e-Office: ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳಿಗೂ ಇ-ಆಫಿಸ್‌ ವ್ಯವಸ್ಥೆ ವಿಸ್ತರಣೆ; ಯಾವಾಗಿನಿಂದ

e-Office: ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳಿಗೂ ಇ-ಆಫಿಸ್‌ ವ್ಯವಸ್ಥೆ ವಿಸ್ತರಣೆ; ಯಾವಾಗಿನಿಂದ

e-Office: ಈಗಾಗಲೇ ಇ-ವ್ಯವಸ್ಥೆಯನ್ನು ತಲ್ಲೂಕು ಮಟ್ಟದ ಕಚೇರಿಗಳಿಗೂ ವಿಸ್ತರಣೆ ಮಾಡಲಾಗಿತ್ತು. ಇದೀಗ ಇದನ್ನು ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳಿಗೂ ವಿಸ್ತರಣೆ ಮಾಡಲಾಗುತ್ತದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹಾಗಾದರೆ ಯಾವಾಗಿನಿಂದ ಇದು ಜಾರಿಗೆ ಬರಲಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.

ಈ ಬಾರಿಯ ಅಂದರೆ 2025ರ ಆರ್ಥಿಕ ವರ್ಷದ ಅಂತ್ಯದಲ್ಲಿ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಇ-ಆಫೀಸ್ ವ್ಯವಸ್ಥೆಯನ್ನು ವಿಸ್ತರಣೆ ಮಾಡಲಾಗುವುದು ಎಂದು ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಹೇಳಿದ್ದಾರೆ.

E-Office System Expansion to All Gram Panchayats in State

ರಾಜ್ಯ ಸರ್ಕಾರ ರೈತರ ಪರವಾಗಿದೆ ಎನ್ನುವುದಕ್ಕೆ ಹಲವು‌ ನಿದರ್ಶನಗಳಿವೆ. ಸಿಎಂ ಸಿದ್ದರಾಮಯ್ಯ ಅವರು ರೈತರ ಹಿತಾಸಕ್ತಿಗಾಗಿ ಹಾಗೂ ರೈತರು ಸರ್ಕಾರಿ ಕಛೇರಿಗೆ ಅಲೆದಾಡುವ ಸಮಯ ಉಳಿಸುವುದಕ್ಕಾಗಿ ಇ-ಆಡಳಿತ ವ್ಯವಸ್ಥೆಯನ್ನು ಮತ್ತಷ್ಟೂ ಚುರುಕುಗೊಳಿಸಿದೆ. ಇದರಿಂದ ಅನ್ನದಾತರಿಗೆ ಅನುಕೂಲ ಆಗಲಿದೆ ಎಂದು ಹೇಳಿದರು.

ಇ-ಆಡಳಿತ ಇಲಾಖೆಯು ರಾಜ್ಯ ದತ್ತಾಂಶ ಕೇಂದ್ರ, ರಾಜ್ಯವ್ಯಾಪಿ ವಲಯ ಜಾಲ, ನೇರ ನಗದು ವರ್ಗಾವಣೆ ವೇದಿಕೆ, ಕುಟುಂಬ, ರೈತರ ದತ್ತಾಂಶ, ಸೇವಾ ಸಿಂಧು, ಸಕಾಲ, ಕರ್ನಾಟಕ ಒನ್, ಗ್ರಾಮ ಒನ್ ಮುಂತಾದ ನಿರ್ಣಾಯಕ ಸೇವೆಗಳನ್ನು ನಿರ್ವಹಿಸುತ್ತಿವೆ. ಸರ್ಕಾರ ಇಂತಹ ಪ್ರಮುಖ ಸಾಧನೆಗಳನ್ನು ಇ-ಆಡಳಿತ ಇಲಾಖೆಯ ಅಡಿಯಲ್ಲಿ ಬರುವಂತೆ ಈ‌ ವರ್ಷದಿಂದ ಜಾರಿ ಮಾಡಿದೆ ಎಂದರು.

