Free Tailoring Machine for womens 2025 - ಕರ್ನಾಟಕ ರಾಜ್ಯದಾದ್ಯಂತ ಅರ್ಹ ಮಹಿಳಾ ಫಲಾನುಭವಿಗಳಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಮಹಿಳೆಯರು ಮನೆಯಲ್ಲಿಯೇ ಕುಳಿತು ಸ್ವಾವಲಂಬಿಗಳಾಗಿ ಸ್ವಂತ ಉದ್ಯಮ ಆರಂಭಿಸಲು ಸಹಾಯವಾಗುವಂತೆ ಈ ಯೋಜನೆಯನ್ನು ಜಾರಿಗೆ ತಂದಿದ್ದು, ರಾಜ್ಯ ಸರ್ಕಾರದ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣ ಇಲಾಖೆ ಹಾಗೂ ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಮುಖಾಂತರ ಮಹಿಳೆಯರಿಗೆ ಈ ಯೋಜನೆಯ ಅಡಿಯಲ್ಲಿ ಉಚಿತ ಹೊಲಿಗೆ ಯಂತ್ರ ನೀಡಲಾಗುತ್ತಿದೆ.
ಸದ್ಯಕ್ಕೆ ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮವು ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದ್ದು ಅರ್ಜಿ ಸಲ್ಲಿಸುವ ಮಾಹಿತಿ ಇಲ್ಲಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಯಾವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು?
ಈ ಯೋಜನೆಗಾಗಿ ಅರ್ಜಿ ಸಲ್ಲಿಸುವಂತಹ ಮಹಿಳಾ ಅಭ್ಯರ್ಥಿಗಳು ಹಿಂದುಳಿದ ವರ್ಗಗಳಾದ ಪ್ರವರ್ಗ 1,2ಎ, 3ಎ ಹಾಗೂ 3ಬಿ ವರ್ಗಕ್ಕೆ ಸೇರಿದವರಾಗಿರಬೇಕು. ಅದೇ ರೀತಿ ಮಹಿಳೆಯರ ವಯಸ್ಸು 18 ವರ್ಷದಿಂದ ಗರಿಷ್ಠ 55 ವರ್ಷದ ಒಳಗಿರಬೇಕು. ಆದಾಯ ಮಿತಿ ನೋಡುವುದಾದರೆ ಕುಟುಂಬ ವಾರ್ಷಿಕ ವರಮಾನವು ಗ್ರಾಮೀಣ ಪ್ರದೇಶದ ಮಹಿಳೆಯರಿಗೆ 98,000ದೊಳಗಿರಬೇಕು ಹಾಗೂ ನಗರ ಪ್ರದೇಶದ ಮಹಿಳೆಯರಿಗೆ 1,20,000ರೂ. ಒಳಗಿರಬೇಕು.
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಹತೆ ಹೊಂದಿರುವಂತಹ ಮಹಿಳೆಯರು ನಿಮ್ಮ ಹತ್ತಿರದ ಗ್ರಾಮ ಒನ್ ಕೇಂದ್ರಕ್ಕೆ ಭೇಟಿ ನೀಡಿ ಸೇವಾ ಸಿಂಧು ಪೋರ್ಟಲ್ ಅನ್ ಮುಖಾಂತರ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ - 30ನೇ ಜೂನ್
2025
