ಭಾರತೀಯ ಅಂಚೆ ಇಲಾಖೆ ವತಿಯಿಂದ ಬೃಹತ್ ಉದ್ಯೋಗ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ. ಅರ್ಹ ಅಭ್ಯರ್ಥಿಗಳಿಂದ ಖಾಲಿ ಇರುವ ಸಾವಿರಾರು ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೇಂದ್ರ ಸರ್ಕಾರಿ ವ್ಯಾಪ್ತಿಯಲ್ಲಿ ಉದ್ಯೋಗ ಪಡೆಯಬೇಕು ಎಂಬ ಆಸೆ ಇರುವ ಉದ್ಯೋಗಾಕಾಂಕ್ಷಿಗಳು ಕೂಡಲೇ ಅರ್ಜಿ ಸಲ್ಲಿಸಬೇಕು ಎಂದು ನೇಮಕಾತಿ ಅಧಿಸೂಚನೆ ಮಾಹಿತಿ ನೀಡಿದೆ.
ಭಾರತೀಯ ಅಂಚೆ ಕಚೇರಿಗಳಲ್ಲಿ ಬಹುಕಾರ್ಯ ಸಿಬ್ಬಂದಿ (MTS) ಬರೋಬ್ಬರಿ 18200 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ವಿವಿಧ ವಿಭಾಗಗಳಲ್ಲಿ ಈ ಹುದ್ದೆಗಳು ಖಾಲಿ ಇವೆ. ಕನಿಷ್ಠ ಎಸ್‌ಎಸ್‌ಎಲ್‌ಸಿ ಪೂರ್ಣಗೊಳಿಸಿದವರು ಅರ್ಜಿ ಸಲ್ಲಿಕೆಗೆ ಅರ್ಹರು ಎಂದು ಇಲಾಖೆ ತಿಳಿಸಿದೆ.
ಅರ್ಜಿ ಸಲ್ಲಿಕೆಗೂ ಮೊದಲು ಅಭ್ಯರ್ಥಿಗಳ ವಯೋಮಿತಿ, ಮಾಸಿಕ ವೇತನ, ಆರ್ಜಿ ಸಲ್ಲಿಕೆ ಕೊನೆಯ ದಿನಾಂಕ, ವಿದ್ಯಾರ್ಹತೆ, ನೇಮಕಾತಿಯ ಪ್ರಮುಖ ಮಾಹಿತಿ ಇಲ್ಲಿದೆ.
ನೇಮಕಾತಿಯ ಸಂಪೂರ್ಣ ಮಾಹಿತಿ
- ನೇಮಕಾತಿ ಸಂಸ್ಥೆ: ಭಾರತೀಯ ಅಂಚೆ ಇಲಾಖೆ
- ಹುದ್ದೆ ಹೆಸರು: ಬಹುಕಾರ್ಯ ಸಿಬ್ಬಂದಿ (MTS)
- ಒಟ್ಟು ಹುದ್ದೆಗಳು: 18,200 ಹುದ್ದೆಗಳು
- ಪೋಸ್ಟಿಂಗ್: ಭಾರತ
- ಅರ್ಜಿ ಸಲ್ಲಿಕೆ ಕೊನೆ ದಿನಾಂಕ: ಜನವರಿ 28
- ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್ ಮೂಲಕ
ಶೈಕ್ಷಣಿಕ ಅರ್ಹತೆ
ಈ ಅಂಚೆ ಇಲಾಖೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ಪೂರ್ಣಗೊಳಿಸಿರಬೇಕು. ಸ್ಥಳೀಯ ಭಾಷೆ ಗೊತ್ತಿರುವ ಜೊತೆಗೆ ಕನಿಷ್ಠ ಕಂಪ್ಯೂಟರ್ ಜ್ಞಾನ ಇರಬೇಕು.
ಅರ್ಜಿ ಸಲ್ಲಿಕೆಗೆ ಬೇಕಾಗುವ ದಾಖಲೆಗಳು
* ಅಭ್ಯರ್ಥಿಗಳ SSLC ಅಂಕಪಟ್ಟಿ, ಪ್ರವೇಶ ಪತ್ರ
* ಪಾಸಪೋರ್ಟ್ ಅಳತೆಯ ಇತ್ತೀಚಿನ ಭಾವಚಿತ್ರ
* ಆಧಾರ್ ಗುರುತಿನ ಚೀಟಿ
* ಜಾತಿ ಪ್ರಮಾಣ ಪತ್ರ
* ಜನ್ಮ ಪ್ರಮಾಣ ಪತ್ರ
ವಯಸ್ಸಿನ ಮಿತಿ
ನೇಮಕಾತಿ ಅಧಿಸೂಚನೆಯಲ್ಲಿ ನೀಡಲಾದ ಮಾಹಿತಿ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಗರಿಷ್ಠ 18 ಹಾಗೂ ಗರಿಷ್ಠ 25 ವರ್ಷಗಳಾಗಿರಬೇಕು. ಜಾತಿ ಆಧಾರದಲ್ಲಿ ವಯೋಮಿತಿಯಲ್ಲಿ ಸಡಿಲಿಕೆ ಸಿಗಬಹುದು.
ಆಯ್ಕೆ ಪ್ರಕ್ರಿಯೆ- ಮಾಸಿಕ ವೇತನ ಎಷ್ಟು?
ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸು ಅಭ್ಯರ್ಥಿಗಳನ್ನು ನಿಯಮಾನುಸಾರವಾಗಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಆಯ್ಕ ಆಗುವವರಿಗೆ ಮಾಸಿಕವಾಗಿ 15000 ರೂಪಾಯಿಂದ 29380 ರೂಪಾಯಿ ವೇತನ ನೀಡಲಾಗುತ್ತದೆ.
ಅರ್ಜಿ ಸಲ್ಲಿಕೆ ಹೇಗೆ, ವಿಧಾನ ತಿಳಿಯಿರಿ
ಅಭ್ಯರ್ಥಿಗಳು ಜನವರಿ 28ರೊಳಗೆ ಅಂಚೆ ಇಲಾಖೆ ಅಧಿಕೃತ ಜಾಲತಾಣ https://www.indiapost.gov.in/ ಗೆ ಭೇಟಿ ನೀಡಬೇಕು. ಇಲ್ಲಿ ನೋಂದಾಯಿಸಿಕೊಂಡು ಅಗತ್ಯ ದಾಖಲೆಗಳ ಸಮೇತವಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಅಧಿಸೂಚನೆ ಓದಿಕೊಳ್ಳಬೇಕು.