ಬೆಂಗಳೂರು(Bengaluru) ಮಹಾನಗರ ವ್ಯಾಪ್ತಿಯಲ್ಲಿ ಅರ್ಹ ಫಲಾನುಭವಿಗಳಿಗೆ ಸ್ವಂತ ಉದ್ಯೋಗವನ್ನು ಆರಂಭಿಸಲು ಸಬ್ಸಿಡಿಯಲ್ಲಿ ಆಟೋ(Autorickshaw) ಮತ್ತು ಕಾರು(Car) ಅನ್ನು ಖರೀದಿಸಲು ಸಹಾಯಧನ ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
ಇ-ಸಾರಥಿ ಯೋಜನೆಯಡಿ ಆಟೋರಿಕ್ಷಾ ಮತ್ತು ಕಾರನ್ನು ಖರೀದಿಸಲು(Car and Auto Subsidy) ಅರ್ಹ ಫಲಾನುಭವಿಗಳನ್ನು ಗುರುತಿಸಲು ಅರ್ಜಿಯನ್ನು ಆಹ್ವಾನಿಸಲಾಗಿದ್ದು ಈ ಯೋಜನೆಯಡಿ ಸಹಾಯಧನವನ್ನು ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು? ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳೇನು? ಇನ್ನಿತರೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗಿದೆ.
ಪ್ರಸ್ತುತ ಪರಿಸ್ಥಿತಿಯಲ್ಲಿ ದಿನದಿಂದ ದಿನಕ್ಕೆ ನಿರುದ್ಯೋಗ ಸಮಸ್ಯೆಯು ಏರಿಕೆ ಗತಿಯಲ್ಲಿ ಸಾಗುತ್ತಿದ್ದು ಸ್ವಂತ ಉದ್ಯೋಗವನ್ನು ಆರಂಭಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ಅನೇಕ ಯೋಜನೆಗಳು ಜಾರಿಯಲ್ಲಿದ್ದು ಈ ನಿಟ್ಟಿನಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಇ-ಸಾರಥಿ(e-sarathi Yojane) ಯೋಜನೆಯಡಿ ಆಟೋರಿಕ್ಷಾ ಮತ್ತು ಕಾರನ್ನು ಖರೀದಿಸಿ ಟಾಕ್ಸಿ(Car and Auto Subsidy Yojane) ಸೇವೆಯನ್ನು ಪ್ರಾರಂಭಿಸಬೇಕು ಎನ್ನುವ ಇಚ್ಚೆಯನ್ನು ಹೊಂದಿರುವವರು ಈ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಬಹುದು.
Who Can Apply For this Scheme-ಅರ್ಜಿ ಸಲ್ಲಿಸಲು ಅರ್ಹರು:
ಅರ್ಜಿದಾರರು ಪಾಲಿಕೆ ವ್ಯಾಪ್ತಿಯಲ್ಲಿ ವಿಳಾಸವಿರುವ ಆಧಾರ್ ಗುರುತಿನ ಚೀಟಿಯನ್ನು ಹೊಂದಿರುವುದು ಕಡ್ಡಾಯವಾಗಿದೆ.
ಅರ್ಜಿದಾರರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಕನಿಷ್ಟ ಮೂರು ವರ್ಷ ಅಥವಾ ಅದಕ್ಕೂ ಮೇಲ್ಪಟ್ಟು ವಾಸಿಸುತ್ತಿರುವ ಬಗ್ಗೆ ದೃಡೀಕರಿಸುವ ದಾಖಲಾತಿಗಳಾದ ಆಧಾರ್ ಕಾರ್ಡ/ಪಡಿತರ ಚೀಟಿ/ವಾಸಸ್ಥಳ ದೃಡೀಕರಣ ಪತ್ರವನ್ನು ಹೊಂದಿರಬೇಕು.
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅರ್ಜಿದಾರರು ಈ ಸೌಲಭ್ಯವನ್ನು ಪಡೆಯಲು ಕುಟುಂಬದ ವಾರ್ಷಿಕ ಆದಾಯವು ರೂ 3.00 ಲಕ್ಷಕ್ಕೆ ಮೀರಿರಬಾರದು.
ಹಿಂದುಳಿದ ಮತ್ತು ಅಲ್ಪಸಂಖ್ಯಾತ ವರ್ಗದ ಅರ್ಜಿದಾರರು ಕುಟುಂಬದ ಒಂದು ವರ್ಷದ ಆದಾಯವು ರೂ 3.00 ಲಕ್ಷಕ್ಕೆ ಮೀರಿರಬಾರದು.
