ಅಂಚೆ ಇಲಾಖೆ ನೇಮಕಾತಿ: ಬಳ್ಳಾರಿಯಲ್ಲಿ ಜೂನ್ 4ರಂದು ನೇರ ಸಂದರ್ಶನ

ಅಂಚೆ ಇಲಾಖೆ ನೇಮಕಾತಿ: ಬಳ್ಳಾರಿಯಲ್ಲಿ ಜೂನ್ 4ರಂದು ನೇರ ಸಂದರ್ಶನ

ಬಳ್ಳಾರಿ ಜಿಲ್ಲೆಯಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಪ್ರಮುಖವಾದ ಮಾಹಿತಿ ಇದೆ. ಜೂನ್ 4ರಂದು ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರ ಪ್ರತಿನಿಧಿ ಮತ್ತು ಮತ್ತು ಫೀಲ್ಡ್ ಆಫೀಸರ್‌ಗಳ ನೇಮಕಾತಿಗೆ ನೇರ ಸಂದರ್ಶನ ಆಯೋಜನೆ ಮಾಡಲಾಗಿದೆ.

ನೇರ ಪ್ರತಿನಿಧಿ ಮತ್ತು ಮತ್ತು ಫೀಲ್ಡ್ ಆಫೀಸರ್‌ಗಳ ನೇಮಕಕ್ಕಾಗಿ ಜೂನ್ 4 ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ, ಬಳ್ಳಾರಿ ನಗರದ ಕೋಟೆ ಆವರಣದ ಅಂಚೆ ಅಧೀಕ್ಷಕರ ಕಾರ್ಯಾಲಯದಲ್ಲಿ ನೇರ ಸಂದರ್ಶನ ಏರ್ಪಡಿಸಲಾಗಿದೆ.

Walk In Interview At Ballari On June 4

ಅರ್ಹ ಅಭ್ಯರ್ಥಿಗಳು ತಮ್ಮ ಇತ್ತೀಚಿನ ಭಾವಚಿತ್ರ ಹಾಗೂ ಶೈಕ್ಷಣಿಕ ಪ್ರಮಾಣ ಪತ್ರದ ನಕಲು ಪ್ರತಿಗಳ ಜೊತೆ ನೇರ ಸಂದರ್ಶನಕ್ಕೆ ಹಾಜರಾಗಬಹುದು. ಹೆಚ್ಚಿನ ಮಾಹಿತಿಗಾಗಿ ಡೆವಲಪ್‌ಮೆಂಟ್ ಆಫೀಸರ್ 9481694420 ಹಾಗೂ ಅಂಚೆ ಅಧೀಕ್ಷಕರ ಕಾರ್ಯಾಲಯ, ಹತ್ತಿರದ ಅಂಚೆ ಕಚೇರಿ ಅಥವಾ ದೂರವಾಣಿ ಸಂಖ್ಯೆ 08392-266037 ಅನ್ನು ಸಂಪರ್ಕಿಸಬಹುದು.

ಅಭ್ಯರ್ಥಿಗಳಿಗೆ ಅರ್ಹತೆಗಳು: ನೇರ ಸಂದರ್ಶನದಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳು 5 ಸಾವಿರಕ್ಕಿಂತ ಕಡಿಮೆ ಜನಸಂಖ್ಯೆ ಹೊಂದಿರುವ ಪ್ರದೇಶದಲ್ಲಿ ವಾಸಿಸುತ್ತಿದ್ದರೆ 10ನೇ ತರಗತಿ ಉತ್ತೀರ್ಣರಾಗಿರಬೇಕು.

5 ಸಾವಿರ ಹಾಗೂ ಅದಕ್ಕಿಂತ ಹೆಚ್ಚಿನ ಜನಸಂಖ್ಯೆ ಹೊಂದಿರುವ ಇತರೆ ಪ್ರದೇಶಗಳಿಗೆ 12ನೇ ತರಗತಿ ಉತ್ತೀರ್ಣರಾಗಿರಬೇಕು. ವಯೋಮಿತಿ ಕನಿಷ್ಠ 18 ವರ್ಷಗಳು, ಗರಿಷ್ಠ ವಯಸ್ಸಿನ ಮಿತಿ ಇರುವುದಿಲ್ಲ.

ನೇರ ಪ್ರತಿನಿಧಿಗಳು ಹುದ್ದೆಗೆ ನಿರುದ್ಯೋಗಿ ಹಾಗೂ ಸ್ವಯಂ ಉದ್ಯೋಗ ನಿರತ ಯುವಕರು, ಮಾಜಿ ವಿಮಾ ಕಂಪನಿಗಳ ಸಲಹೆಗಾರರು, ಅಂಗನವಾಡಿ ಕಾರ್ಯಕರ್ತೆಯರು, ಮಹಿಳಾ ಮಂಡಳಿಯ ಕಾರ್ಯಕರ್ತೆಯರು, ಮಾಜಿ ಗ್ರಾಮ ಪಂಚಾಯಿತಿಯ ಸದಸ್ಯರು ಅರ್ಹರಾಗಿರುತ್ತಾರೆ.

