School Reopen Date 2025: ಕರ್ನಾಟಕದಲ್ಲಿ ಕೋವಿಡ್ ಸೋಂಕು ಹೆಚ್ಚಾಗುತ್ತಿದೆ. ಕೋವಿಡ್ 19 (ಜಿಎನ್ 1) ರೂಪಾಂತರ ತಳಿ ದೇಶದ ಹಲವರಲ್ಲಿ ಕಾಣಿಸಿಕೊಳ್ಳುತ್ತಿದೆ. ಅಲ್ಲದೇ ಬೆಂಗಳೂರಿನಲ್ಲಿ ಕೋವಿಡ್ ಸೋಂಕು ದೃಢಪಟ್ಟು 84 ವರ್ಷದ ವಯೋವೃದ್ಧರೊಬ್ಬರು ಮೃತಪಟ್ಟಿದ್ದಾರೆ. ಹೀಗಾಗಿ, ಶಾಲೆಗಳ ಪುನರಾರಂಭ ದಿನಾಂಕವನ್ನು ಮುಂದೂಡುವ ಬಗ್ಗೆ ಚರ್ಚೆ ಶುರುವಾಗಿದೆ. ಎಲ್ಲವೂ ಅಂದುಕೊಂಡತೆ ಆಗಿದ್ದರೆ ಮೇ 29ರ ಗುರುವಾರದಂದು ಶಾಲೆಗಳ ಪುನರಾರಂಭವಾಗಬೇಕಿತ್ತು. ವಿದ್ಯಾರ್ಥಿಗಳು ಶಾಲೆಗೆ ಹೋಗುವುದಕ್ಕೆ ಸಿದ್ಧರಾಗಿದ್ದಾರೆ. ಈ ರೀತಿ ಇರುವಾಗಲೇ ಮಕ್ಕಳು ಶಾಲೆಗೆ ಹೋಗುವುದಕ್ಕೆ ದೊಡ್ಡ ಅಡೆತಡೆ ಎದುರಾಗಿದೆ.
2019ರ ನಂತರ ಕೋವಿಡ್ ಸೋಂಕು ಮೂರು ವರ್ಷಗಳ ಕಾಲ ವಿಶ್ವದಾದ್ಯಂತ ಭಾರೀ ಆತಂಕ ಹಾಗೂ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿತ್ತು. ಇದೀಗ ಮಕ್ಕಳ ಶಾಲಾ ಪುನರಾರಂಭದ ಬಗ್ಗೆ ಚರ್ಚೆ ಶುರುವಾಗಿದೆ. ಮಕ್ಕಳ ಹಿತದೃಷ್ಟಿಯಿಂದ ಹಾಗೂ ಸುರಕ್ಷತೆಯ ಕಾರಣಕ್ಕೆ ಶಾಲೆಗಳ ಪುನರಾರಂಭವನ್ನು ಮುಂದೂಡುವ ಸಾಧ್ಯತೆ ಇದೆ. ಈ ಬಗ್ಗೆ ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ.
Is it possible that the reopening of schools will be postponed for this reason
2025 - 2026ನೇ ಸಾಲಿನ ಶೈಕ್ಷಣಿಕ ವರ್ಷವು ಪ್ರಾರಂಭವಾಗುವುದಕ್ಕೆ ಕ್ಷಣಗಣನೆ ಪ್ರಾರಂಭವಾಗಿದೆ. ಈ ರೀತಿ ಇರುವಾಗಲೇ ಭಾರೀ ದೊಡ್ಡ ಸಂಕಷ್ಟವೊಂದು ಎದುರಾಗಿದೆ. ಶಾಲೆಗಳ ಪುನರಾರಂಭ ಕೆಲವು ದಿನಗಳ ಮಟ್ಟಿಗೆ ಮುಂದೂಡಿಕೆಯಾಗುವ ಸಾಧ್ಯತೆ ಇದೆ. ಇಲ್ಲವೇ ಶಾಲಾ ಮಕ್ಕಳ ಹಿತದೃಷ್ಟಿಯಿಂದ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಮುನ್ಸೂಚನೆಯನ್ನು ನೀಡುವ ಸಾಧ್ಯತೆ ಇದೆ. ಈಗಾಗಲೇ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ರಾಜ್ಯ ಆರೋಗ್ಯ ಇಲಾಖೆಯು ನಿರ್ದೇಶನ ನೀಡಿದೆ. ಇದರೊಂದಿಗೆ ಕೆಲವೊಂದು ನಿರ್ದಿಷ್ಟ ಮಾರ್ಗಸೂಚಿಗಳನ್ನು ಸಹ ಬಿಡುಗಡೆ ಮಾಡಲಾಗಿದೆ.
