ಅಲ್ಪಸಂಖ್ಯಾತ ಮತ್ತು ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ವಸತಿ ಮತ್ತು ಊಟ ಸಹಿತ ಗುಣಮಟ್ಟದ ಉಚಿತ ಶಿಕ್ಷಣ ಒದಗಿಸುವ ಉದ್ದೇಶದಿಂದ ಅಲ್ಪಸಂಖ್ಯಾತರ ನಿರ್ದೇಶನಾಲಯದ (Directorate of Minorities) ಅಧೀನದಲ್ಲಿ ರಾಜ್ಯಾದ್ಯಂತ 21 ಪದವಿಪೂರ್ವ ಕಾಲೇಜುಗಳನ್ನು ಸ್ಥಾಪಿಸಲಾಗಿದೆ.
ಈ ಕಾಲೇಜುಗಳಲ್ಲಿ 2025-26ನೇ ಶೈಕ್ಷಣಿಕ ವರ್ಷಕ್ಕೆ ಪ್ರಥಮ ಪಿಯುಸಿ ತರಗತಿಗೆ ಉಚಿತ ಪ್ರವೇಶಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆ ಹೊಂದಿರುವ ವಿದ್ಯಾರ್ಥಿಗಳು ಈ ಯೋಜನೆಯ ಸದುಪಯೋಗ ಪಡೆದು, ತಮ್ಮ ಭವಿಷ್ಯವನ್ನು ಕಟ್ಟಿಕೊಳ್ಳಬಹುದು.
ಯಾರೆಲ್ಲ ಅರ್ಜಿ ಸಲ್ಲಿಸಬಹುದು?
ಮೊರಾರ್ಜಿ ದೇಸಾಯಿ ಹಾಗೂ ಮೌಲಾನಾ ಆಜಾದ್ ವಸತಿ ಪಿಯು ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಹಲವು ಸೌಲಭ್ಯಗಳು ಉಚಿತವಾಗಿ ಒದಗಿಸಲಾಗುತ್ತದೆ. ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕೆಳಕಂಡ ಅರ್ಹತೆಗಳನ್ನು ಹೊಂದಿರಬೇಕು:
ಜಾತಿ ಮತ್ತು ಸಮುದಾಯ:
ಅಲ್ಪಸಂಖ್ಯಾತ ಸಮುದಾಯಗಳಾದ ಮುಸ್ಲಿಂ, ಕ್ರೈಸ್ತ, ಜೈನ, ಬೌದ್ಧ, ಸಿಖ್, ಪಾರ್ಸಿ ಹಾಗೂ ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST) ಮತ್ತು ಇತರೆ ಹಿಂದುಳಿದ ವರ್ಗಗಳು (OBC) ಸೇರಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ಶೈಕ್ಷಣಿಕ ಅರ್ಹತೆ:
ಕರ್ನಾಟಕ ರಾಜ್ಯದ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ರಾಜ್ಯದ ಮಾನ್ಯತೆ ಪಡೆದ ವಿದ್ಯಾ ಸಂಸ್ಥೆಯಿAದ ವಿದ್ಯಾಭ್ಯಾಸ ಮಾಡಿಕೊಂಡಿರಬೇಕು.
ಆದಾಯ ಮಿತಿಯ:
ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ ರೂ.2.50 ಲಕ್ಷಕ್ಕಿಂತ ಕಡಿಮೆಯಾಗಿರಬೇಕು ಅಭ್ಯರ್ಥಿ ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.
ಮೊರಾರ್ಜಿ ದೇಸಾಯಿ ಪಿಯು ಕಾಲೇಜುಗಳಲ್ಲಿ ಪ್ರಥಮ ಪಿಯುಸಿ ತರಗತಿಗೆ ಉಚಿತ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.
ಸ್ಥಾನ ಮೀಸಲಾತಿ ವಿವರಗಳು
ಮೊರಾರ್ಜಿ ದೇಸಾಯಿ ಹಾಗೂ ಮೌಲಾನಾ ಆಜಾದ್ ವಸತಿ ಪಿಯು ಕಾಲೇಜುಗಳಲ್ಲಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಮಾತ್ರವಲ್ಲದೇ ಎಸ್‌ಸಿ, ಎಸ್‌ಟಿ, ಹಿಂದುಳಿದ ವರ್ಗ ಹಾಗೂ ವಿಶೇಷಚೇತನ ವಿದ್ಯಾರ್ಥಿಗಳಿಗೂ ಈ ಕಾಲೇಜುಗಳಲ್ಲಿ ಪ್ರವೇಶಾತಿಗಾಗಿ ಶೇಕಡಾವಾರು ಮೀಸಲಾತಿ ಕಲ್ಪಿಸಲಾಗಿದೆ. ಮೀಸಲಾತಿ ವಿವರ ಈ ಕೆಳಗಿನಂತಿದೆ:
ಅಲ್ಪಸಂಖ್ಯಾತ ಸಮುದಾಯ ವಿದ್ಯಾರ್ಥಿಗಳಿಗೆ: 75%
ಎಸ್‌ಸಿ, ಎಸ್‌ಟಿ, ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ: 25%
ವಿಶೇಷಚೇತನ ವಿದ್ಯಾರ್ಥಿಗಳಿಗೆ: ಶೇಕಡಾ 4%