ಅತಿ ಕಡಿಮೆ ಬೆಲೆ.. 330 ಕಿ.ಮೀವರೆಗೆ ಮೈಲೇಜ್, ಮಧ್ಯಮ ವರ್ಗದವರಿಗೆ ಈ ಬೈಕ್‌ಗಳು ಹೆಚ್ಚು ಸೂಕ್ತ!

ಭಾರತದಲ್ಲಿ ಮಧ್ಯಮ ವರ್ಗದ ಜನರೇ ಅತಿ ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿದ್ದಾರೆ. ಬೆಂಗಳೂರು, ನವದೆಹಲಿ ಮತ್ತು ಮುಂಬೈಯಂತಹ ಮಹಾನಗರಗಳಲ್ಲಿ ಕೆಲಸಕ್ಕೆ ಹೋಗಲು ಮೋಟಾರ್‌ಸೈಕಲ್‌ಗಳು ತೀರಾ ಅನಿವಾರ್ಯವಾಗಿವೆ. ನೀವು ದಿನಬಳಕೆಗೆ ಹೊಚ್ಚ ಹೊಸ ಬೈಕ್‌ವೊಂದನ್ನು ಖರೀದಿ ಮಾಡಲು ಆಲೋಚಿಸಿದ್ದೀರಾ.. ಹಾಗಾದರೆ, ಬಜಾಜ್ ಫ್ರೀಡಂ, ಟಿವಿಎಸ್ ರೇಡಿಯನ್ ಹಾಗೂ ಹೋಂಡಾ ಶೈನ್ ಮೋಟಾರ್‌ಸೈಕಲ್‌ಗಳು ಉತ್ತಮ ಆಯ್ಕೆಯಾಗಲಿವೆ. ನಾವಿಲ್ಲಿ ಈ ಬೈಕ್‌ಗಳ ವಿಶೇಷತೆ ಕುರಿತಂತೆ ಒಂದಷ್ಟು ವಿವರಗಳನ್ನು ತಿಳಿಸಿಕೊಟ್ಟಿದ್ದೇವೆ.

ಮೊದಲಿಗೆ ಬಜಾಜ್ ಫ್ರೀಡಂ 125 (Bajaj Freedom 125) ಬಗ್ಗೆ ಮಾತನಾಡೋಣ. ಇದೊಂದು ಸಿಎನ್‌ಜಿ ಮೋಟಾರ್‌ಸೈಕಲ್‌ ಆಗಿದೆ. ರೂ.90,272 ರಿಂದ ರೂ.1.10 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 125 ಸಿಸಿ ಪೆಟ್ರೋಲ್/ ಸಿಎನ್‌ಜಿ ಎಂಜಿನ್‌ ಒಳಗೊಂಡಿದ್ದು, 5-ಸ್ಪೀಡ್ ಗೇರ್‌ಬಾಕ್ಸ್‌ ಆಯ್ಕೆಯನ್ನು ಹೊಂದಿದೆ. ಪೆಟ್ರೋಲ್ ಮೋಡ್‌ನಲ್ಲಿ 130 ಕಿಲೋಮೀಟರ್, ಸಿಎನ್‌ಜಿ ಮೋಡ್‌ನಲ್ಲಿ 200 ಕಿಲೋಮೀಟರ್ ಸೇರಿ ಒಟ್ಟಿಗೆ 330 ಕಿಲೋಮೀಟರ್ ಮೈಲೇಜ್ ನೀಡುತ್ತದೆ.

