Free Vehicle Training-ಉಚಿತ ಲಘು ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನ

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ(NWKSRTC)ವತಿಯಿಂದ ಉಚಿತವಾಗಿ ಲಘು ಮತ್ತು ಭಾರಿ ವಾಹನ ಚಾಲನೆಯನ್ನು(Free Vehicle Training) ಕಲಿಯಲು ಆಸಕ್ತಿಯನ್ನು ಹೊಂದಿರುವ ನಿರುದ್ಯೋಗಿ ಯುವಕರಿಗೆ ಮತ್ತು ಯುವತಿಯರಿಗೆ ತರಬೇತಿಯನ್ನು ನೀಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ಈ ಅಂಕಣದಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವತಿಯಿಂದ ಆಯೋಜನೆ ಮಾಡಿರುವ ಉಚಿತ ಲಘು ಮತ್ತು ಭಾರಿ ವಾಹನ ಚಾಲನಾ ತರಬೇತಿಯನ್ನು(Vehicle Training) ಪಡೆಯಲು ಯಾರೆಲ್ಲ ಅರ್ಜಿಯನ್ನು ಸಲ್ಲಿಸಬಹುದು? ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು? ಈ ತರಬೇತಿಯಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಸಂಸ್ಥೆಯಿಂದ ಒದಗಿಸುವ ಸೌಲಭ್ಯಗಳ ಕುರಿತು ಇನ್ನಿತರೆ ಸಂಪೂರ್ಣ ಅಗತ್ಯ ಮಾಹಿತಿಯನ್ನು ಇಲ್ಲಿ ಹಂಚಿಕೊಳ್ಳಲಾಗಿದೆ.

ನಿರುದ್ಯೋಗಿ ಯುವಕರಿಗೆ ಮತ್ತು ಯುವತಿಯರು ಯಾವುದೇ ಶುಲ್ಕವನ್ನು(Free Driving Training) ಪಾವತಿ ಮಾಡದೇ ಸರ್ಕಾರದ ಅದೀನದಲ್ಲಿರುವ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಉತ್ತಮ ಗುಣಮಟ್ಟದ ವಾಹನ ಚಾಲನಾ ತರಬೇತಿಯನ್ನು ಪಡೆದು ಈ ಕ್ಷೇತ್ರದಲ್ಲಿ ಉದ್ಯೋಗವನ್ನು ಪಡೆದುಕೊಳ್ಳಲು ಕೌಶಲ್ಯವನ್ನು ಪಡೆದುಕೊಳ್ಳಬಹುದಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

Driving Training-ಲಘು ಮತ್ತು ಭಾರಿ ವಾಹನ ಅದರೆ ಯಾವೆಲ್ಲ ವಾಹನ ತರಬೇತಿ ನೀಡಲಾಗುತ್ತದೆ?

ಆಯ್ಕೆಯಾದ ಅಭ್ಯರ್ಥಿಗಳಿಗೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಪ್ರಸ್ತುತ ಉಚಿತವಾಗಿ ಏರ್ಪಡಿಸಿರುವ ಲಘು ಮತ್ತು ಭಾರಿ ವಾಹನ ಚಾಲನಾ ತರಬೇತಿಯಲ್ಲಿ ಬಸ್ಸು(Bus driver training), ಲಾರಿಯನ್ನು ಚಾಲನೆ(Lorry driving training) ಮಾಡುವುದನ್ನು ಪ್ರಯೋಗಿಕವಾಗಿ ಕಲಿಸಲಾಗುತ್ತದೆ.

Free Driving Training-ಸಂಪೂರ್ಣ ಉಚಿತ ತರಬೇತಿ?

