Free Hostel Application-ಉಚಿತ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಇನ್ನು 4 ದಿನ ಮಾತ್ರ ಬಾಕಿ

Free Hostel Application-ಉಚಿತ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಇನ್ನು 4 ದಿನ ಮಾತ್ರ ಬಾಕಿ

2025-26 ನೇ ಸಾಲಿನ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳಿಗೆ(Free Hostel Application) ಹೊಸದಾಗಿ ಪ್ರವೇಶವನ್ನು ಬಯಸುವ ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈ ಹಿಂದೆ ನಿಗದಿಪಡಿಸಿದ ಕೊನೆಯ ದಿನಾಂಕವನ್ನು ವಿಸ್ತರಣೆ ಮಾಡಿ ಅಧಿಕೃತ ಆದೇಶವನ್ನು ಇಲಾಖೆಯಿಂದ ಹೊರಡಿಸಲಾಗಿದೆ.

ಪ್ರಸ್ತುತ ನೂತನ ಆದೇಶದಲ್ಲಿ ಯಾವೆಲ್ಲ ವಿಷಯಗಳನ್ನು ಉಲ್ಲೇಖಿಸಲಾಗಿದೆ? ವಿದ್ಯಾರ್ಥಿನಿಲಯಗಳಿಗೆ(Free Hostel Admission) ಹೊಸದಾಗಿ ಪ್ರವೇಶವನ್ನು ಬಯಸುವ ವಿದ್ಯಾರ್ಥಿಗಳು ಈ ಯೋಜನೆಯ ಪ್ರಯೋಜವನ್ನು ಪಡೆಯುವುದು ಹೇಗೆ? ಇನ್ನಿತರೆ ಸಂಪೂರ್ಣ ಅಗತ್ಯ ಮಾಹಿತಿಯನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಇದರೊಟ್ಟಿ ಈ ಅಂಕಣದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ(Government of karnataka) ಪ್ರಸ್ತುತ ಉಚಿತ ಹಾಸ್ಟೆಲ್ ಪ್ರವೇಶವನ್ನು ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸಲು ಅವಶ್ಯಕ ದಾಖಲಾತಿಗಳೇನು? ಇನ್ನಿತರೆ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ತಿಳಿಸಲಾಗಿದೆ.

Free Hostel Admission last date-ಅರ್ಜಿ ಸಲ್ಲಿಸಲು ಇನ್ನು 4 ದಿನ ಮಾತ್ರ ಬಾಕಿ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಈ ಹಿಂದೆ ಅರ್ಹ ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 15 ಜೂನ್ 2025 ಕೊನೆಯ ದಿನಾಂಕ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿತ್ತು ಕೆಲವು ತಾಂತ್ರಿಕ ಸಮಸ್ಯೆಗಳಿಂದ ಇನ್ನು ಅನೇಕ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವುದು ಬಾಕಿಯಿರುವ ಕಾರಣ ಇಲಾಖೆಯಿಂದ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು : 25 ಜೂನ್ 2025 ರವರೆಗೆ ವಿಸ್ತರಣೆ ಮಾಡಿರುವ ಕಾರಣ ಅರ್ಜಿ ಸಲ್ಲಿಸಲು ಇನ್ನು 4 ದಿನ ಅವಕಾಶವಿರುತ್ತದೆ.

Free Hostel Official Notification-ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿರುವ ಮಾಹಿತಿ ಹೀಗಿದೆ:

2025-26ನೇ ಸಾಲಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಕಲ್ಪಿಸಲು ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದ್ದು, ದಿನಾಂಕ:15 ಜೂನ್ 2025 ರವರೆಗೆ ಅವಕಾಶವನ್ನು ಕಲ್ಪಿಸಲಾಗಿದೆ. ಕೆಲವು ತಾಂತ್ರಿಕ ಸಮಸ್ಯೆಗಳಿಂದ ಅರ್ಜಿ ಸಲ್ಲಿಸಲು ಸಾಧ್ಯವಾಗಿರುವುದಿಲ್ಲವೆಂದು. ಅರ್ಜಿ ಸಲ್ಲಿಕೆಯ ದಿನಾಂಕವನ್ನು ವಿಸ್ತರಿಸುವಂತೆ ಕೆಲವೊಂದು ಜಿಲ್ಲೆಗಳಿಂದ ಮನವಿಗಳು ಸ್ವೀಕೃವಾಗಿರುತ್ತದೆ.

