ಹೀರೋ ಗ್ರೂಪ್‌ನ(Here Group Scholorship) "ರಾಮನ್ ಕಾಂತ್ ಮುಂಜಾಲ್ ಫೌಂಡೇಶನ್" ನಿಂದ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಹಣಕಾಸು ಕ್ಷೇತ್ರದಲ್ಲಿ ಉನ್ನತ ವ್ಯಾಸಂಗಕ್ಕೆ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ಬೆಂಬಲವನ್ನು ನೀಡಲು ಸ್ಕಾಲರ್‌ಶಿಪ್ ಒದಗಿಸಲು ಅರ್ಹ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
2025-26 ನೇ ಶೈಕ್ಷಣಿಕ ಸಾಲಿನಲ್ಲಿ ದೇಶದ ವಿವಿಧ ಕಾಲೇಜುಗಳಲ್ಲಿ ಫೈನಾನ್ಸ್ ವಿಷಯಕ್ಕೆ(Finance Student Scholorship) ಸಂಬಂಧಪಟ್ಟ ಪದವಿಗಳಿಗೆ ಪ್ರವೇಶವನ್ನು ಪಡೆದ ವಿದ್ಯಾರ್ಥಿಗಳಿಗೆ "ರಾಮನ್ ಕಾಂತ್ ಮುಂಜಾಲ್ ಫೌಂಡೇಶನ್" ನಿಂದ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಭರವಸೆಯ ವೃತ್ತಿಜೀವನ ಮತ್ತು ಉಜ್ವಲ ಭವಿಷ್ಯದ ಕನಸುಗಳನ್ನು ಮುಂದುವರಿಸಲು ಸಹಾಯ ಮಾಡುವ ಗುರಿಯನ್ನು ಈ ಫೌಂಡೇಶನ್ ಹೊಂದಿದೆ.
ಪ್ರಸ್ತುತ ರಾಮನ್ ಕಾಂತ್ ಮುಂಜಾಲ್ ಫೌಂಡೇಶನಿನ ವಿದ್ಯಾರ್ಥಿವೇತನವನ್ನು ಪಡೆಯಲು ವಿದ್ಯಾರ್ಥಿಗಳು ಯಾವೆಲ್ಲ ಕ್ರಮಗಳನ್ನು ಅನುಸರಿಸಬೇಕು? ವಿದ್ಯಾರ್ಥಿವೇತನವನ್ನು ಪಡೆಯಲು ನಿಗದಿಪಡಿಸಿದ ಮಾನದಂಡಗಳೇನು? ಅರ್ಜಿ ಸಲ್ಲಿಸುವ ವಿಧಾನ ಹೇಗೆ? ಅರ್ಜಿ ಸಲ್ಲಿಸಲು ದಾಖಲಾತಿ ಸೇರಿದಂತೆ ಇನ್ನಿತರೆ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ಹಂಚಿಕೊಳ್ಳಲಾಗಿದೆ.
Scholorship Amount-ಎಷ್ಟು ವಿದ್ಯಾರ್ಥಿವೇತನ ನೀಡಲಾಗುತ್ತದೆ?
ಅರ್ಜಿ ಸಲ್ಲಿಸಿ ಆಯ್ಕೆಯಾದ ಅರ್ಹ ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ಪೂರ್ಣಗೊಳಿಸಲು ಮೂರು ವರ್ಷಗಳವರೆಗೆ ವರ್ಷಕ್ಕೆ 40,000 INR ನಿಂದ 5,50,000 INR ವರೆಗಿನ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ ಎಂದು ಅಧಿಕೃತ ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.
Last Date For Application-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30 ಜುಲೈ 2025
Who Can Apply For Finance Student Scholorship-ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಸಲ್ಲಿಸಲು ಅರ್ಹ ವಿದ್ಯಾರ್ಥಿಗಳು:
ಅರ್ಜಿದಾರ ವಿದ್ಯಾರ್ಥಿಯು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
ವಿದ್ಯಾರ್ಥಿಯು ಬಿಬಿಎ, ಬಿಎಫ್‌ಐಎ, ಬಿ.ಕಾಂ. (ಎಚ್, ಇ), ಬ್ಯಾಚುಲರ್ ಆಫ್ ಮ್ಯಾನೇಜ್‌ಮೆಂಟ್ ಸ್ಟಡೀಸ್ (ಬಿಎಂಎಸ್), ಇಂಟಿಗ್ರೇಟೆಡ್ ಪ್ರೋಗ್ರಾಂ ಇನ್ ಮ್ಯಾನೇಜ್‌ಮೆಂಟ್ (ಐಪಿಎಂ), ಬಿಎ (ಅರ್ಥಶಾಸ್ತ್ರ), ಬ್ಯಾಚುಲರ್ ಇನ್ ಬಿಸಿನೆಸ್ ಸ್ಟಡೀಸ್ (ಬಿಬಿಎಸ್) ಅಥವಾ ಯಾವುದೇ ಇತರ ಹಣಕಾಸು ಸಂಬಂಧಿತ ಪದವಿ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡಲು ಪ್ರವೇಶವನ್ನು ಪಡೆದಿರಬೇಕು.
ಅರ್ಜಿದಾರರು 10 ಮತ್ತು 12 ನೇ ತರಗತಿಗಳಲ್ಲಿ ಕನಿಷ್ಠ 80% ಅಂಕಗಳನ್ನು ಪಡೆದಿರಬೇಕು
ಅಂಗವೈಕಲ್ಯ ವಿದ್ಯಾರ್ಥಿಗಳು, ಕನಿಷ್ಠ 70% ಅಂಕಗಳನ್ನು ಪಡೆದಿರಬೇಕು.
