ರಾಜ್ಯ ಸರ್ಕಾರದಿಂದ ಶಾಲೆಗಳಲ್ಲಿ ಬಿಸಿಯೂಟವನ್ನು(Bisi uta yojane) ತಯಾರು ಮಾಡುವ ಅಡುಗೆಯವರಿಗೆ ಪ್ರತಿ ತಿಂಗಳು ನೀಡುವ ಗೌರವಧನವನ್ನು ಹೆಚ್ಚಳ ಮಾಡಿ ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ.
2025-26ನೇ ಸಾಲಿನ ಅಯವ್ಯಯ ಭಾಷದ ಕಂಡಿಕೆ-109ರ ಘೋಷಣೆಯಂತೆ ಮಧ್ಯಾಹ್ನ ಉಪಹಾರ ಯೋಜನೆಯಡಿ(Bisi uta Scheme) ತಾತ್ಕಾಲಿಕವಾಗಿ ಕಾರ್ಯನಿರ್ವಹಿಸುತ್ತಿರುವ ಮುಖ್ಯ ಅಡುಗೆಯವರಿಗೆ ಮತ್ತು ಸಹಾಯಕ ಅಡುಗೆಯವರಿಗೆ ನೀಡಲಾಗುತ್ತಿರುವ ಮಾಸಿಕ ಗೌರವ ಸಂಭಾವನೆಯನ್ನು ಹೆಚ್ಚಳ ಮಾಡಿ ರಾಜ್ಯ ಸರ್ಕಾರವು ಅಧಿಕೃತ ಆದೇಶವನ್ನು ಪ್ರಕಟಿಸಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ರಾಜ್ಯ ಮತ್ತು ಕೇಂದ್ರ ಸರ್ಕಾರದ ಸಹಯೋಗದಲ್ಲಿ ಬಿಸಿಯೂಟದ ಅಡುಗೆ ತಯಾರಕರಿಗೆ ಮಾಸಿಕ ನೀಡುವ ಗೌರವ ಧನವನ್ನು ಹೆಚ್ಚಳ ಮಾಡಲಾಗಿದ್ದು, ಪ್ರಸ್ತುತ ಎಷ್ಟು ವೇತನವನ್ನು ಸಿಬ್ಬಂದಿಗೆ ನೀಡಲಾಗುತ್ತಿದೆ? ಈಗ ಹೆಚ್ಚಳ ಮಾಡಿರುವ ವೇತನದ ಮೊತ್ತ ಎಷ್ಟು? ಇನ್ನಿತರ ಅಗತ್ಯ ಮಾಹಿತಿಯನ್ನು ಈ ಕೆಳಗೆ ಹಂಚಿಕೊಳ್ಳಲಾಗಿದೆ.
Bisi uta workers salary-ಅಡುಗೆಯವರಿಗೆ ರೂ 1000/- ಹೆಚ್ಚಳ:
ಶಾಲೆಗಳಲ್ಲಿ ಬಿಸಿಯೂಟವನ್ನು ತಯಾರು ಮಾಡುವ ಸಿಬ್ಬಂದಿಗೆ ಪ್ರತಿ ತಿಂಗಳು ನೀಡುವ ಗೌರವ ಧನವನ್ನು ಹೆಚ್ಚಳ ಮಾಡುವ ಕುರಿತು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಅಧಿಕೃತ ಅದೇಶವನ್ನು ಹೊರಡಿಸಿದ್ದು ವೇತನ ಹೆಚ್ಚಳದ ಮಾಹಿತಿ ಈ ಕೆಳಗಿನಂತಿದೆ.
ಸಿಬ್ಬಂದಿ ವಿವರ ಈ ಹಿಂದಿನ ವೇತನ ಪ್ರಸ್ತುತ ಎಷ್ಟು ಹೆಚ್ಚಳ ಒಟ್ಟು ತಿಂಗಳಿಗೆ ವೇತನ
ಮುಖ್ಯ ಅಡುಗೆಯವರಿಗೆ ₹ 3,700/ ₹ 1,000/- ರೂ 4,700/-
ಸಹಾಯಕ ಅಡುಗೆಯವರಿಗೆ ₹ 3,600/- ₹ 1,000/- ರೂ 4,600/-
Bisi uta workers Payment-ಪ್ರತಿ ತಿಂಗಳು 5ನೇ ತಾರೀಖಿನ ಒಳಗೆ ವೇತನ ಪಾವತಿ:
ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಅಧಿಕೃತ ಅದೇಶದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳು ಅಡುಗೆ ತಯಾರು ಮಾಡುವ ಸಿಬ್ಬಂದಿಗಳಿಗೆ ತಪ್ಪದೇ ಪ್ರತಿ ಪ್ರತಿ ತಿಂಗಳು 5ನೇ ತಾರೀಖಿನ ಒಳಗಾಗಿ ವೇತನ ಪಾವತಿ ಮಾಡುವಂತೆ ಸೂಚನೆ ನೀಡಲಾಗಿದೆ.
