ಡಿಪ್ಲೊಮಾ ಅಭ್ಯರ್ಥಿಗಳಿಗೆ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಲ್ಯಾಟರಲ್ ಎಂಟ್ರಿ ಮೂಲಕ 2ನೇ ವರ್ಷದ ಅಥವಾ 3ನೇ ಸೆಮಿಸ್ಟರ್ ಇಂಜಿನಿಯರಿಂಗ್ ಕೋರ್ಸುಗಳ ಪ್ರವೇಶಕ್ಕೆ ಡಿಪ್ಲೊಮಾ ಸಾಮಾನ್ಯ ಪ್ರವೇಶ ಪರೀಕ್ಷೆ-2025 ಬರೆಯಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿ(DCET 2025 Application Form)ಸಲಾಗಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಲ್ಯಾಟರಲ್ ಎಂಟ್ರಿ ಮೂಲಕ 2ನೇ ವರ್ಷದ ಅಥವಾ 3ನೇ ಸೆಮಿಸ್ಟರ್ ನ ಇಂಜಿನಿಯರಿಂಗ್ ಕಾಲೇಜುಗಳ ಪ್ರವೇಶಾತಿಗೆ ಅರ್ಹ ಡಿಪ್ಲೊಮಾ ಅಭ್ಯರ್ಥಿಗಳಿಂದ ಹಾಗೂ ಆಸಕ್ತಿಯುಳ್ಳ ವೃತ್ತಿಪರ ಡಿಪ್ಲೊಮಾ ಪದವೀಧರ (Working Professional) ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅಭ್ಯರ್ಥಿಗಳು ಕೆಇಎ ಅಧಿಕೃತ ವೆಬ್ಸೈಟ್ cetonline.karnataka.gov.in ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ ತಪ್ಪದೆ ಕೊನೆಯವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.ಇದೆ ತರಹದ ನೇಮಕಾತಿ,ವಿದ್ಯಾರ್ಥಿವೇತನ,ಕೇಂದ್ರ/ರಾಜ್ಯ ಯೋಜನೆಗಳಿಗಾಗಿ ನಮ್ಮ ಟೆಲಿಗ್ರಾಮ ಚಾನಲ್ ಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಪ್ರಾರಂಭಿಕ ದಿನಾಂಕ – 24-04-2025
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ – 10-05-2025
ಅರ್ಜಿ ಶುಲ್ಕವನ್ನು ಪಾವತಿ ಮಾಡಲು ಕೊನೆಯ ದಿನಾಂಕ – 12-05-2025
ಡಿಸಿಇಟಿ ಪ್ರವೇಶ ಪರೀಕ್ಷೆಯ ಪ್ರವೇಶ ಪತ್ರವನ್ನು ಪ್ರಾಧಿಕಾರದ ವೆಬ್ಸೈಟ್ ನಿಂದ ಡೌನ್ಲೋಡ್ ಮಾಡುವ ದಿನಾಂಕ – 20-05-2025
ಶೈಕ್ಷಣಿಕ ಅರ್ಹತೆ:
ಬಿಇ ಕೋರ್ಸ್‌ಗಳಿಗೆ;
ಡಿಸಿಇಟಿ ಮೂಲಕ ಬಿಇ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ಅಭ್ಯರ್ಥಿಗಳು ಡಿಪ್ಲೊಮಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಡಿಪ್ಲೊಮಾ ಕೋರ್ಸ್‌ನ ಅಂತಿಮ ವರ್ಷದಲ್ಲಿ ಎಲ್ಲಾ ವಿಷಯಗಳಲ್ಲಿ ಒಟ್ಟಾರೆಯಾಗಿ ಕನಿಷ್ಠ 45% ಅಂಕಗಳನ್ನು ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.
ಎಸ್.ಸಿ, ಎಸ್,ಟಿ ಮತ್ತು ಹಿಂದುಳಿದ ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳು ಕನಿಷ್ಠ 40% ಅಂಕಗಳನ್ನು ಪಡೆದಿದ್ದರೆ ಅರ್ಜಿ ಸಲ್ಲಿಸಲು ಅರ್ಹರು.
