Education Loan-ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕಾಗಿ ₹5 ಲಕ್ಷದವರೆಗೆ ಸಾಲ ಪಡೆಯಲು ಅರ್ಜಿ ಆಹ್ವಾನ

Education Loan-ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕಾಗಿ ₹5 ಲಕ್ಷದವರೆಗೆ ಸಾಲ ಪಡೆಯಲು ಅರ್ಜಿ ಆಹ್ವಾನ

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ ನಿಯಮಿತದಿಂದ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಬ್ಯಾಂಕ್ ಮೂಲಕ ಅತೀ ಕಡಿಮೆ ಬಡ್ಡಿದರದಲ್ಲಿ(Education Loan) ಸಾಲವನ್ನು ಪಡೆಯಲು ಅರಿವು ಯೋಜನೆಯಡಿ ಸೌಲಭ್ಯವನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಅರಿವು ವಿದ್ಯಾಭ್ಯಾಸ ಸಾಲ ಯೋಜನೆಯಡಿಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (CET/NEET) ಮುಖಾಂತರ ಎಂ.ಬಿ.ಬಿ.ಎಸ್/ ಬಿ.ಡಿ.ಎಸ್/ಬಿ ಆಯುಷ್/ ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್/ಬ್ಯಾಚುಲರ್ ಆಫ್ ಇಂಜಿನಿಯರಿಂಗ್/ಬ್ಯಾಚುಲರ್ ಆಫ್ ಟೆಕ್ನಾಲಜಿ ಕೋರ್ಸ್ ಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸಾಲವನ್ನು ನೀಡಲಾಗುತ್ತದೆ.

ಅರಿವು ಯೋಜನೆಯಡಿ(Arivu Yojane Details) ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಯಾವುದು? ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ಅರ್ಹತೆಗಳು, ಅರ್ಜಿ ಸಲ್ಲಿಸಲು ಅವಶ್ಯವಿರುವ ದಾಖಲಾಗಳೇನು? ಮತ್ತು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸುವ ವಿಧಾನ ಸೇರಿದಂತೆ ಎಲ್ಲ ಅವಶ್ಯಕ ಮಾಹಿತಿಯನ್ನು ಈ ಕೆಳಗೆ ವಿವರಿಸಲಾಗಿದೆ.ಇದೆ ತರಹದ ನೇಮಕಾತಿ,ವಿದ್ಯಾರ್ಥಿವೇತನ,ಕೇಂದ್ರ/ರಾಜ್ಯ ಯೋಜನೆಗಳಿಗಾಗಿ ನಮ್ಮ ಟೆಲಿಗ್ರಾಮ ಚಾನಲ್ ಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ

Last Date For Arivu Yojana-ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:

ಅರ್ಹ ವಿದ್ಯಾರ್ಥಿಗಳು ಅಗತ್ಯ ದಾಖಲೆಗಳ ಸಮೇತ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು 23 ಮೇ 2025 ಕೊನೆಯ ದಿನಾಂಕವಾಗಿರುತ್ತದೆ.

Eligibility Criteria For Arivu Yojana-ಅರಿವು ಯೋಜನೆಯ ವಿವರ ಮತ್ತು ಅರ್ಜಿ ಸಲ್ಲಿಸಲು ಅರ್ಹತೆಗಳು:

