Post office recruitment-ಅಂಚೆ ಇಲಾಖೆಯಲ್ಲಿ ಬರೋಬ್ಬರಿ 21,413 ಹುದ್ದೆಗಳಿಗೆ ನೇಮಕಾತಿಗೆ ಅರ್ಜಿ

Post office recruitment-ಅಂಚೆ ಇಲಾಖೆಯಲ್ಲಿ ಬರೋಬ್ಬರಿ 21,413 ಹುದ್ದೆಗಳಿಗೆ ನೇಮಕಾತಿಗೆ ಅರ್ಜಿ

Post office recruitment:-ಭಾರತೀಯ ಅಂಚೆ ಇಲಾಖೆಯಿಂದ ನಿರುದ್ಯೋಗಿ ಯುವಕ/ಯುವತಿಯಿರಿಗೆ ಭರ್ಜರಿ ಸಿಹಿ ಸುದ್ದಿಯನ್ನು ನೀಡಿದ್ದು ಅಂಚೆ ಇಲಾಖೆಯಲ್ಲಿ(Post office recruitment-2025) ಖಾಲಿಯಿರುವ 21,413 ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಪ್ರಸ್ತುತ ಅಂಚೆ ಇಲಾಖೆಯಿಂದ(Post office recruitment) ಅರ್ಜಿ ಆಹ್ವಾನಿಸಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಅರ್ಹತೆಗಳೇನು? ಯಾವೆಲ್ಲ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ? ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ದಾಖಲಾತಿಗಳು, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ, ನಿಮ್ಮ ಜಿಲ್ಲೆಯಲ್ಲಿ ಖಾಲಿಯಿರುವ ಹುದ್ದೆಗಳ ಮಾಹಿತಿಯನ್ನು ಪಡೆಯುವ ವಿಧಾನ, ಸೇರಿದಂತೆ ಎಲ್ಲಾ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ.

Eligibility for gramin dak sevak-ಅರ್ಜಿ ಸಲ್ಲಿಸಲು ಅರ್ಹತೆಗಳು:

1) ಅರ್ಜಿದಾರರು ಭಾರತೀಯ ನಿವಾಸಿಯಾಗಿರಬೇಕು.

2) ಅರ್ಜಿದಾರರು 10ನೇ ತರಗತಿಯನ್ನು ಪಾಸಾಗಿರಬೇಕು.

3) ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

4) ಅರ್ಜಿದಾರರು ದ್ವಿಚಕ್ರ ವಾಹನವನ್ನು ಓಡಿಸುವ ಸಾಮರ್ಥ್ಯ ಹೊಂದಿರಬೇಕು.

5) ಅರ್ಜಿದಾರರ ವಯಸ್ಸು 18 ರಿಂದ 40 ವರ್ಷದ ಒಳಗಿರಬೇಕು.

Post office recruitment Details-ಯಾವೆಲ್ಲ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ?

ಶಾಖಾ ಪೋಸ್ಟ್ ಮಾಸ್ಟರ್(Branch Postmaster), ಸಹಾಯಕ ಶಾಖಾ ಪೋಸ್ಟ್ ಮಾಸ್ಟರ್(Assistant Branch Postmaster) ಮತ್ತು ಡಾಕ್ ಸೇವಕ(Dak Sevaks) ಈ ಮೂರು ಹುದ್ದೆ ಸೇರಿ ಒಟ್ಟು 21,413 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

Application Dates-ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಆರಂಭ- 10 ಫೆಬ್ರವರಿ 2025

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- 03 ಮಾರ್ಚ್ 2025

Documents For Application-ಅರ್ಜಿ ಸಲ್ಲಿಸಲು ದಾಖಲಾತಿಗಳು:

1) ಅರ್ಜಿದಾರರ ಆಧಾರ್ ಕಾರ್ಡ ಪ್ರತಿ

2) SSLC ಅಂಕಪಟ್ಟಿ

3) ಪೋಟೋ

4) ಮೊಬೈಲ್ ನಂಬರ್

Post Office Recruitment Online Application Link- ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ:

ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳನ್ನು ಸಿದ್ದಪಡಿಸಿಕೊಂಡು ಈ ಕೆಳಗೆ ತಿಳಿಸಿರುವ ವಿಧಾನವನ್ನು ಅನುಸರಿಸಿ ಅಧಿಕೃತ ಅಂಚೆ ಇಲಾಖೆಯ ವೆಬ್ಸೈಟ್ ಅನ್ನು ಪ್ರವೇಶ ಮಾಡಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

Step-1: ಈ Apply Now ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ ಪೋಸ್ಟ್ ಅಪೀಸ್ ತಂತ್ರಾಂಶವನ್ನು ಪ್ರವೇಶ ಮಾಡಬೇಕು.

