₹30,000 ನೇರವಾಗಿ ಖಾತೆಗೆ ಬರುವ ಅಜೀಂ ಪ್ರೇಮ್ಜಿ ವಿದ್ಯಾರ್ಥಿ ವೇತನ - ಸಂಪೂರ್ಣ ಮಾಹಿತಿ ಇಲ್ಲಿದೆ

₹30,000 ನೇರವಾಗಿ ಖಾತೆಗೆ ಬರುವ ಅಜೀಂ ಪ್ರೇಮ್ಜಿ ವಿದ್ಯಾರ್ಥಿ ವೇತನ - ಸಂಪೂರ್ಣ ಮಾಹಿತಿ ಇಲ್ಲಿದೆ

ದೇಶದ ಹೆಣ್ಣುಮಕ್ಕಳ ಉನ್ನತ ಶಿಕ್ಷಣವನ್ನು ಪ್ರೋತ್ಸಾಹಿಸುವ ದಿಶೆಯಲ್ಲಿ ಅಜೀಂ ಪ್ರೇಮ್ಜಿ ಫೌಂಡೇಷನ್ ಒಂದು ಮಹತ್ವದ ಯೋಜನೆಯನ್ನು ಘೋಷಿಸಿದೆ. ಡಿಪ್ಲೊಮಾ ಮತ್ತು ಪದವಿ ಶಿಕ್ಷಣ ಪಡೆಯುತ್ತಿರುವ 18 ರಾಜ್ಯಗಳ 2.5 ಲಕ್ಷ ವಿದ್ಯಾರ್ಥಿನಿಯರಿಗೆ ಪ್ರತಿವರ್ಷ ₹30,000 ವಿದ್ಯಾರ್ಥಿವೇತನ ನೀಡಲಾಗುವುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ವಿದ್ಯಾರ್ಥಿ ವೇತನಕ್ಕೆ ಅರ್ಹತೆ:

ಸರ್ಕಾರಿ ಶಾಲೆಗಳಲ್ಲಿ 10ನೇ ಮತ್ತು 12ನೇ ತರಗತಿ ಪಾಸು ಮಾಡಿದ ಹೆಣ್ಣುಮಕ್ಕಳು.

ಸರ್ಕಾರಿ/ಖಾಸಗಿ ಸಂಸ್ಥೆಗಳಲ್ಲಿ ಡಿಪ್ಲೊಮಾ ಅಥವಾ ಪದವಿ ಶಿಕ್ಷಣಕ್ಕೆ ಸೇರಿರುವವರು.

ಕರ್ನಾಟಕ ಸೇರಿದಂತೆ ಅರುಣಾಚಲ ಪ್ರದೇಶ, ಅಸ್ಸಾಂ, ಬಿಹಾರ, ಛತ್ತೀಸ್ಗಢ, ಜಾರ್ಖಂಡ್, ಮಧ್ಯಪ್ರದೇಶ, ಈಶಾನ್ಯ ರಾಜ್ಯಗಳು, ಒಡಿಶಾ, ರಾಜಸ್ಥಾನ, ತೆಲಂಗಾಣ, ಉತ್ತರ ಪ್ರದೇಶ ಮತ್ತು ಉತ್ತರಾಖಂಡ್ ರಾಜ್ಯಗಳ ವಿದ್ಯಾರ್ಥಿನಿಯರು ಅರ್ಜಿ ಸಲ್ಲಿಸಬಹುದು.

ಅರ್ಜಿ ಪ್ರಕ್ರಿಯೆ

2024-25ನೇ ಶೈಕ್ಷಣಿಕ ವರ್ಷದಲ್ಲಿ ಮಧ್ಯಪ್ರದೇಶ, ಉತ್ತರ ಪ್ರದೇಶ, ರಾಜಸ್ಥಾನ ಮತ್ತು ಜಾರ್ಖಂಡ್ನ 25,000ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ಈ ವಿದ್ಯಾರ್ಥಿವೇತನ ನೀಡಲಾಗಿದೆ. 2025-26ನೇ ಸಾಲಿನಲ್ಲಿ 2.5 ಲಕ್ಷ ವಿದ್ಯಾರ್ಥಿನಿಯರನ್ನು ಆಯ್ಕೆ ಮಾಡಲಾಗುವುದು. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಸೆಪ್ಟೆಂಬರ್ 2025ರಿಂದ ಆರಂಭವಾಗಲಿದೆ.

ವಿದ್ಯಾರ್ಥಿವೇತನದ ವಿವರ

ನಾಲ್ಕು ವರ್ಷದ ಬಿಎಸ್ಸಿ ನರ್ಸಿಂಗ್ ಕೋರ್ಸ್ ಮಾಡುವ ವಿದ್ಯಾರ್ಥಿನಿಗಳಿಗೆ ₹30,000 ಪ್ರತಿವರ್ಷ (ಒಟ್ಟು ₹1.20 ಲಕ್ಷ) ನೀಡಲಾಗುವುದು.

ಹಣವನ್ನು ವರ್ಷಕ್ಕೆ ಎರಡು ಕಂತುಗಳಲ್ಲಿ ನೇರವಾಗಿ ವಿದ್ಯಾರ್ಥಿನಿಯ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು.

ಈ ಯೋಜನೆಯ ಮೂಲಕ ಹೆಣ್ಣುಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಅವಕಾಶಗಳನ್ನು ಸೃಷ್ಟಿಸಲು ಫೌಂಡೇಷನ್ ಉದ್ದೇಶಿಸಿದೆ. ಮುಂದಿನ ವರ್ಷಗಳಲ್ಲಿ ಈ ಯೋಜನೆಯನ್ನು ದೇಶದ ಎಲ್ಲಾ ರಾಜ್ಯಗಳಿಗೆ ವಿಸ್ತರಿಸುವ ಯೋಜನೆ ಇದೆ ಎಂದು ಅಜೀಂ ಪ್ರೇಮ್ಜಿ ಫೌಂಡೇಷನ್ನ ಸಿಇಒ ಅನುರಾಗ್ ಬೆಹರ್ ತಿಳಿಸಿದ್ದಾರೆ.

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ



Post a Comment

Previous Post Next Post

Top Post Ad

CLOSE ADS
CLOSE ADS
×