ಫೀಲ್ಡ್ ಆಫೀಸರ್ ಹುದ್ದೆಗೆ ನಿವೃತ್ತ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನೌಕರರು, ನಿವೃತ್ತ ಗ್ರಾಮೀಣ ಅಂಚೆ ಸೇವಕರು (ಜಿಡಿಎಸ್) ಅರ್ಹರಾಗಿರುತ್ತಾರೆ. ವಿಮಾ ಉತ್ಪನ್ನಗಳನ್ನು ಮಾರಾಟ ಮಾಡುವ ಅನುಭವ, ಕಂಪ್ಯೂಟರ್ ಜ್ಞಾನ ಅಥವಾ ಸ್ಥಳೀಯ ಪ್ರದೇಶದ ಜ್ಞಾನವಿರಬೇಕು.

ಆಯ್ಕೆಯಾದ ಅಭ್ಯರ್ಥಿಗಳು ರೂ. 5000ಗಳನ್ನು ರಾಷ್ಟ್ರೀಯ ಉಳಿತಾಯ ಪತ್ರ ಅಥವಾ ಕಿಸಾನ್ ವಿಕಾಸ ಪತ್ರದ ರೂಪದಲ್ಲಿ ಭದ್ರತಾ ಠೇವಣಿ ಇಡಬೇಕಾಗುತ್ತದೆ. ಆಯ್ಕೆಯಾದ ನೇರಪ್ರತಿನಿಧಿ ಮತ್ತು ಫೀಲ್ಡ್ಆಫೀಸರ್‌ಗಳಿಗೆ ಅವರು ಮಾಡಿದ ವ್ಯವಹಾರಕ್ಕೆ ತಕ್ಕಂತೆ ಸೂಕ್ತ ಕಮಿಷನ್ ನೀಡಲಾಗುವುದು. ಇದರ ಹೊರತಾಗಿ ಬೇರೆ ಯಾವುದೇ ನಿಗದಿತ ವೇತನ ಇರುವುದಿಲ್ಲ. ಅಭ್ಯರ್ಥಿಗಳು ಬೇರೆ ಯಾವುದೇ ವಿಮಾ ಕಂಪನಿ, ಸಂಸ್ಥೆ, ಸಂಘಗಳ ಏಜೆಂಟ್ ಆಗಿರಬಾರದು.

ದಾವಣಗೆರೆಯಲ್ಲಿ ಕೆಲಸ ಖಾಲಿ ಇದೆ: ವಿಕಲಚೇತನರ ಗ್ರಾಮೀಣ ಪುನರ್ವಸತಿ ಯೋಜನೆಯಡಿ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಗೌರವಧನ ಆಧಾರದ ಮೇಲೆ ಕಾರ್ಯನಿರ್ವಹಿಸಲು ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು 18 ರಿಂದ 45 ವರ್ಷ ವಯೋಮಾನದವರಾಗಿದ್ದು ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರಬೇಕು. ಕಂಪ್ಯೂಟರ್ ಜ್ಞಾನವಿರಬೇಕು. ವಿಕಲಚೇತನ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು ಮೇ 31 ಕೊನೆಯ ದಿನ.

ದಾವಣಗೆರೆ ತಾಲ್ಲೂಕು ಆಲೂರ ಹಟ್ಟಿ (ಶ್ರೀರಾಮನಗರ), ಹುಚ್ಚವ್ವನಹಳ್ಳಿ, ಹರಿಹರ ತಾಲ್ಲೂಕು ಉಕ್ಕಡಗಾತ್ರಿ ಮತ್ತು ಚನ್ನಗಿರಿ ತಾಲ್ಲೂಕಿನ ವಡ್ನಾಳು ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ವಾಸವಿರುವ ವಿಕಲಚೇತನ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು.

ಅರ್ಜಿ ಹಾಗೂ ಇತರೆ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿಗಳ ಕಛೇರಿ, ದೇವರಾಜ್ ಅರಸ್ ಬಡಾವಣೆ, 'ಬಿ' ಬ್ಲಾಕ್, ಶಿವಾಲಿ ಟಾಕೀಸ್ ಹತ್ತಿರ, ದಾವಣಗೆರೆ ಇವರನ್ನು ಸಂಪರ್ಕಿಸಿ ದೂರವಾಣಿ ಸಂಖ್ಯೆ 08192-263939, 9590829024.



Post a Comment

Previous Post Next Post

Top Post Ad

CLOSE ADS
CLOSE ADS
×