ಅರ್ಜಿದಾರ ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯವು INR 6 ಲಕ್ಷಕ್ಕಿಂತ ಕಡಿಮೆ ಇರಬೇಕು.
ಹೀರೋ ಫಿನ್‌ಕಾರ್ಪ್, ರಾಮನ್ ಕಾಂತ್ ಮುಂಜಾಲ್ ಫೌಂಡೇಶನ್ ಉದ್ಯೋಗಿಗಳು/ಗುತ್ತಿಗೆ ನೌಕರರ ಮಕ್ಕಳು ಅರ್ಜಿ ಸಲ್ಲಿಸಲು ಅರ್ಹರಲ್ಲ ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
How To Apply-ಅರ್ಜಿಯನ್ನು ಸಲ್ಲಿಸುವುದು ಹೇಗೆ?
ಈ ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಹ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಮಾತ್ರವೇ ಅರ್ಜಿ ಸಲ್ಲಿಸಲು ಅವಕಾಶವಿದ್ದು ಅರ್ಜಿಯನ್ನು ಸಲ್ಲಿಸುವ ವಿಧಾನದ ಮಾಹಿತಿಯನ್ನು ತಿಳಿಯಲು ಈ ಕೆಳಗೆ ತಿಳಿಸಿರುವ ವಿಧಾನವನ್ನು ವಿದ್ಯಾರ್ಥಿಗಳು ಅನುಸರಿಸಬೇಕು.
ವಿಶೇಷ ಸೂಚನೆ- ಇಲ್ಲಿ ಪಟ್ಟಿಯಲ್ಲಿರುವ College List ಕಾಲೇಜು/ಸಂಸ್ಥೆಗಳ ವಿದ್ಯಾರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Online Apply Method-ಅಧಿಕೃತ ಜಾಲತಾಣ ಪ್ರವೇಶ ಮಾಡಿ ಅರ್ಜಿ ಸಲ್ಲಿಸುವ ವಿಧಾನ:
ವಿದ್ಯಾರ್ಥಿವೇತನವನ್ನು ಪಡೆಯಲು ವಿದ್ಯಾರ್ಥಿಗಳು ಈ ಕೆಳಗಿನ ವಿಧಾನವನ್ನು ಅನುಸರಿಸಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶವನ್ನು ನೀಡಲಾಗಿದ್ದು ಇದರ ವಿವರ ಈ ಕೆಳಗಿನಂತಿದೆ.
Step-1: ಪ್ರಥಮದಲ್ಲಿ ಇಲ್ಲಿ ಕ್ಲಿಕ್ ಮಾಡಿ "Apply Now" ಅಧಿಕೃತ ವೆಬ್ಸೈಟ್ ಅನ್ನು ಭೇಟಿ ಮಾಡಬೇಕು.
Step-2: ತದನಂತರ ಈ ಪೇಜ್ ನಲ್ಲಿ ಬಲಬದಿಯಲ್ಲಿ ಕಾಣುವ "Apply Now" ಆಯ್ಕೆಯ ಮೇಲೆ ಕ್ಲಿಕ್ ಮಾಡಿ, ಮೊದಲ ಬಾರಿಗೆ ಈ ವೆಬ್ಸೈಟ್ ಅನ್ನು ಪ್ರವೇಶ ಮಾಡುತ್ತಿರುವ ಅರ್ಜಿದಾರರು “Create an Account” ಆಯ್ಕೆಯ ಮೇಲೆ ಕ್ಲಿಕ್ ಮಾಡಿ ಖಾತೆಯನ್ನು ರಚಿಸಿಕೊಳ್ಳಬೇಕು ಬಳಿಕ “Login” ಬಟನ್ ಕ್ಲಿಕ್ ಮಾಡಿ ಲಾಗಿನ್ ಅಗಬೇಕು.
Step-3: ಮೇಲಿನ ಹಂತವನ್ನು ಪೂರ್ಣಗೊಳಿಸಿ ಲಾಗಿನ್ ಅದ ಬಳಿಕ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ ಇಲ್ಲಿ ಕೇಳುವ ಎಲ್ಲಾ ಅಗತ್ಯ ಮಾಹಿತಿ ಮತ್ತು ಅವಶ್ಯಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ ಕೊನೆಯಲ್ಲಿ "Submit" ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.
Required Documents For Finance Scholorship Application-ಅರ್ಜಿ ಸಲ್ಲಿಸಲು ಒದಗಿಸಬೇಕಾದ ದಾಖಲೆಗಳು:
ವಿದ್ಯಾರ್ಥಿಯ ಆಧಾರ್ ಕಾರ್ಡ/Aadhar
ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಬುಕ್ ಪ್ರತಿ/Bank Pass Book
ಪೋಟೋ/Photo
ಮತ್ತು ನೇ ತರಗತಿ ಅಂಕಪಟ್ಟಿ/Marks Card
ಪೋಷಕರ ಪ್ಯಾನ್ ಕಾರ್ಡ ಮತ್ತು ಆಧಾರ್ ಕಾರ್ಡ/Pan Card
ಆದಾಯ ಪ್ರಮಾಣ ಪತ್ರ/Income Certificate
ಕಾಲೇಜು ಪ್ರವೇಶ ಪ್ರಮಾಣ ಪತ್ರ/Study Certificate
For More Information-ಹೆಚ್ಚಿನ ಮಾಹಿತಿಗಾಗಿ:
Scholorship Application Link-ಅರ್ಜಿ ಸಲ್ಲಿಸಲು ವೆಬ್ಸೈಟ್ ಲಿಂಕ್- Apply Now
buddy4study website-ಹೆಚ್ಚಿನ ಮಾಹಿತಿಯನ್ನು ಪಡೆಯಲು ಅಧಿಕೃತ ಲಿಂಕ್-Click Here