ಸರ್ಕಾರ ಇ-ಆಫೀಸ್ ವ್ಯವಸ್ಥೆಯನ್ನು ಎಲ್ಲಾ ತಾಲ್ಲೂಕು ಮಟ್ಟದ ಕಚೇರಿಗಳು, 395 ನಾಡಕಚೇರಿಗಳು ಮತ್ತು 427 ಗ್ರಾಮ ಪಂಚಾಯಿತಿಗಳಿಗೆ ವಿಸ್ತರಿದೆ. ಈ ಬಾರಿಯ ಆರ್ಥಿಕ ವರ್ಷದ ಅಂತ್ಯದಲ್ಲಿ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಈ ವ್ಯವಸ್ಥೆಯನ್ನು ಸರ್ಕಾರ ವಿಸ್ತರಣೆ ಮಾಡಲಾಗುವುದ ಎಂದು ತಿಳಿಸಿದ್ದಾರೆ.

ಜೊತೆಗೆ ಸಿಎಂ ಸಿದ್ದರಾಮಯ್ಯ ಅವರು ಸರ್ಕಾರಿ ಇಲಾಖೆಗಳಿಗೆ ಸಂಭಂದಿಸಿದಂತೆ ಇ-ಪ್ರೊಕ್ಯೂರ್ಮೆಂಟ್ ಪೋರ್ಟಲ್ ಜಾರಿ ಮಾಡಿದೆ. ಇ-ಪ್ರೊಕ್ಯೂರ್ಮೆಂಟ್ ಪೋರ್ಟಲ್‌ನಲ್ಲಿ ಎಲ್ಲಾ ಸರ್ಕಾರಿ ಇಲಾಖೆಗಳು, ಮಂಡಳಿಗಳು ಮತ್ತು ನಿಗಮಗಳಿಗೆ ಸಂಬಂಧಿಸಿದ ಎಲ್ಲಾ ಟೆಂಡರ್ ಸಂಬಂಧಿತ ಚಟುವಟಿಕೆಗಳನ್ನು ನಿರ್ವಹಿಸಲು ಅವಕಾಶ ಕಲ್ಪಿಸಲಾಗಿದೆ. ಸಿಎಂ ಸಿದ್ದರಾಮಯ್ಯನವರು ಇ-ಆಡಳಿತ ಇಲಾಖೆಯಡಿಯಲ್ಲಿ ಹಲವು ಯೋಜನೆ ಜಾರಿ ಮಾಡುವ ಮೂಲಕ ನಾಡಿನ ರೈತರ ಹಿತಾಸಕ್ತಿ ಕಾಪಾಡುತ್ತಿದ್ದಾರೆ ಎಂದರು.

ಆಸ್ತಿ ಮಾಲೀಕರಿಗೆ ಗುಡ್‌ ನ್ಯೂಸ್‌: ಬೆಂಗಳೂರಿನಲ್ಲಿ ಆಸ್ತಿಗಳಿಗೆ ಸಂಬಂಧಿಸಿದಂತೆ ಆಗಾಗ ಅಪ್ಡೇಟ್‌ ಮಾಹಿತಿಗಳು ಹೊರಬೀಳುತ್ತಲೇ ಇರುತ್ತವೆ. ಇದೀಗ ಬೆಂಗಳೂರು ಬಿಟ್ಟು ರಾಜ್ಯದ ಇತರ ಸಂಸ್ಥೆಗಳ ನಗರ ಪ್ರದೇಶ ವ್ಯಾಪ್ತಿಯಲ್ಲಿ ಇ ಖಾತಾ ಹೊಂದಿಲ್ಲದ 30ರಿಂದ 32 ಲಕ್ಷ ಆಸ್ತಿಗಳಿಗೆ ಬಿ-ಖಾತಾ ನೀಡಲು ತೀರ್ಮಾನ ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಹೇಳಿದರು.