ವಿವರವಾದ ಶೈಕ್ಷಣಿಕ ಅರ್ಹತೆಯನ್ನು ಪರಿಶೀಲಿಸಲು ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ತಪ್ಪದೇ ನಾವು ಕೆಳಗೆ ನೀಡಿರುವ ಡಿಸಿಇಟಿ – 2025 ಮಾಹಿತಿ ಬುಲೆಟಿನ್ ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿಕೊಳ್ಳಿ.
DCET 2025 Time Table
ಡಿಸಿಇಟಿ ಪರೀಕ್ಷೆಯ ವೇಳಾಪಟ್ಟಿ ಈ ಕೆಳಗಿನಂತಿದೆ;
ದಿನಾಂಕ 31-05-2025 ರಂದು ಡಿಸಿಇಟಿ 2025 ಪರೀಕ್ಷೆಯನ್ನು ನಡೆಸಲಾಗುತ್ತದೆ.
ವಿವರಣಾತ್ಮಕ ಕನ್ನಡ ಭಾಷಾ ಪರೀಕ್ಷೆ – (4ನೇ ತರಗತಿ ಮಟ್ಟ) ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ (ಪರೀಕ್ಷಾ ಕೇಂದ್ರ ಬೆಂಗಳೂರಿನಲ್ಲಿ ಮಾತ್ರ) ಬೆಳಿಗ್ಗೆ 10.30 ರಿಂದ 11.30 ರ ವರೆಗೆ ಒಟ್ಟು 50 ಅಂಕಗಳಿಗೆ ಪರೀಕ್ಷೆಯನ್ನು ನಡೆಸಲಾಗುತ್ತದೆ.
ಡಿಪ್ಲೊಮಾ ಸಾಮಾನ್ಯ ಪ್ರವೇಶ ಪರೀಕ್ಷೆ – ಎಲ್ಲಾ ಅಭ್ಯರ್ಥಿಗಳಿಗೆ ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಡೆಸಲಾಗುತ್ತದೆ.
How to Apply for DCET 2025 Notification
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ;
ಅಭ್ಯರ್ಥಿಗಳು ಕೆಇಎ ಅಧಿಕೃತ ವೆಬ್ಸೈಟ್ https://cetonline.karnataka.gov.in/kea/ ಗೆ ಭೇಟಿ ನೀಡಿ.
ಇತ್ತೀಚಿನ ಪ್ರಕಟಣೆಗಳಲ್ಲಿ 25-04 DCET – 2025 ಆನ್ಲೈನ್ ಅರ್ಜಿ ಲಿಂಕ್ 25/04/2025 ಲಿಂಕ್ ಮೇಲೆ ಟ್ಯಾಪ್ ಮಾಡಿ.
ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ, ಭಾವಚಿತ್ರ ಹಾಗೂ ಶಾಲಾ ವ್ಯಾಸಂಗ, ಕನ್ನಡ ಮಾಧ್ಯಮ, ಜಾತಿ/ಪ್ರವರ್ಗ, ವಾರ್ಷಿಕ ಆದಾಯ, ಇತ್ಯಾದಿ ಶೈಕ್ಷಣಿಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
ಅರ್ಜಿ ಶುಲ್ಕ ಪಾವತಿ ಮಾಡಿ.
ನಂತರ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿ ನಮೂನೆಯ 3 ಪ್ರಿಂಟ್ ತೆಗೆದುಕೊಳ್ಳಿ.
ಹಾಗೂ ಅರ್ಜಿ ಸಲ್ಲಿಸಲು ಅಪ್ಲೋಡ್ ಮಾಡಲಾದ ಯಥಾವತ್ ಭಾವಚಿತ್ರ ಹಾಗೂ ಅರ್ಜಿ ಶುಲ್ಕದ ರಸೀದಿಯನ್ನು ಭವಿಷ್ಯದ ಉಲ್ಲೇಖಕ್ಕಾಗಿ ಉಳಿಸಿಕೊಳ್ಳಿ.