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (CET/NEET) ಮುಖಾಂತರ ಎಂ.ಬಿ.ಬಿ.ಎಸ್, ಎಂ.ಡಿ, ಎಂ.ಎಸ್ ಕೋರ್ಸ್ ಗಳಿಗೆ, ಸರ್ಕಾರಿ ಕೋಟಾದಲ್ಲಿ ಸರ್ಕಾರಿ/ಖಾಸಗಿ ಕಾಲೇಜು ಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಗರಿಷ್ಠ ರೂ. 5,00,000/- ವನ್ನು ನೀಡಲಾಗುತ್ತದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (ಸಿ.ಇ.ಟಿ./ನೀಟ್) ಮುಖಾಂತರ ಆಯ್ಕೆಯಾದ ಬಿ. ಡಿ. ಎಸ್, ಎಂ.ಡಿ.ಎಸ್ ಕೋರ್ಸುಗಳಿಗೆ ಸರ್ಕಾರಿ ಕೋಟಾದಲ್ಲಿ ಸರ್ಕಾರಿ/ಖಾಸಗಿ ಕಾಲೇಜು ಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಗರಿಷ್ಠ ರೂ 1,00,000 ವರೆಗೆ ಮತ್ತು ಬಿ.ಆಯುಷ್ ಮತ್ತು ಎಂ.ಆಯುಷ್ ಕೋರ್ಸ್ ಗಳಿಗೆ, ಸರ್ಕಾರಿ ಕೋಟಾದಲ್ಲಿ ಸರ್ಕಾರಿ/ಖಾಸಗಿ ಕಾಲೇಜು ಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಗರಿಷ್ಠ ರೂ. 50,000 ಗಳನ್ನು ಬಿಡುಗಡೆ ಮಾಡಲಾಗುತ್ತದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (ಸಿ.ಇ.ಟಿ./ನೀಟ್) ಮುಖಾಂತರ ಆಯ್ಕೆಯಾದ ಬ್ಯಾಚುಲಾರ್ ಆಫ್ ಆರ್ಕಿಟೆಕ್ಟ/ಇಂಜಿನಿಯರಿಂಗ್/ಟೆಕ್ನಾಲಜಿ (ಬಿ.ಇ./ಬಿ.ಟೆಕ್), ಎಂ.ಟೆಕ್, ಎಂ.ಇ. ಬಿ.ಆರ್ಕ್. ಎಂ.ಆರ್ಕ್ ವ್ಯಾಸಾಂಗ ಮಾಡುತ್ತಿರುವ, ಸರ್ಕಾರಿ ಕೋಟಾದಲ್ಲಿ ಸರ್ಕಾರಿ/ಖಾಸಗಿ ಕಾಲೇಜು ಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಗರಿಷ್ಠ ರೂ 50,000 ಗಳನ್ನು ಬಿಡುಗಡೆ ಮಾಡಲಾಗುತ್ತದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (CET/NEET) ಮುಖಾಂತರ ಎಂ ಬಿ ಎ, ಎಂ ಸಿ ಎ, ಎಲ್ ಎಲ್ ಬಿ ಕೋರ್ಸಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಬೋಧನಾ ಶುಲ್ಕ ಮಾತ್ರ ಗರಿಷ್ಠ ರೂ.50,000/-ಗಳನ್ನು ಸಾಲವಾಗಿ ನೀಡಲಾಗುತ್ತದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (ಸಿ.ಇ.ಟಿ/ನೀಟ್) ಮುಖಾಂತರ ಆಯ್ಕೆಯಾದ B.Sc. in Horticulture, Agriculture, Dairy Technology, Forestry, Veterinary, Animal science, Food Technology, Bio Technology, Fisheries, Sericulture, Home/community Sciences, Food Nutrition and Dietetics, ಕೋರ್ಸ್‍ಗಳಿಗೆ ಸರ್ಕಾರಿ ಕೋಟಾದಲ್ಲಿ ಸರ್ಕಾರಿ/ಖಾಸಗಿ ಕಾಲೇಜುಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಬೋಧನಾ ಶುಲ್ಕ ಮಾತ್ರ ಗರಿಷ್ಟ ರೂ.50,000/-ಗಳು ಸಾಲವಾಗಿ ನೀಡಲಾಗುತ್ತದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (ಸಿ.ಇ.ಟಿ/ನೀಟ್) ಮುಖಾಂತರ ಆಯ್ಕೆಯಾದ B.Pharma, M.Pharma, Pharma.D,and D.Pharma, ಕೋರ್ಸ್‍ಗಳಿಗೆ ಸರ್ಕಾರಿ ಕೋಟಾದಲ್ಲಿ ಸರ್ಕಾರಿ/ಖಾಸಗಿ ಕಾಲೇಜುಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಬೋಧನಾ ಶುಲ್ಕ ಮಾತ್ರ ಗರಿಷ್ಟ ರೂ.50,000/-ಗಳು ಸಾಲವಾಗಿ ನೀಡಲಾಗುತ್ತದೆ.