School Workers Payment-ಸಿಬ್ಬಂದಿಯ ಬ್ಯಾಂಕ್ ಖಾತೆಗೆ ಹಣ ಪಾವತಿ:
ಸರ್ಕಾರಕ್ಕೆ ಸಂಬಂಧಪಟ್ಟ ಅಧಿಕೃತ ಇಲಾಖೆಯ ಬ್ಯಾಂಕ್ ಖಾತೆಯಿಂದ ನೇರ ನಗದು ವರ್ಗಾವಣೆ(DBT) ಮೂಲಕ ಪ್ರತಿ ತಿಂಗಳು ಗೌರವಧನವನ್ನು ಅಡುಗೆಯವರ ಬ್ಯಾಂಕ್ ಖಾತೆಗೆ ಜಮಾ ಮಾಡುವಂತೆ ಸೂಚಿಸಲಾಗಿದೆ.
Karnataka government school News-ಆದೇಶದಲ್ಲಿ ಇಲಾಖೆಯ ಅಧಿಕಾರಿಗಳು ಸಿಬ್ಬಂದಿಗಳಿಗೆ ವೇತನ ಪಾವತಿ ಕುರಿತಂತೆ ಈ ಕೆಳಗಿನ ನಿಯಮಗಳನ್ನು ಅನುಸರಿಸುವಂತೆ ಸೂಚನೆ ನೀಡಲಾಗಿದೆ:
1) ಆದೇಶದಲ್ಲಿ ಹೆಚ್ಚಿಸಲಾಗಿರುವ ಗೌರವ ಸಂಭಾವನೆಯಂತೆ ಮಧ್ಯಾಹ್ನ ಉಪಹಾರ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಮುಖ್ಯ ಅಡುಗೆಯವರಿಗೆ ಮತ್ತು ಸಹಾಯಕ ಅಡುಗೆಯವರಿಗೆ ಕೆಳಕಂಡಂತೆ ಒಟ್ಟಾರೆ ಮಾಸಿಕ ಸಂಭಾವನೆಯನ್ನು ಪಾವತಿಸಲು ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು. ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಕ್ರಮವಹಿತಕ್ಕದು ಎಂದು ಆದೇಶದಲ್ಲಿ ತಿಳಿಸಲಾಗಿದೆ.
2) ಮಧ್ಯಾಹ್ನ ಉಪಹಾರ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಮುಖ್ಯ ಅಡುಗೆಯವರು ಹಾಗೂ ಸಹಾಯಕ ಅಡುಗೆಯವರ ಮಾಸಿಕ ಸಂಭಾವನೆಯನ್ನು ನೇರ ಸೌಲಭ್ಯ ವರ್ಗಾವಣೆ ವೇದಿಕೆ (Direct Benefit Transfer) ಮೂಲಕವೇ ಪ್ರತಿ ತಿಂಗಳು 5ನೇ ತಾರೀಖಿನ ಒಳಗಡೆ ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಪಾವತಿಸತಕ್ಕದ್ದು.
3) ಈ ಆದೇಶದಲ್ಲಿ ಮಧ್ಯಾಹ್ನ ಉಪಹಾರ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಮುಖ್ಯ ಅಡುಗೆಯವರು ಹಾಗೂ ಸಹಾಯಕ ಅಡುಗೆಯವರಿಗೆ ಹೆಚ್ಚಿಸಲಾಗಿರುವ ರೂ.1000/-ಗಳ ಮಾಸಿಕ ಸಂಭಾವನೆ ಮೊತ್ತವನ್ನು ಪಾವತಿಸಲು ಅಗತ್ಯವಿರುವ ಅನುದಾನವನ್ನು ರಾಜ್ಯ ಯೋಜನೆ ಕ್ಷೀರಭಾಗ್ಯ ಶೀರ್ಷಿಕೆ: 324 ರಡಿ ನಿಗದಿಯಾಗಿರುವ ರೂ.41206.31 ಲಕ್ಷಗಳ ಅನುದಾನದಿಂದ ಪಾವತಿಸತಕ್ಕದ್ದು.
