ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಮೊರಾರ್ಜಿ ವಸತಿ ಶಾಲೆಗಳಿಗೆ 2025-26 ನೇ ಸಾಲಿನ 6ನೇ ತರಗತಿ ಪ್ರವೇಶಕ್ಕಾಗಿ ಪ್ರವೇಶ ಪರೀಕ್ಷೆಯನ್ನು ಫೆಬ್ರವರಿ 15ರಂದು ನಡೆಸಿತ್ತು. ಮೊದಲನೇ ಹಾಗೂ ಎರಡನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶ ಪ್ರಕಟಿಸಿದ ನಂತರ ಇಂದು 3ನೇ ಸುತ್ತಿನ (ವಿಶೇಷ ವರ್ಗದ ಅಭ್ಯರ್ಥಿಗಳಿಗೆ ಮಾತ್ರ)ಸೀಟು ಹಂಚಿಕೆಯ ಫಲಿತಾಂಶ(Morarji 3rd Seat Allotment List 2025)ವನ್ನು ಪ್ರಕಟಿಸಿದೆ.
ರಾಜ್ಯದಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ /ಅಟಲ್ ಬಿಹಾರಿ ವಾಜಪೇಯಿ/ಶ್ರೀಮತಿ ಇಂದಿರಾ ಗಾಂಧಿ/ ಡಾ।। ಬಿ.ಆರ್. ಅಂಬೇಡ್ಕರ್/ ಮಾಸ್ತಿ ವೆಂಕಟೇಶ ಅಯ್ಯಂಗರ್/ ಸಂಗೊಳ್ಳಿ ರಾಯಣ್ಣ/ ಕವಿರನ್ನ / ಗಾಂಧಿತತ್ವ / ಶ್ರೀ ನಾರಾಯಣ ಗುರು / ಪ್ರತಿಭಾನ್ವಿತ ಬಾಲಕಿಯರ ವಸತಿ ಶಾಲೆ ಮುಂತಾದ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳ ಮೆರಿಟ್ ಮತ್ತು ಅಭ್ಯರ್ಥಿಗಳು ದಾಖಲಿಸಿರುವ ಇಚ್ಛೆ ಅಥವಾ ಆಯ್ಕೆಗಳ ಆಧಾರದ ಮೇಲೆ ವಿಶೇಷ ವರ್ಗಗಳಿಗೆ ಮೀಸಲಿರುವ ಸೀಟುಗಳ ಮೂರನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು ಪ್ರಾಧಿಕಾರದ ವೆಬ್ಸೈಟ್ cetonline.karnataka.gov.in/kea/ನಲ್ಲಿ ಪ್ರಕಟಿಸಲಾಗಿದೆ. ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ತಪ್ಪದೆ ಕೊನೆಯವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ವಿದ್ಯಾರ್ಥಿಗಳು KEA ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ. 3ನೇ ಸುತ್ತಿನ ಪ್ರವೇಶ ಪಟ್ಟಿ ವೀಕ್ಷಿಸಬಹುದು. ವಿದ್ಯಾರ್ಥಿಗಳು ತಮ್ಮ ಜಿಲ್ಲೆಯನ್ನು ಆಯ್ಕೆ ಮಾಡಿ ಫಲಿತಾಂಶವನ್ನು ವೀಕ್ಷಿಸಬಹುದು.
ಮೂರನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶ ನೋಡುವುದು ಹೇಗೆ?
ಮೊದಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ ಸೈಟ್ https://cetonline.karnataka.gov.in/kea/ ಗೆ ಭೇಟಿ ನೀಡಿ.
ಮುಖಪುಟ –>> ಪ್ರವೇಶಗಳು –>> ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಪ್ರವೇಶ / EMRS – 2025–>> KREIS – 2025 3ನೇ ಸುತ್ತಿನ ಸೀಟು ಹಂಚಿಕೆ ಪಟ್ಟಿ. (ವಿಶೇಷ ವರ್ಗದ ಅಭ್ಯರ್ಥಿಗಳಿಗೆ ಮಾತ್ರ) ನಿಮಗೆ ಬೇಕಾದ ಜಿಲ್ಲೆಯ ಹೆಸರಿನ ಲಿಂಕ್ ಮೇಲೆ ಕ್ಲಿಕ್ ಮಾಡಿ. ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿ.
ಪ್ರಕಟಿಸಿರುವ ಲಿಸ್ಟ್ ನಲ್ಲಿ ನಿಮ್ಮ ಸಿಇಟಿ ನಂಬರ್ ಅಥವಾ ಹೆಸರಿನ ಮೂಲಕ ನಿಮ್ಮ ರಾಂಕನ್ನು ಚೆಕ್ ಮಾಡಿಕೊಳ್ಳಿ.
ಮೊರಾರ್ಜಿ ಶಾಲೆ ಹಾಗೂ ವಿವಿಧ ವಸತಿ ಶಾಲೆಗಳ ಮೂರನೇ ಸುತ್ತಿನ ಸೀಟು ಹಂಚಿಕೆಯ ಜಿಲ್ಲಾವಾರು ಫಲಿತಾಂಶವಿರುವ ಪಿಡಿಎಫ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ಸಂಬಂಧಿಸಿದ ಶಾಲೆಗಳಲ್ಲಿ ಪ್ರವೇಶ
ಸೀಟು ಹಂಚಿಕೆಯ ಫಲಿತಾಂಶವನ್ನು ಪರಿಶೀಲಿಸಿ ಮೂಲ ದಾಖಲೆಗಳನ್ನು ಶಾಲಾ ಹಂತದಲ್ಲಿಯೇ ಪರಿಶೀಲನೆಗೆ ಒಳಪಟ್ಟು ಸರಿ ಇದ್ದಲ್ಲಿ ಸೀಟು ಹಂಚಿಕೆಯಾದ ಅಭ್ಯರ್ಥಿಗಳು ಸಂಬಂಧಿಸಿದ ಶಾಲೆಗಳಲ್ಲಿ ದಿನಾಂಕ 26-05-2025ರ ಸಂಜೆ 5 ರೊಳಗೆ ಪ್ರವೇಶ ಪಡೆಯಬಹುದಾಗಿದೆ.