Step-2: ತದನಂತರ ಈ ಪುಟದ ಮೇಲೆ ಕಾಣಿಸುವ “Stage 1.Registration” ಆಯ್ಕೆಯ ಮೇಲೆ ಕ್ಲಿಕ್ ಮಾಡಿ ನಿಮ್ಮ 10 ಅಂಕಿಯ ಮೊಬೈಲ್ ನಂಬರ್ ಅನ್ನು ಹಾಕಿ ಇತರೆ ವಿವರವನ್ನು ಭರ್ತಿ ಮಾಡಿ ಅರ್ಜಿಯನ್ನು ಹಾಕಲು ನೋಂದಣಿಯನ್ನು ಮಾಡಿಕೊಳ್ಳಬೇಕು.

Step-3: ನಂತರ ಮುಖಪುಟ ಭೇಟಿ ಮಾಡಿ “Stage 2.Apply Online” ಈ ಆಯ್ಕೆಯ ಮೇಲೆ ಕ್ಲಿಕ್ ಮಾಡಿ “Apply” ಬಟನ್ ಮೇಲೆ ಕ್ಲಿಕ್ ಮಾಡಿ ನಿಮ್ಮ Registration Number ಮತ್ತು Circle Applying for ಈ ಎರಡು ಆಯ್ಕೆಯನ್ನು ಸೆಲೆಕ್ಟ್ ಮಾಡಿಕೊಂಡು “Submit” ಬಟನ್ ಮೇಲೆ ಕ್ಲಿಕ್ ಮಾಡಿದರೆ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ ಇಲ್ಲಿ ಎಲ್ಲಾ ವಿವರವನ್ನು ಭರ್ತಿ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.

District Wise Vacancy Details-ನಿಮ್ಮ ಜಿಲ್ಲೆಯಲ್ಲಿ ಖಾಲಿಯಿರುವ ಹುದ್ದೆಗಳ ಮಾಹಿತಿಯನ್ನು ಪಡೆಯುವ ವಿಧಾನ:

Step-1: ಮೊದಲಿಗೆ CLICK HERE ಇಲ್ಲಿ ಕ್ಲಿಕ್ ಮಾಡಿ ಅಧಿಕೃತ ಅಂಚೆ ಇಲಾಖೆಯ ವೆಬ್ಸೈಟ್ ಅನ್ನು ಪ್ರವೇಶ ಮಾಡಬೇಕು.

Step-2: ಇದಾದ ಬಳಿಕ ಈ ಪೇಜ್ ನಲ್ಲಿ ಒಟ್ಟು 23 ರಾಜ್ಯಗಳ ಹೆಸರುಗಳು ಗೋಚರಿಸುತ್ತವೆ ಇಲ್ಲಿ “Karnataka” ರಾಜ್ಯದ ಹೆಸರಿನ ಮೇಲೆ ಕ್ಲಿಕ್ ಮಾಡಿದರೆ ಜಿಲ್ಲೆಗಳ ಹೆಸರುಗಳು ಕಾಣಿಸುತ್ತವೆ ಇಲ್ಲಿ ಜಿಲ್ಲೆಗಳ ಪಟ್ಟಿ ತೋರಿಸುತ್ತದೆ ಕೆಳಗೆ Select Division ಆಯ್ಕೆಯ ಮೇಲೆ ಕ್ಲಿಕ್ ಮಾಡಿ Division ಆಯ್ಕೆ ಮಾಡಿಕೊಂಡು “View Post” ಬಟನ್ ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಜಿಲ್ಲೆಯಲ್ಲಿ ಖಾಲಿಯಿರುವ ಹುದ್ದೆಗಳ ಮಾಹಿತಿಯನ್ನು ನೋಡಬಹುದು.

Post office recruitment notification-ಅಂಚೆ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ- Download Now

Post office Vacancy Details-ಖಾಲಿ ಹುದ್ದೆಗಳ ಮಾಹಿತಿಯನ್ನು ಪಡೆಯಲು ಇಲ್ಲಿ ಕ್ಲಿಕ್ ಮಾಡಿ- Download Now

Post a Comment

Previous Post Next Post

Top Post Ad

CLOSE ADS
CLOSE ADS
×