ಒಂದು ಕುಟುಂಬದಲ್ಲಿ ಒಬ್ಬ ಸದಸ್ಯರಿಗೆ ಮಾತ್ರ ಈ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.
E-Sarathi Subsidy Amount Details-ಎಷ್ಟು ಸಬ್ಸಿಡಿ ನೀಡಲಾಗುತ್ತದೆ?
ಇ-ಸಾರಥಿ ಯೋಜನೆಯಡಿ ಆಟೋರಿಕ್ಷಾ ಮತ್ತು ಕಾರು ಖರೀದಿಸಲು ಸಂಬಂಧಪಟ್ಟ ಇಲಾಖೆಯಿಂದ ಎಷ್ಟು? ಸಬ್ಸಿಡಿಯನ್ನು ಪಡೆಯಬಹುದು ಎನ್ನುವ ಮಾಹಿತಿಯನ್ನು ಈ ಕೆಳಗೆ ಪ್ರಕಟಿಸಲಾಗಿದೆ.
1) ಇ-ಆಟೋ ರಿಕ್ಷಾ ವಾಹನವನ್ನು ಖರೀದಿಸಲು ಪಾಲಿಕೆಯ ವೆಚ್ಚದ ಶೇ 50% ರಷ್ಟು ಅಥವಾ ಗರಿಷ್ಟ ರೂ 80,000/- ಸಾವಿರ ಸಹಾಯಧನವನ್ನು ನೀಡಲಾಗುತ್ತದೆ.
2) ಅದೇ ರೀತಿ ಕಾರನ್ನು ಖರೀದಿ ಮಾಡಲು ಆಯ್ಕೆಯಾದ ಅಭ್ಯರ್ಥಿಗಳಿಗೆ ಶೇ 50% ಗರಿಷ್ಟ 1.50/- ಲಕ್ಷ ಸಬ್ಸಿಡಿಯನ್ನು ನೀಡಲಾಗುತ್ತದೆ.
Documents For Car Subsidy Yojana-ಅರ್ಜಿ ಸಲ್ಲಿಸಲು ದಾಖಲಾತಿಗಳು:
1) ಅರ್ಜಿದಾರರ ಆಧಾರ್ ಕಾರ್ಡ ಪ್ರತಿ
2) ಪೋಟೋ
3) ಬ್ಯಾಂಕ್ ಪಾಸ್ ಬುಕ್ ಪ್ರತಿ
4) ವಾಸ ದೃಡೀಕರಣ ಪ್ರಮಾಣ ಪತ್ರ
5) ವಯಸ್ಸು ದೃಡೀಕರಣ ದಾಖಲೆ
6) ಪಡಿತರ ಚೀಟಿ/ರೇಶನ್ ಕಾರ್ಡ
7) ವಾರ್ಷಿಕ ಆದಾಯ ಪ್ರಮಾಣ ಪತ್ರ
8) 20/- ರೂ ಬಾಂಡ್ ಪೇಪರ್
Last Date For Application-ಅರ್ಜಿ ಸಲ್ಲಿಸಲು ಕೊನೆಯ ದಿನ- 02 ಮೇ 2025
How To Apply-ಅರ್ಜಿಯನ್ನು ಸಲ್ಲಿಸುವುದು ಹೇಗೆ?
ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗಾಗಿ ಅಗತ್ಯ ದಾಖಲಾತಿಗಳ ಸಮೇತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ(BBMP)ಸಹಾಯಕ ಕಂದಾಯ ಅಧಿಕಾರಿ(ಕಲ್ಯಾಣ) ಕಚೇರಿಯನ್ನು ನೇರವಾಗಿ ಭೇಟಿ ಮಾಡಿ ಸ್ವಯಂ ದೃಡೀಕರಿಸಿ ಅರ್ಜಿಯನ್ನು ಸಲ್ಲಿಸಬೇಕು.
Application Donwload Link-ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಳ್ಳಲು ಲಿಂಕ್- DOWNLOAD NOW
BBMP Official Website Link-ಈ ಯೋಜನೆಯ ಕುರಿತು ಇನ್ನು ಅಧಿಕ ಮಾಹಿತಿ ಪಡೆಯಲು ಬಿಬಿಎಂಪಿಯ ಅಧಿಕೃತ ಜಾಲತಾಣ-CLICK HERE