ಈ ಹಿನ್ನೆಲೆಯಲ್ಲಿ ಅರ್ಜಿ ಸಲ್ಲಿಕೆಯ ದಿನಾಂಕವನ್ನು ದಿನಾಂಕ: 25 ಜೂನ್ 2025 ರವರೆಗೆ ವಿಸ್ತರಿಸಲಾಗಿದ್ದು ಈ ಕುರಿತು ಪ್ರಕಟಣೆಯನ್ನು ಜಿಲ್ಲಾಮಟ್ಟದ ಎಲ್ಲಾ ದಿನಪತ್ರಿಕೆಗಳಲ್ಲಿ ಉಚಿತವಾಗಿ 3 ದಿನಗಳ ಕಾಲ ಪ್ರಚುರ ಪಡಿಸುವಂತೆ ಹಾಗೂ ಎಲ್ಲಾ ಸರ್ಕಾರದ ಕಛೇರಿಗಳು ಮತ್ತು ಶಾಲೆಗಳ ನಾಮಫಲಕಗಳಲ್ಲಿ ಪ್ರಕಟಿಸಲು ಕ್ರಮವಹಿಸುವಂತೆ ಸೂಚಿಸಲಾಗಿದೆ ಎಂದು ಅಧಿಕೃತ ನೂತನ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Free Hostel Official Order Copy-ಅಧಿಕೃತ ಪ್ರಕಟಣೆ ಪ್ರತಿ:

Eligibility Criteria For Free Hostel Admission-ಅರ್ಜಿ ಸಲ್ಲಿಸಲು ಅರ್ಹರು:

ವಿದ್ಯಾರ್ಥಿಯು ಸರ್ಕಾರಿ ಅಥವಾ ಸರ್ಕಾರಿ ಅಂಗೀಕೃತ ಶಾಲೆಯಲ್ಲಿ 5 ರಿಂದ 10ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರಬೇಕು.

ವಿದ್ಯಾರ್ಥಿ ಪೋಷಕರ ವಾರ್ಷಿಕ ಆದಾಯವು ಪ್ರವರ್ಗ-1ರ ಮತ್ತು ಎಸ್.ಸಿ ಅಥವಾ ಎಸ್.ಟಿ ವಿದ್ಯಾರ್ಥಿಗಳಿಗೆ ರೂ.2.50 ಲಕ್ಷ ಹಾಗೂ ಪ್ರವರ್ಗ 2ಎ, 2ಬಿ, 3ಎ, 3ಬಿಯ ವಿದ್ಯಾರ್ಥಿಗಳಿಗೆ ರೂ.1.00 ಲಕ್ಷ ದ ಒಳಗಿರಬೇಕು.

Karnataka Free Hostel Facility-ವಿದ್ಯಾರ್ಥಿಗಳಿಗೆ ಉಚಿತ ಹಾಸ್ಟೆಲ್ ನಲ್ಲಿರುವ ಸೌಲಭ್ಯಗಳು:

ಪ್ರತಿ ವಿದ್ಯಾರ್ಥಿಗೆ ಪ್ರತಿ ತಿಂಗಳು ರೂ.1750/- ವೆಚ್ಚದಲ್ಲಿ 10 ತಿಂಗಳ ಅವಧಿಗೆ ಆಹಾರವನ್ನು ಒದಗಿಸಲು ಸರ್ಕಾರ ವೆಚ್ಚ ಭರಿಸಲಾಗುತ್ತದೆ.

