2025-26ನೇ ಸಾಲಿನಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ(NHM), ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ (ಹನಿ ನೀರಾವರಿ/Drip Irrigation Subsidy) ಅಡಿಯಲ್ಲಿ ಮಿನಿ ಟ್ರ್ಯಾಕ್ಟರ್(Mini Tractor) ಸೇರಿದಂತೆ ವಿವಿಧ ಘಟಕಗಳಿಗೆ ಸಬ್ಸಿಡಿ ಪಡೆಯಲು ಅರ್ಹ ರೈತರಿಂದ ಅರ್ಜಿಯನ್ನು ಅಹ್ವಾನಿಸಲಾಗಿದೆ.
ತೋಟಗಾರಿಕೆ(Horticulture crops) ಬೆಳೆಗಳನ್ನು ಬೆಳೆಯುತ್ತಿರುವವರು ಹಾಗೂ ಹೊಸದಾಗಿ ತೋಟಗಾರಿಕೆ ಬೆಳೆಯನ್ನು ಬೆಳೆಯಲು ಆಸಕ್ತಿಯನ್ನು ಹೊಂದಿರುವ ರೈತರು ಈ ಯೋಜನೆಯಡಿ ಆರ್ಥಿಕ ನೆರವನ್ನು ಪಡೆಯಲು ಅವಕಾಶವಿದ್ದು ಇದರ ಕುರಿತು ಸಂಪೂರ್ಣ ಅಗತ್ಯ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ.
ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ(Karnataka Horticulture Department), ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ (ಹನಿ ನೀರಾವರಿ) ಅಡಿಯಲ್ಲಿ ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ಅರ್ಹತ ಮಾನದಂಡಗಳೇನು? ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು? ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳೇನು? ಇನ್ನಿತರೆ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ಹಂಚಿಕೊಳ್ಳಲಾಗಿದೆ.
Mini Tractor Subsidy Application-ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ(NHM Scheme):
ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿಯಲ್ಲಿ ರೈತರಿಗೆ ವಿವಿಧ ಘಟಕಗಳಿಗೆ ಸಹಾಯಧನವನ್ನು ನೀಡಲಾಗುತ್ತದೆ ಇವುಗಳ ವಿವರ ಈ ಕೆಳಗಿನಂತಿದೆ.
1) ಹಣ್ಣು(ಬಾಳೆ), ಹೈಬ್ರಿಡ್ ತಕಾರಿಗಳ ಪ್ರದೇಶ ವಿಸ್ತರಣೆ ಮತ್ತು ಹೂವು ಪ್ರದೇಶ ವಿಸ್ತರಣೆ (ಕತ್ತರಿಸಿದ ಹೂ, ಗಡ್ಡೆ ಜಾತಿಯ ಹೂ, ಬಿಡಿ ಹೂ)/Floriculture
2) ವೈಯಕ್ತಿಕ ಕೃಷಿಹೊಂಡ/Farm Pond
3) ಸಣ್ಣ ಟ್ರ್ಯಾಕ್ಟರ್/ಮಿನಿ ಟ್ರ್ಯಾಕ್ಟರ್/Mini Tractor
4) ಪಾಲಿಹೌಸ್/Poly house
5) ನೆರಳು ಪರದೆ/Shade net
6) ಈರುಳ್ಳಿ ಶೇಖರಣಾ ಘಟಕ/Onion Storeage
7) ಎರೆಹುಳು ಘಟಕ/Vermicompost
8) ಜೇನುಪೆಟ್ಟಿಗೆ/Apiculture
9) ಪ್ಲಾಸ್ಟಿಕ್ ಮಲ್ಚಿಂಗ್/Plastic mulching
10) ಮಾವು ಪುನಃಶ್ಚೇತನ/Mango farm
11) ಪವರ್ ಟಿಲ್ಲರ್/Power tiller
12) ತಳ್ಳುವ ಗಾಡಿ ಘಟಕಗಳಿಗೆ ರೈತರಿಗೆ ಈ ಯೋಜನೆಯಡಿ ಸಹಾಯಧನ ಪಡೆಯಲು ಅವಕಾಶವಿರುತ್ತದೆ.
Drip Irrigation Subsidy-ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ (ಹನಿ ನೀರಾವರಿ):
ಈ ಯೋಜನೆಯಡಿ ಆಯ್ದ ಬೆಳೆಗಳಿಗೆ ನೀರಾವರಿ ಸೌಲಭ್ಯವನ್ನು ಒಸಗಿಸಲು ಹನಿ ನೀರಾವರಿ ಘಟಕ ಸ್ಥಾಪನೆ ಮಾಡಲು ಹಣ್ಣು ಮತ್ತು ತರಕಾರಿ ಬೆಳೆಗಳಿಗೆ ಹನಿ ನೀರಾವರಿ ಸಹಾಯಧನವನ್ನು ಪಡೆಯಲು ಅವಕಾಶವಿರುತ್ತದೆ.
Horticulture Department-ಯಾವೆಲ್ಲ ಜಿಲ್ಲೆಯಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ?
ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ, ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ (ಹನಿ ನೀರಾವರಿ) ಈ ಎರಡು ಯೋಜನೆಗಳು ರಾಜ್ಯದ ಎಲ್ಲಾ ಜಿಲ್ಲೆಗಳನ್ನು ಜಾರಿಯಲ್ಲಿದ್ದು ಅನುದಾನದ ಲಭ್ಯತೆಯ ಆದಾರದ ಮೇಲೆ ಅರ್ಜಿಯನ್ನು ಆಹ್ವಾನಿ ಅರ್ಹ ರೈತರಿಗೆ ಸಬ್ಸಿಡಿಯನ್ನು ನೀಡಲಾಗುತ್ತದೆ ಪ್ರಸ್ತುತ ಉತ್ತರಕನ್ನಡ ಮತ್ತು ಹುಬ್ಬಳಿಯಲ್ಲಿ ಅರ್ಜಿಯನ್ನು ಆಹ್ವಾನಿಸಲಾಗಿದೆ.
Subsidy Amount Details-ಎಷ್ಟು ಸಹಾಯಧನ ನೀಡಲಾಗುತ್ತದೆ?
ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ, ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ (ಹನಿ ನೀರಾವರಿ) ಯೋಜನೆಯಡಿಯಲ್ಲಿ ಶೇ 50% ನಿಂದ ಶೇ 90% ವರೆಗೆ ಸಬ್ಸಿಡಿಯನ್ನು ನೀಡಲಾಗುತ್ತದೆ.
Who Can Apply For This Scheme-ಯಾರೆಲ್ಲ ಅರ್ಜಿ ಸಲ್ಲಿಸಬಹುದು?
- ಅರ್ಜಿದಾರರು ತಮ್ಮ ಹೆಸರಿಗೆ ಸ್ವಂತ ಜಮೀನನ್ನು ಹೊಂದಿರಬೇಕು.
- ಅರ್ಜಿದಾರರು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
- ಸಣ್ಣ ಮತ್ತು ಅತೀ ಸಣ್ಣ ರೈತರ ವರ್ಗಕ್ಕೆ ಸೇರಿದವರಾಗಿರಬೇಕು.
- ತಮ್ಮ ಜಮೀನಿಗೆ ನೀರಾವರಿ ಸೌಲಭ್ಯವನ್ನು ಹೊಂದಿರಬೇಕು.
How To Apply-ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು?
ಅರ್ಹ ಮತ್ತು ಆಸಕ್ತ ರೈತರು ತಮ್ಮ ತಾಲೂಕಿನ ತೋಟಗಾರಿಕೆ ಇಲಾಖೆಯ ಹಿರಿಯ ತೋಟಗಾರಿಕಾ ನಿರ್ದೇಶಕರ ಕಚೇರಿಯನ್ನು ಭೇಟಿಯಾಗಿ ಅರ್ಜಿ ನಮೂನೆಯನ್ನು ಪಡೆದು, ಅಗತ್ಯ ದಾಖಲೆಗಳನ್ನು ಒದಗಿಸಿ ಅರ್ಜಿಯನ್ನು ಸಲ್ಲಿಸಬೇಕು.
Required Documents-ಅರ್ಜಿ ಸಲ್ಲಿಸಲು ದಾಖಲೆಗಳು:
- ಅರ್ಜಿದಾರ ರೈತರ ಆಧಾರ್ ಕಾರ್ಡ್ ಪ್ರತಿ
- ಬ್ಯಾಂಕ್ ಪಾಸ್‌ಬುಕ್ ಪ್ರತಿ
- ಅರ್ಜಿದಾರರ ಫೋಟೋ
- ಜಮೀನಿನ ಪಹಣಿ/ಉತಾರ/ಆರ್‌ಟಿಸಿ
- ರೇಷನ್ ಕಾರ್ಡ್ ಪ್ರತಿ
- ನೀರಾವರಿ ಮೂಲದ ಪ್ರಮಾಣ ಪತ್ರ/ಕೊಳವೆ ಬಾವಿ ಪ್ರಮಾಣ ಪತ್ರ
- ಗಣಕೀಕೃತ ಬೆಳೆ ದೃಢೀಕರಣ ಪತ್ರ
ಈ ವರ್ಗದ ರೈತರಿಗೆ ವೀಸಲಾತಿ ಸೌಲಭ್ಯವಿರುತ್ತದೆ:
ಪರಿಶಿಷ್ಟ ಜಾತಿ-17%, ಪರಿಶಿಷ್ಟ ಪಂಗಡ-7%, ಮಹಿಳೆ-33%, ಅಲ್ಪಸಂಖ್ಯಾತರು-5 % ಹಾಗೂ ಅಂಗವಿಕಲರಿಗೆ ಶೇ.3 ರಂತೆ ಮೀಸಲಾತಿಗೆ ಆದ್ಯತೆ ನೀಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
For More Information-ಹೆಚ್ಚಿನ ಮಾಹಿತಿ ಪಡೆಯಲು:
ಅಧಿಕೃತ ತೋಟಕಾರಿಗೆ ಇಲಾಖೆ ವೆಬ್ಸೈಟ್- Click here
ಸಹಾಯವಾಣಿ-1902