ರಾಜ್ಯದಲ್ಲಿ ಶಾಲೆಗಳ ಪುನರಾರಂಭಕ್ಕೆ ಇನ್ನು ಕೇವಲ ಎರಡು ದಿನಗಳು ಮಾತ್ರ ಬಾಕಿ ಉಳಿದಿದ್ದು. ಇಷ್ಟರ ಒಳಗಾಗಿ ರಾಜ್ಯ ಸರ್ಕಾರವು ಯಾವ ನಿರ್ಧಾರವನ್ನು ತೆಗೆದುಕೊಳ್ಳಲಿದೆ ಎಂದು ಪೋಷಕರು ಸಹ ಎದುರು ನೋಡುತ್ತಿದ್ದಾರೆ. ಈಗಾಗಲೇ ಕೋವಿಡ್ ಬರುವ ಸಂದರ್ಭದಲ್ಲಿ ಯಾವ ರೀತಿಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎನ್ನುವ ಬಗ್ಗೆ ಜನಸಾಮಾನ್ಯರಿಗೆ ತಿಳವಳಿಕೆ ಇದೆ. ಆದರೆ, ಹೊಸ ರೂಪಾಂತರಿಯ ಲಕ್ಷಣಗಳು ಹಾಗೂ ಅದಕ್ಕೆ ಇನ್ನಷ್ಟು ಮುಂಜಾಗ್ರತೆ ಮೂಡಿಸುವ ಬಗ್ಗೆಯೂ ಸರ್ಕಾರ ಮುಂದಾಗಿದೆ.
ಶಾಲಾರಂಭದಲ್ಲೇ ಆತಂಕ: ಇನ್ನು ರಾಜ್ಯದಲ್ಲಿ ಶಾಲಾ ಮಕ್ಕಳ ತರಗತಿ ಪುನರಾರಂಭವಾಗುವ ಸಂದರ್ಭದಲ್ಲಿಯೇ ಕೋವಿಡ್ ಆತಂಕ ಎದುರಾಗಿರುವುದು ಪೋಷಕರ ಟೆಕ್ಷನ್‌ಗೆ ಕಾರಣವಾಗಿದೆ. ಆದರೆ, ಕೋವಿಡ್ ರೂಪಾಂತರಿ ಅಷ್ಟೊಂದು ಗಂಭೀರವಾಗಿಲ್ಲ. ಅಲ್ಲದೇ ಈಗಾಗಲೇ ಆರೋಗ್ಯ ಸಮಸ್ಯೆ ಇರುವವರು ಹಾಗೂ ವಯಸ್ಸಾದವರಿಗೆ ಎಚ್ಚರಿಕೆ ವಹಿಸಲು ಸೂಚನೆ ನೀಡಲಾಗಿದೆ. ಮಕ್ಕಳಿಗೂ ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲು ಹೇಳಲಾಗಿದೆ. ಆದರೆ, ಇದು ಗಂಭೀರ ಹಂತಕ್ಕೆ ಹೋಗಿಲ್ಲ. ಆದರೆ, ಈಗಾಗಲೇ ಆರೋಗ್ಯ ಸಮಸ್ಯೆ ಇದ್ದರೆ ಅಗತ್ಯ ಮುಂಜಾಗ್ರತಾ ಕ್ರಮ ವಹಿಸುವುದು ಉತ್ತಮ ಎಂದೇ ಹೇಳಲಾಗಿದೆ.