ಈ ತರಬೇತಿಯು ಸಂಪೂರ್ಣ ಉಚಿತವಾಗಿದ್ದು ಆಯ್ದೆಯಾದ ಅಭ್ಯರ್ಥಿಗಳಿಗೆ ತರಬೇತಿ ಸಂಸ್ಥೆಯ ಕೇಂದ್ರದ ವತಿಯಿಂದ ಉಚಿತ ವಸತಿ ಮತ್ತು ಊಟದ ಸೌಲಭ್ಯವನ್ನು ಒದಗಿಸಲಾಗುತ್ತದೆ.

Driving Training Duration-ತರಬೇತಿಯನ್ನು ಎಷ್ಟು ದಿನ ಏರ್ಪಡಿಸಲಾಗಿದೆ?

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವತಿಯಿಂದ ಒಟ್ಟು 30 ದಿನದ ಉಚಿತ ತರಬೇತಿ ಇದಾಗಿರುತ್ತದೆ.

Who Can Apply-ತರಬೇತಿ ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಅಭ್ಯರ್ಥಿಯು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.

ಅಭ್ಯರ್ಥಿಯು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡಗಳ ವರ್ಗಕ್ಕೆ ಸೇರಿದವರಾಗಿರಬೇಕು.

ನಿರುದ್ಯೋಗಿ ಯುವಕ/ಯುವತಿಯರಿಗೆ ಮೊದಲ ಅಭ್ಯತೆಯನ್ನು ನೀಡಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

How To Apply-ಅರ್ಜಿ ಸಲ್ಲಿಸುವ ವಿಧಾನ ಹೇಗೆ?

ಅರ್ಹ ಅರ್ಜಿದಾರರು ತರಬೇತಿಯಲ್ಲಿ ಭಾಗವಹಿಸಲು ಈ ದೂರವಾಣಿ ಸಂಖ್ಯೆಗಳಿಗೆ 8095161818 / 9449925367 / 9449971416 ಕರೆ ಮಾಡಿ ಮುಂಚಿತವಾಗಿ ತಮ್ಮ ಹೆಸರನ್ನು ನೋಂದಣಿಯನ್ನು ಮಾಡಿಕೊಂಡು ತರಬೇತಿಯಲ್ಲಿ ಭಾಗವಹಿಸಬಹುದು.

Required Documents-ಅರ್ಜಿ ಸಲ್ಲಿಸಲು ದಾಖಲೆಗಳು:

ತರಬೇತಿಯಲ್ಲಿ ಭಾಗವಹಿಸಲು ಅಭ್ಯರ್ಥಿಗಳು ಈ ಕೆಳಗೆ ತಿಳಿಸಿರುವ ದಾಖಲೆಗಳನ್ನು ಸಿದ್ದಪಡಿಸಿಕೊಳ್ಳಬೇಕು.

ಅಭ್ಯರ್ಥಿಯ ಆಧಾರ್ ಕಾರ್ಡ ಪ್ರತಿ

ಜಾತಿ ಮತ್ತು ಆದಾಯ ಪ್ರಮಾಣ ಪತ್ರ

ಅಭ್ಯರ್ಥಿಯ ಪೋಟೋ

ಬ್ಯಾಂಕ್ ಪಾಸ್ ಬುಕ್ ಪ್ರತಿ

ರೇಶನ್ ಕಾರ್ಡ ಪ್ರತಿ

ಮೊಬೈಲ್ ನಂಬರ್

Driving Training Center-ತರಬೇತಿ ಕೇಂದ್ರದ ವಿಳಾಸ:

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಪ್ರಾದೇಶಿಕ ತರಬೇತಿ ಕೇಂದ್ರ, ಗಂಗಿಭಾವಿ ರಸ್ತೆ, ಶಿಗ್ಗಾಂವ, ಹಾವೇರಿ ಜಿಲ್ಲೆ ದೂರವಾಣಿ-8095161818 / 9449925367 / 9449971416

For More Information-ಹೆಚ್ಚಿನ ಮಾಹಿತಿಗಾಗಿ:

NWKSRTC Website-ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧಿಕೃತ ವೆಬ್ಸೈಟ್-Click Here

Previous Post Next Post