BMTC Free Driving Training – ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಅರ್ಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವರ್ಗದ ಅಭ್ಯರ್ಥಿಗಳಿಗೆ ಉಚಿತ ವಸತಿ ಮತ್ತು ಊಟದೊಂದಿಗೆ ಲಘು ಮತ್ತು ಭಾರಿ ವಾಹನ ಚಾಲನ ತರಬೇತಿಯನ್ನು ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ಸರ್ಕಾರ ಪರಿಶಿಷ್ಟ ಜಾತಿಯ ಉಪ ಯೋಜನೆ ಮತ್ತು ಗಿರಿಜನ ಉಪ ಯೋಜನೆಯ ಅಡಿಯಲ್ಲಿ ಈ ಒಂದು ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಅರ್ಹರು ಬೇಗನೆ ಅರ್ಜಿ ಸಲ್ಲಿಸಿ. ಏಕೆಂದರೆ ಮೊದಲು ಬಂದವರಿಗೆ ಮೊದಲ ಆದ್ಯತೆ ನೀಡಲಾಗುತ್ತಿದ್ದು ಇದರ ಸದುಪಯೋಗ ಪಡಿಸಿಕೊಳ್ಳಿ.
ಲಘು ವಾಹನಾ ಚಾಲನಾ ತರಬೇತಿಗೆ ಅರ್ಜಿ ಸಲ್ಲಿಸಲು ಅರ್ಹತೆಗಳು :
ಲಘು ವಾಹನ ಚಾಲನಾ ತರಬೇತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ರಿಂದ 45 ವರ್ಷದ ವಯೋಮಿತಿಯಲ್ಲಿರಬೇಕು ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವರ್ಗಕ್ಕೆ ಸೇರಿದವರಾಗಿರಬೇಕು.
ಭಾರಿ ವಾಹನ ಚಾಲನಾ ತರಬೇತಿಗೆ ಅರ್ಜಿ ಸಲ್ಲಿಸಲು ಅರ್ಹತೆಗಳು :
ಉಚಿತ ಭಾರಿ ವಾಹನ ಚಾಲನಾ ತರಬೇತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 20ರಿಂದ ಗರಿಷ್ಠ 45 ವರ್ಷದ ಒಳಗಿರಬೇಕು. ಇದರ ಜೊತೆಗೆ ಲಘು ವಾಹನ ಚಾಲನ ಅನುಜ್ಞಾಪತ್ರವನ್ನು ಪಡೆದು ಅರ್ಜಿ ಸಲ್ಲಿಸುವ ದಿನಾಂಕಕ್ಕೆ ಕನಿಷ್ಠ ಒಂದು ವರ್ಷ ಪೂರ್ಣಗೊಂಡಿರಬೇಕು.
ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ದಾಖಲಾತಿಗಳು :
• ಅಭ್ಯರ್ಥಿಯ ಆಧಾರ್ ಕಾರ್ಡ್
• ಜಾತಿ ಪ್ರಮಾಣ ಪತ್ರ.
• 5 ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ
ಅರ್ಜಿ ಸಲ್ಲಿಕೆಯ ಮಾಹಿತಿ :
ಈ ಯೋಜನೆಗಾಗಿ ಅರ್ಜಿ ಸಲ್ಲಿಸುವ ಅರ್ಹ ಅಭ್ಯರ್ಥಿಗಳು ಸೇವಾ ಸಿಂದು ಪೋರ್ಟಲ್ ಗೆ ಭೇಟಿ ನೀಡಿ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಯಾವುದೇ ರೀತಿಯ ಹೆಚ್ಚಿನ ಮಾಹಿತಿ ಬೇಕಾದಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ.
ಅಧಿಕೃತ ಜಾಲತಾಣ –
https://sevasindhuservices.karnataka.gov.in
ಸಹಾಯವಾಣಿ ಸಂಖ್ಯೆಗಳು :
08022279954, 8792662814/ 8792662816