ಮಿಲಿಟರಿ ಶಾಲೆಯಲ್ಲಿ ಪ್ರವೇಶಾತಿಗೆ ಅರ್ಜಿ ಅಹ್ವಾನ : ಈ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು
MrJazsohanisharma

ಮಿಲಿಟರಿ ಶಾಲೆಯಲ್ಲಿ ಪ್ರವೇಶಾತಿಗೆ ಅರ್ಜಿ ಅಹ್ವಾನ : ಈ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು

Application for RIMC Admission 2025 – ಉತ್ತರಾಖಂಡ ರಾಜ್ಯದ ಡೆಹರಾಡುನಲ್ಲಿರುವಂತಹ ರಾಷ್ಟ್ರೀಯ ಮಿಲಿಟರಿ ಶಾಲೆಯಲ್ಲಿ 2026ರ ಶೈಕ್ಷಣಿಕ ಸಾಲಿಗೆ ಅರ್ಹ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಈ ಮೊದಲು ಇದಕ್ಕೆ ಅರ್ಜಿ ಸಲ್ಲಿಸಲು ಮಾರ್ಚ್ 31 ಕೊನೆಯ ದಿನಾಂಕವಾಗಿತ್ತು, ಆದರೆ ಇದನ್ನು ಇದೀಗ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದ್ದು ಇದಕ್ಕೆ ಅರ್ಜಿ ಸಲ್ಲಿಸಲು ಯಾವ ವಿದ್ಯಾರ್ಥಿಗಳು ಅರ್ಹರು? ಅರ್ಜಿ ಸಲ್ಲಿಸುವುದು ಹೇಗೆ ಎಂಬ ಇತ್ಯಾದಿ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

ರಾಷ್ಟ್ರೀಯ ಮಿಲಿಟರಿ ಶಾಲೆಯ ವಿಶೇಷತೆ ಏನು?

ಇದು ಕೇಂದ್ರ ಸರ್ಕಾರದ ಪ್ರತಿಷ್ಠಿತ ಸೇನಾ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾಗಿದ್ದು ಈ ಶಾಲೆಗೆ ಆಯ್ಕೆಯಾಗುವಂತಹ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಮತ್ತು ಭಾರತೀಯ ನೌಕಾಪಡೆ ಅಕಾಡೆಮಿಗೆ ಸೇರಲು ವಿದ್ಯಾರ್ಥಿಗಳನ್ನು ಟ್ರೈನ್ ಮಾಡಲಾಗುವುದು.

ಇದೀಗ ಈ ಶಾಲೆಗೆ 8ನೇ ತರಗತಿ ಪ್ರವೇಶಾತಿಗೆ ಪ್ರಸ್ತುತ 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು?

ರಾಷ್ಟ್ರೀಯ ಮಿಲಿಟರಿ ಶಾಲೆಗೆ ಎಂಟನೇ ತರಗತಿಗೆ ಪ್ರವೇಶಾತಿ ಪಡೆಯಲು ಮಾನ್ಯತೆ ಪಡೆದ ಶಾಲೆಯಿಂದ ಏಳನೇ ತರಗತಿ ಪೂರ್ಣಗೊಳಿಸಿರಬೇಕು ಹಾಗೂ 11.5 ವರ್ಷದಿಂದ ಗರಿಷ್ಟ 13 ವರ್ಷದ ಒಳಗಿರಬೇಕು.

ಈ ಶಾಲಿಗೆ ವಿದ್ಯಾರ್ಥಿಗಳನ್ನು ಹೇಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ?

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೂರು ಹಂತದಲ್ಲಿ ಆಯ್ಕೆ ಪ್ರಕ್ರಿಯೆ ನಡೆಸಲಾಗುವುದು. ಮೊದಲನೇ ಹಂತದಲ್ಲಿ ಲಿಖಿತಪರೀಕ್ಷೆ ನಂತರದಲ್ಲಿ ಮೌಖಿಕ ಸಂದರ್ಶನ ಹಾಗೂ ಮೂರನೇ ಹಂತದಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿ ಅಂತಿಮ ಆಯ್ಕೆ ಮಾಡಿಕೊಳ್ಳಲಾಗುವುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?

ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ ಏಪ್ರಿಲ್ 15, 2025 ಆಗಿರುತ್ತದೆ. ಅರ್ಹತೆಗಳನ್ನು ಹೊಂದಿರುವಂತಹ ವಿದ್ಯಾರ್ಥಿಗಳು ಈ ಕೊನೆಯ ದಿನಾಂಕದ ಒಳಗಾಗಿ ತಮ್ಮ ಜಿಲ್ಲಾ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಕಾರ್ಯಾಲಯವನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದು.

ಅಥವಾ ಈ ಕೆಳಗಿನ ವಿಳಾಸಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

ವಿಳಾಸ : ನಿರ್ದೇಶಕರು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಫೀಲ್ಡ್ ಮಾರ್ಷಲ್ ಕೆಎಮ್ ಕರಿಯಪ್ಪ ರಸ್ತೆ ಬೆಂಗಳೂರು

ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಜಾಲತಾಣ –

  https://rimc.gov.in

Post a Comment

Previous Post Next Post

Top Post Ad

CLOSE ADS
CLOSE ADS
×