ಈ ಬಜಾಜ್ ಫ್ರೀಡಂ 125 ಬೈಕ್‌ ಎಲ್ಇಡಿ ಹೆಡ್‌ಲೈಟ್‌, ಬ್ಲೂಟೂತ್ ಕನೆಕ್ಟಿವಿಟಿ ಮತ್ತು ಎಲ್‌ಸಿಡಿ ಡಿಸ್‌ಪ್ಲೇ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಕೆರಿಬಿಯನ್ ಬ್ಲೂ, ಎಬೊನಿ ಬ್ಲ್ಯಾಕ್-ಗ್ರೇ, ಪ್ಯೂಟರ್ ಗ್ರೇ-ಬ್ಲ್ಯಾಕ್ ಮತ್ತು ರೇಸಿಂಗ್ ರೆಡ್ ಸೇರಿದಂತೆ ಹಲವು ಬಣ್ಣಗಳೊಂದಿಗೆ ದೊರೆಯುತ್ತದೆ. ಸುರಕ್ಷತೆಯ ದೃಷ್ಟಿಯಿಂದ ಡಿಸ್ಕ್ & ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ.

ಟಿವಿಎಸ್ ರೇಡಿಯನ್ (TVS Radeon) ಬೈಕ್ ಕುರಿತಂತೆ ಹೇಳುವುದಾದರೆ, ಇದು ರೂ.70,573 ರಿಂದ ರೂ.84,150 ಎಕ್ಸ್-ಶೋರೂಂ ದರವನ್ನು ಒಳಗೊಂಡಿದೆ. 109.7 ಸಿಸಿ ಸಿಂಗಲ್-ಸಿಲಿಂಡರ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. 8.08 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 8.7 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಜೊತೆಗೆ 4-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಪಡೆದಿದೆ.

ನೂತನ ಟಿವಿಎಸ್ ರೇಡಿಯನ್ ಮೋಟಾರ್‌ಸೈಕಲ್‌ ಡುಯಲ್ ಪಾಡ್ ಅನಲಾಗ್ ಇನ್ಸ್ಟ್ರುಮೆಂಟ್ ಕನ್ಸೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಬ್ಲೂ, ಮೆಟಲ್ ಬ್ಲ್ಯಾಕ್, ರಾಯಲ್ ಪರ್ಪಲ್ ಮತ್ತು ಟೈಟಾನಿಯಂ ಗ್ರೇ ಒಳಗೊಂಡಂತೆ ಹಲವು ಬಣ್ಣಗಳೊಂದಿಗೂ ದೊರೆಯುತ್ತದೆ. ಸುರಕ್ಷತೆಗಾಗಿ ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.

ಕಡೆಯಾದಾಗಿ ಹೋಂಡಾ ಶೈನ್ 100 (Honda Shine 100) ಬೈಕ್ ಬಗ್ಗೆ ಮಾತನಾಡವುದಾದರೆ, ಇದು ರೂ.68,600 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. 98.98 ಸಿಸಿ ಪೆಟ್ರೋಲ್ ಎಂಜಿನ್ ಹೊಂದಿದ್ದು, 7.3 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 8.05 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 4-ಸ್ಪೀಡ್ ಗೇರ್‌ಬಾಕ್ಸ್‌ ಆಯ್ಕೆಯನ್ನು ತನ್ನದಾಗಿಸಿಕೊಂಡಿದೆ.

ಈ ಹೋಂಡಾ ಶೈನ್ ಮೋಟಾರ್‌ಸೈಕಲ್‌ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಎಲೆಕ್ಟ್ರಿಕ್ ಸ್ಟಾರ್ಟರ್, ಸೈಡ್-ಸ್ಟ್ಯಾಂಡ್ ಎಂಜಿನ್ ಕಟ್-ಆಫ್, ಅಲಾಯ್ ವೀಲ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಬ್ಲ್ಯಾಕ್ ವಿತ್ ರೆಡ್, ಬ್ಲ್ಯಾಕ್ ವಿತ್ ಗೋಲ್ಡ್, ಬ್ಲ್ಯಾಕ್ ವಿತ್ ಬ್ಲೂ, ಬ್ಲ್ಯಾಕ್ ವಿತ್ ಗ್ರೀನ್ ಒಳಗೊಂಡಂತೆ ಹಲವು ಬಣ್ಣಗಳೊಂದಿಗೂ ಸಿಗುತ್ತದೆ. ಸುರಕ್ಷತೆಯ ದೃಷ್ಟಿಯಿಂದ ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Previous Post Next Post