ಸ್ಥಳೀಯ ಸಂಸ್ಥೆಗಳ ನಗರ ಪ್ರದೇಶಗಳ ವ್ಯಾಪ್ತಿಯಲ್ಲಿ 55 ಲಕ್ಷ ನಿವೇಶನಗಳು ಇವೆ. ಈ ಪೈಕಿ 22 ಲಕ್ಷ ಆಸ್ತಿಗಳ ಮಾಲೀಕರು ಇ-ಖಾತಾ ಮಾಡಿಸಿದ್ದಾರೆ. ಆದರೆ, 30ರಿಂದ 32 ಲಕ್ಷ ಸ್ವತ್ತುಗಳಿಗೆ ಯಾವುದೇ ರೀತಿಯ ಇ-ದಾಖಲೆಗಳಿಲ್ಲ ಎಂದು ಹೇಳಿದರು. ಸಿಎಂ ಸಿದ್ದರಾಮಯ್ಯ ಅವರು ಇದೇ ಜನವರಿ 7ರಂದು ಸಭೆ ನಡಡಸಿ ದಾಖಲೆ ಇಲ್ಲದ ನಿವೇಶನಗಳ ಮಾಲೀಕರಿಗೆ ಇ-ಆಸ್ತಿ ನಮೂದಿಸಿ ಬಿ-ಖಾತೆಗೆ ಸಮಾನಾಂತರ ದಾಖಲೆ ನೀಡಬೇಕೆಂದು ಸೂಚನೆ ನೀಡಿದ್ದಾರೆ.

ಆದ್ದರಿಂದ ಮುಖ್ಯಕಾರ್ಯದರ್ಶಿಯವರ ಸಮ್ಮುಖದಲ್ಲಿ ಜಿಲ್ಲಾಧಿಕಾರಿಗಳ ಸಭೆ ನಡೆಲಾಗಿದೆ. ಫೆಬ್ರವರಿ 10ರೊಳಗೆ ಸುತ್ತೋಲೆ ಹೊರಡಿಸಿ, ಬಾಕಿಯಿರುವ ಆಸ್ತಿಗಳಿಗೆ ಗರಿಷ್ಠ 3 ತಿಂಗಳೊಳಗೆ ಅಭಿಯಾನ ಮಾದರಿಯಲ್ಲಿ ಬಿ-ಖಾತಾ ಮಾಡಿಸಿಕೊಡಬೇಕೆಂದು ಸೂಚಿಸಲಾಗಿದೆ ಎಂದರು.

ಅನಧಿಕೃತ ನಿವೇಶನಗಳ ಬಗ್ಗೆ ಸುಪ್ರೀಂ ಕೋರ್ಟ್‌ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ. ಅದನ್ನು ಪಾಲಿಸಬೇಕಾದ ತುರ್ತು ಎದುರಾಗಿದೆ. ಆದ್ದರಿಂದ ಎಷ್ಟು ಸ್ವತ್ತುಗಳಿವೆ ಎಂದು ಗುರುತಿಸಿ ಸರ್ಕಾರವೇ ಬಿ-ಖಾತಾ ಮಾಡಿಕೊಡಲಿದೆ. ಬಳಿಕ ರಾಜ್ಯದಲ್ಲಿ ಬಿ-ಖಾತಾ ವ್ಯವಸ್ಥೆ ಇರುವುದಿಲ್ಲ. ಎ-ಖಾತಾ ಮಾತ್ರ ಇರಲಿದ್ದು, ಮುಂದಿನ ದಿನಗಳಲ್ಲಿ ವ್ಯಾಪ್ತಿಯಲ್ಲಿ ಈ ಅಭಿಯಾನ ಮುಗಿಯುತ್ತಿದ್ದಂತೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲೂ ಇದೇ ಮಾದರಿ ಆರಂಭಿಸಲಾಗುವುದು ಎಂದು ಇತ್ತೀಚೆಗಷ್ಟೇ ತಿಳಿಸಿದ್ದರು.


Post a Comment

Previous Post Next Post

Top Post Ad

CLOSE ADS
CLOSE ADS
×