4) ಅಡುಗೆ ಸಿಬ್ಬಂದಿಗಳ ಪಾವತಿಸಬೇಕಾಗಿರುವ ಮಾಸಿಕ ಗೌರವ ಸಂಭಾವನೆಯನ್ನು ನಿಯಮಾನುಸಾರ ಪರಿಶೀಲಿಸಿ ಪ್ರತಿ ತಿಂಗಳ 5ನೇ ತಾರೀಖಿನೊಳಗಾಗಿ ಪಾವತಿಯಾಗಿರುವ ಬಗ್ಗೆ ಸಂಬಂಧಿಸಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಖಚಿತಪಡಿಸಿಕೊಳ್ಳತಕ್ಕದ್ದು.
5) SATS ತಂತ್ರಾಂಶದಲ್ಲಿ ಮಧ್ಯಾಹ್ನ ಉಪಹಾರ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಅಡುಗೆ ಸಿಬ್ಬಂದಿಗಳ ವಿವರ ಮತ್ತು ಸದರಿ ಸಿಬ್ಬಂದಿಗಳಿಗೆ ಪ್ರತಿ ತಿಂಗಳು ಗೌರವ ಸಂಭಾವನೆಯನ್ನು ಪಾವತಿಸಲಾಗಿರುವ ಅಡುಗೆ ಸಿಬ್ಬಂದಿಗಳ ಮಾಹಿತಿಯನ್ನು ಸಂಗ್ರಹಿಸತಕ್ಕದ್ದು.
6) ಮಧ್ಯಾಹ್ನ ಉಪಹಾರ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಅರ್ಹ ಅಡುಗೆ ಸಿಬ್ಬಂದಿಗಳಿಗೆ ಪ್ರತಿ ತಿಂಗಳು ಗೌರವ ಸಂಭಾವನೆ ಪಾವತಿಯಾಗಿರುವ ಬಗ್ಗೆ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ ರವರು, ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕರಿಗಳು ಮತ್ತು ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಿಂದ SATS ತಂತ್ರಾಂಶದ ಮೂಲಕ ಪ್ರತಿ ತಿಂಗಳು 05ನೇ ತಾರೀಖಿನೊಳಗಾಗಿ ದೃಢೀಕರಣ ಪತ್ರವನ್ನು ಪಡೆಯತಕ್ಕದ್ದು.
7) ಅಡುಗೆ ಸಿಬ್ಬಂದಿಗಳಿಗೆ ಬಿಸಿಯೂಟವನ್ನು ಸಿದ್ಧಪಡಿಸುವಾಗ ಅನುಸರಿಸಬೇಕಾಗಿರುವ ಸ್ವಚ್ಛತೆ ಮತ್ತು ಸುರಕ್ಷತಾ ಕ್ರಮಗಳ ಕುರಿತು ಕಾಲಕಾಲಕ್ಕೆ ಕಡ್ಡಾಯವಾಗಿ ತರಬೇತಿಯನ್ನು ನೀಡತಕ್ಕದ್ದು.
8) ರಾಜ್ಯ ಹಾಗೂ ಕೇಂದ್ರ ಸರ್ಕಾರದ ಇತರೆ ಯೋಜನೆ/ಕಾರ್ಯಕ್ರಮಗಳಡಿ ಆರೋಗ್ಯ ವಿಮೆ. ಜೀವ ವಿಮೆ, ಗುಂಪು ವಿಮೆ, ಅಪಘಾತ ವಿಮೆ ಹಾಗೂ ಇತರೆ ಸೌಲಭ್ಯಗಳನ್ನು ಅಡುಗೆ ಸಿಬ್ಬಂದಿಗಳು ಪಡೆಯಲು ನಿಯಮಗಳಂತೆ ಅವಕಾಶವಿದ್ದಲ್ಲಿ ಅಂತಹ ಸೌಲಭ್ಯವನ್ನು ಕಡ್ಡಾಯವಾಗಿ ಅಡುಗೆ ಸಿಬ್ಬಂದಿಗಳಿಗೆ ಒದಗಿಸಲು ಅಗತ್ಯ ಕ್ರಮವಹಿತಕ್ಕದ್ದು ಹಾಗೂ ಈ ಸಂಬಂಧ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ ಇವರು ಸುತ್ತೋಲೆಯನ್ನು ಹೊರಡಿಸತಕ್ಕದ್ದು ಎಂದು ಆದೇಶದಲ್ಲಿ ತಿಳಿಸಲಾಗಿದೆ.