Required Documents For Arivu Yojana- ಅರ್ಜಿ ಸಲ್ಲಿಸಲು ಅವಶ್ಯಕ ದಾಖಲೆಗಳು:

ಜಾತಿ ಮತ್ತು ಆದಾಯ ಪ್ರಮಾಣ ಪತ್ರ

ಆಧಾರ್ ಕಾರ್ಡ್ ಪ್ರತಿ (ನಿವಾಸದ ಪುರಾವೆ)

CET ಪ್ರವೇಶ ಪತ್ರ

NEET ಪ್ರವೇಶ ಪತ್ರ

SSLC/10 ನೇ ತರಗತಿಯ ಅಂಕಪಟ್ಟಿ

ಡಿಪ್ಲೋಮ/ಪಿ.ಯು.ಸಿ ಅಂಕಪಟ್ಟಿ

ಇಂಡೆಮ್ನಿಟೀ ಬಾಂಡ್

ವಿದ್ಯಾರ್ಥಿಯ ಸ್ವಯಂ ಘೋಷಣೆ ಪತ್ರ

ಪೋಷಕರ ಸ್ವಯಂ ಘೋಷಣೆ ಪತ್ರ

Online Application link For Arivu Yojana-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸವ ವಿಧಾನ:

ವಿದ್ಯಾರ್ಥಿಗಳು ಅಗತ್ಯ ದಾಖಲಾತಿಗಳನ್ನು ಸಿದ್ದಪಡಿಸಿಕೊಂಡು ಈ ಕೆಳಗೆ ತಿಳಿಸಿರುವ ವಿಧಾನವನ್ನು ಅನುಸರಿಸಿ ಅಧಿಕೃತ ಜಾಲತಾಣವನ್ನು ಪ್ರವೇಶ ಮಾಡಿ ಆನ್ಲೈನ್ ಮೂಲಕ ಮನೆಯಲ್ಲೇ ಇದ್ದು ಅರ್ಜಿಯನ್ನು ಸಲ್ಲಿಸಬಹುದು.

Step-1: ಪ್ರಥಮದಲ್ಲಿ Apply Now ಇಲ್ಲಿ ಕ್ಲಿಕ್ ಮಾಡಿ ಅಧಿಕೃತ ಜಾಲತಾಣವನ್ನು ಪ್ರವೇಶ ಮಾಡಬೇಕು.

Step-2: ನಂತರ ಇಲ್ಲಿ ಮುಖಪುಟದಲ್ಲಿ ಕೆಳಗೆ ಕಾಣಿಸುವ "ಅರಿವು ವಿದ್ಯಾಭ್ಯಾಸ ಯೋಜನೆ" ಎಂದು ಕಾಣಿಸುವ ಬಟನ್ ಮೇಲೆ ಕ್ಲಿಕ್ ಮಾಡಬೇಕು.

Step-3: ಬಳಿಕ ಈ ಪೇಜ್ ನಲ್ಲಿ ಕಾಣುವ "ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿ" ಬಟನ್ ಮೇಲೆ ಕ್ಲಿಕ್ ಮಾಡಿದರೆ ಎರಡು ಆಯ್ಕೆಗಳು ಗೋಚರಿಸುತ್ತದೆ "ಹೊಸ ಅರ್ಜಿ ಸಲ್ಲಿಸಿ" ಮತ್ತು "ನವೀಕರಣ" ಬಟನ್ ಮೇಲೆ ಕ್ಲಿಕ್ ಮಾಡಿ ಅಗತ್ಯ ವಿವರವನ್ನು ಭರ್ತಿ ಮಾಡಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ- 8277799990

1 Comments

Previous Post Next Post

Top Post Ad

CLOSE ADS
CLOSE ADS
×