PMEGP Scheme How to apply? – ಕೇಂದ್ರ ಸರ್ಕಾರವು ಹೊಸದಾಗಿ ಸ್ವಂತ ಉದ್ಯಮ ಆರಂಭಿಸುವ ಯುವ ಜನತೆಗೆ ಅನೇಕ ರೀತಿಯಲ್ಲಿ ಸಹಾಯ ಮಾಡುತ್ತದೆ. ಆದರೆ ಹಲವು ಜನರಿಗೆ ಈ ಯೋಜನೆಗಳ ಮಾಹಿತಿ ತಿಳಿದಿರುವುದೇ ಇಲ್ಲ. ಈ ಒಂದು ಲೇಖನದಲ್ಲಿ ಕೇಂದ್ರ ಸರ್ಕಾರದ ಒಂದು ಉತ್ತಮ ಯೋಜನೆಯ ಬಗ್ಗೆ ತಿಳಿಸಲಿದ್ದೇವೆ.
ಯಾವುದು ಈ ಯೋಜನೆ?
ಈ ಯೋಜನೆಯ ಹೆಸರು ” ಪ್ರಧಾನ ಮಂತ್ರಿ ಉದ್ಯೋಗ ಸೃಷ್ಟಿ ಕಾರ್ಯಕ್ರಮ “. ಈ ಯೋಜನೆಯನ್ನು 2008 ಆಗಸ್ಟ್ 15ರಂದು ಅಂದಿನ ಪ್ರಧಾನ ಮಂತ್ರಿ ಮನಮೋಹನ ಸಿಂಗ್ ಅವರು ಜಾರಿಗೋಳಿಸಿದ್ದರು. ಈ ಯೋಜನೆಯ ಮುಖ್ಯ ಉದ್ದೇಶವೇನೆಂದರೆ ಹೊಸದಾಗಿ ಸ್ವಂತ ಉದ್ಯಮ ಆರಂಭಿಸುವವರಿಗೆ ಆರ್ಥಿಕ ಸಹಾಯ ಮಾಡುವುದಾಗಿದೆ.
ಈ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಸಂಬಂಧಪಟ್ಟ ಬ್ಯಾಂಕಗಳು ನಿಮ್ಮ ಯೋಜನಾ ಮೊತ್ತದ ಗರಿಷ್ಟ 90% ನಿಂದ 95% ವರೆಗಿನ ಹಣವನ್ನು ಮಂಜೂರು ಮಾಡುತ್ತವೆ. ನೀವು ಪಡೆದ ಸಾಲದ ಮೊತ್ತದ ಮೇಲೆ PMEGP ಯೋಜನೆಯ ಅಡಿಯಲ್ಲಿ 15% ನಿಂದ 35% ನವರೆಗೆ ಸಬ್ಸಿಡಿಯನ್ನು ಕೇಂದ್ರ ಸರ್ಕಾರ ನೀಡುತ್ತದೆ.
ಹಾಗಿದ್ದರೆ ಈ ಯೋಜನೆಗೆ ಅರ್ಜಿ ಯಾರು ಸಲ್ಲಿಸಬಹುದು? ಹೇಗೆ ಅರ್ಜಿ ಸಲ್ಲಿಸಬೇಕು? ಯಾವ ದಾಖಲೆಗಳು ಬೇಕು ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.
ಅರ್ಜಿ ಸಲ್ಲಿಸಲು ಯಾರು ಅರ್ಹರು?
ಕನಿಷ್ಠ 8ನೇ ತರಗತಿ ಪಾಸಾದಂತಹ 18 ವರ್ಷದ ಮೇಲಿನ ಭಾರತೀಯ ಪ್ರಜೆಗಳಾಗಿರಬೇಕು. ಈ ಮೊದಲು ಉದ್ಯಮ ಆರಂಭಿಸಲು ಸರ್ಕಾರದಿಂದ ಯಾವುದೇ ರೀತಿಯ ಲಾಭ ಪಡೆದುಕೊಂಡಿರಬಾರದು.
ಅರ್ಜಿ ಸಲ್ಲಿಸಲು ಬೇಕಾಗುವಂತಹ ಅವಶ್ಯಕ ದಾಖಲೆಗಳು :
ಈ ಯೋಜನೆಗೆ ಅರ್ಜಿ ಸಲ್ಲಿಸಲು ನೀವು ಅರ್ಹರಿದ್ದರೆ ಈ ಕೆಳಗಿನ ದಾಖಲಾತಿಗಳನ್ನು ಸಿದ್ಧಪಡಿಸಿ ಇಟ್ಟುಕೊಳ್ಳಿ.
1. ಪಾಸ್ಪೋರ್ಟ್ ಅಳತೆಯ ಭಾವಚಿತ್ರ
2. ಶೈಕ್ಷಣಿಕ ಪ್ರಮಾಣಪತ್ರ
3. ವಿವರವಾದ ಯೋಜನಾ ವರದಿ
4. ಜಾತಿ ಪ್ರಮಾಣಪತ್ರ
5. ಗ್ರಾಮೀಣ ಪ್ರಮಾಣ ಪತ್ರ (ಅನ್ವಯವಾದಲ್ಲಿ ಮಾತ್ರ)
ಅರ್ಜಿ ಹೇಗೆ ಸಲ್ಲಿಸಬೇಕು?
ಅರ್ಹತೆ ಹೊಂದಿರುವ ಅಭ್ಯರ್ಥಿಗಳು PMEGP ಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ, ನೋಂದಣಿ ಮಾಡಿಕೊಂಡು ಬೇಕಾಗುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅವಶ್ಯಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ ಅರ್ಜಿ ಸಲ್ಲಿಸಬೇಕು.
PMEGP ಅಧಿಕೃತ ಜಾಲತಾಣ –
https://www.kviconline.gov.in/pmegpeportal/pmegphome/index.jsp