫರ್‌ಗಳನ್ನು ನೀಡುತ್ತದೆ. ಪ್ರಸ್ತುತ, ಕಂಪನಿಯು ತನ್ನ 'Edge 50' ಸರಣಿಯ ಈ ಫೋನನ್ನು ಬಂಪರ್ ಆಫರ್‌ನೊಂದಿದೆ. ಮಾರಾಟ ಮಾಡುತ್ತಿದೆ. ಹೌದು, ಮೊಟೊರೊಲಾ ಎಡ್ಜ್ 50 ಪ್ರೊ (Motorola Edge 50 Pro 5G) ಸ್ಮಾರ್ಟ್‌ಫೋನ್ ಖರೀದಿಸಿದರೆ, ನೀವು 2,000 ರೂ. ಉಳಿತಾಯ ಮಾಡಬಹುದು. ಬನ್ನಿ, ಈ ಫೋನಿನ ಹೊಸ ಬೆಲೆ ಮತ್ತು ವಿಶೇಷತೆಗಳನ್ನು ತಿಳಿಯೋಣ.
ಮೊಟೊರೊಲಾ ಎಡ್ಜ್ 50 ಪ್ರೊ ಫೋನ್ 60 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ 50MP + 50MP + 12MP ಕ್ಯಾಮೆರಾಗಳಿವೆ. ಇದು ಕ್ವಾಲ್‌ಕಾಮ್‌ನ ಸ್ನಾಪ್‌ಡ್ರಾಗನ್ 8 ಜೆನ್ 2 ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಈ ಫೋನಿನಲ್ಲಿ 6.67 ಇಂಚಿನ ಡಿಸ್ಪ್ಲೇ ಇದೆ. ಜೊತೆಗೆ, 12GB RAM + 256GB ಸ್ಟೋರೇಜ್, 4600mAh ಬ್ಯಾಟರಿ ಮತ್ತು 125W ವೇಗದ ಚಾರ್ಜಿಂಗ್ ಒಳಗೊಂಡಿದೆ. ಈ ಫೋನಿನ ಆಫರ್ ತಿಳಿಯಲು ಮುಂದೆ ಓದಿ.
ಮೊಟೊರೊಲಾ ಎಡ್ಜ್ 50 ಪ್ರೊ 5G ಬೆಲೆ
ಮೊಟೊರೊಲಾ ಎಡ್ಜ್ 50 ಪ್ರೊ 5G ಫೋನಿನ 12GB RAM + 256GB ಸ್ಟೋರೇಜ್ ರೂಪಾಂತರವನ್ನು31,999 ರೂ.ಗೆ ಬಿಡುಗಡೆ ಮಾಡಲಾಗಿತ್ತು. ಪ್ರಸ್ತುತ, ಕಂಪನಿಯು 2,000 ರೂ. ರಿಯಾಯಿತಿ ಘೋಷಿಸಿದೆ. ನೀವು, ಡಿಸ್ಕೌಂಟ್ ಬಳಿಕ 29,999 ರೂ.ಗೆ ಈ ಫೋನ್ ಖರೀದಿಸಬಹುದು. ಕಂಪನಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಈ ಆಫರ್‌ನ ಲಾಭ ಪಡೆಯಬಹುದು.
ಮೊಟೊರೊಲಾ ಎಡ್ಜ್ 50 ಪ್ರೊ 5G ವೈಶಿಷ್ಟ್ಯಗಳು
ಡಿಸ್ಪ್ಲೇ ಹೇಗಿದೆ
ಮೊಟೊರೊಲಾ ಎಡ್ಜ್ 50 ಪ್ರೊ 5G ಮೊಬೈಲ್ 6.67 ಇಂಚಿನ ಡಿಸ್ಪ್ಲೇ ಹೊಂದಿದೆ. ಇದು ಪೂರ್ಣ ಎಚ್‌ಡಿ ಪ್ಲಸ್ ಪಂಚ್ ಹೋಲ್ ಡಿಸ್ಪ್ಲೇ ಆಗಿದೆ. ಈ ಡಿಸ್ಪ್ಲೇಯು 165Hz ರಿಫ್ರೆಶ್ ದರ ಬೆಂಬಲವನ್ನು ಹೊಂದಿದೆ. ಇದು ಗೊರಿಲ್ಲಾ ಗ್ಲಾಸ್ ವಿಕ್ಟಸ್ ರಕ್ಷಣೆ ಪಡೆದಿದೆ.
ಪ್ರೊಸೆಸರ್ ಯಾವುದು?
ಮೊಟೊರೊಲಾ ಎಡ್ಜ್ 50 ಪ್ರೊ 5G ಫೋನ್ ಕ್ವಾಲ್‌ಕಾಮ್‌ನ ಸ್ನಾಪ್‌ಡ್ರಾಗನ್ 8 ಜೆನ್ 2 ಪ್ರೊಸೆಸರ್ ಹೊಂದಿದೆ. ಈ ಫೋನ್ ಆಂಡ್ರಾಯ್ಡ್ 13 ಆಪರೇಟಿಂಗ್ ಸಿಸ್ಟಂನೊಂದಿಗೆ ಕೆಲಸ ನಿರ್ವಹಿಸಲಿದೆ. ಇದು 12GB RAM + 256GB ಸ್ಟೋರೇಜ್ ಆಯ್ಕೆ ಒಳಗೊಂಡಿದೆ.
ಕ್ಯಾಮೆರಾ ಸೆಟಪ್
ಮೊಟೊರೊಲಾ ಎಡ್ಜ್ 50 ಪ್ರೊ 5G ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ, 50 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಮತ್ತು 12 ಮೆಗಾಪಿಕ್ಸೆಲ್ ತೃತೀಯ ಕ್ಯಾಮೆರಾ ಲಭ್ಯವಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನ್ 60 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿದೆ.
ಬ್ಯಾಟರಿ ಮತ್ತು ಚಾರ್ಜಿಂಗ್
ಮೊಟೊರೊಲಾ ಎಡ್ಜ್ 50 ಪ್ರೊ 5G ಮೊಬೈಲ್ 4,600mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದನ್ನು ಚಾರ್ಜ್ ಮಾಡಲು, 125W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಜೊತೆಗೆ, 15W ವೈರ್‌ಲೆಸ್ ಚಾರ್ಜಿಂಗ್ ಮತ್ತು 8W ರಿವರ್ಸ್ ವೈರ್‌ಲೆಸ್ ಚಾರ್ಜಿಂಗ್ ತಂತ್ರಜ್ಞಾನ ಸಹ ಹೊಂದಿದೆ. ಈ ಫೋನ್ ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸಂವೇದಕ ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್ ಸಿಮ್ 5G, ವೈ-ಫೈ, ಬ್ಲೂಟೂತ್ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.