ವಿದ್ಯಾರ್ಥಿಗಳಿಗೆ ಸಂಪೂರ್ಣ ಉಚಿತ ವಸತಿ ಸೌಕರ್ಯವನ್ನು ಒದಗಿಸಲಾಗುತ್ತದೆ.

ಪ್ರತಿ ವಿದ್ಯಾರ್ಥಿಗೆ ವರ್ಷಕ್ಕೆ 2 ಜೊತೆ ಸಮವಸ್ತ್ರ ವನ್ನು ಒದಗಿಸಲಾಗುತ್ತದೆ.

ಪ್ರತಿ ಬಾಲಕ ವಿದ್ಯಾರ್ಥಿಗೆ ಎರಡು ತಿಂಗಳಿಗೊಮ್ಮೆ ರೂ.60/-ರಂತೆ ಕ್ಷೌರದ ವೆಚ್ಚ ನೀಡಲಾಗುತ್ತದೆ (ವಾರ್ಷಿಕ 5 ಬಾರಿಗೆ).

ಪ್ರತಿ ವಿದ್ಯಾರ್ಥಿಗೆ ಪಠ್ಯ ಪುಸ್ತಕ ಮತ್ತು ಲೇಖನ ಸಾಮಗ್ರಿ ಒದಗಿಸಲಾಗುತ್ತದೆ.

ಪ್ರತಿ ವಿದ್ಯಾರ್ಥಿಗೂ ಸಹ ಆರ್ಥಿಕ ಮಿತಿಗೆ ಒಳಪಟ್ಟು ವೈದ್ಯಕೀಯ ವೆಚ್ಚ ಭರಿಸಲು ಅವಕಾಶವಿರುತ್ತದೆ.

Free Hostel Online Application-ಆನ್ಲೈನ್ ಮೂಲಕ ಅಪ್ಲಿಕೇಶನ್ ಅನ್ನು ಸಲ್ಲಿಸುವ ವಿಧಾನ:

ಹಾಸ್ಟೆಲ್ ಅನ್ನು ಪಡೆಯಲು ಆಸಕ್ತ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶವಿದ್ದು ಈ ಕೆಳಗಿನ ವಿಧಾನವನ್ನು ಅನುಸರಿಸಿ ಮನೆಯಲ್ಲೇ ಕುಳಿತು ತಮ್ಮ ಮೊಬೈಲ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

Step-1: ಪ್ರಥಮದಲ್ಲಿ Apply Now ಇಲ್ಲಿ ಕ್ಲಿಕ್ ಮಾಡಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ರಾಜ್ಯ ಸರ್ಕಾರದಿಂದ ನಿಗದಿಪಡಿಸಿರುವ ವೆಬ್ಸೈಟ್ ಅನ್ನು ಪ್ರವೇಶ ಮಾಡಬೇಕು.

Step-2: ಅಧಿಕೃತ ಜಾಲತಾಣವನ್ನು ಪ್ರವೇಶ ಮಾಡಿದ ನಂತರ ಇಲ್ಲಿ ಮುಖಪುಟದಲ್ಲಿ ಎಡಬದಿಯಲ್ಲಿ ಕಾಣುವ "Pre Matric" ಬಟನ್ ಮೇಲೆ ಕ್ಲಿಕ್ ಮಾಡಿ ಮುಂದುವರೆಯಬೇಕು.

Step-3: ನಂತರ ಈ ಪೇಜ್ ನಲ್ಲಿ "Do you have State Scholarship Account? Yes/NO ಎಂದು ಪ್ರಶ್ನೆಯನ್ನು ಕೇಳುತ್ತದೆ ಇದಕ್ಕೆ ಉತ್ತರಿಸಿ ಮುಂದಿನ ಪೇಜ್ ನಲ್ಲಿ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ ಇಲ್ಲಿ ವಿದ್ಯಾರ್ಥಿಗಳು ಎಲ್ಲಾ ಅಗತ್ಯ ವಿವರಗಳನ್ನು ಭರ್ತಿ ಮಾಡಿ ಕೊನೆಯಲ್ಲಿ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ "Submit" ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.

Documents-ಅರ್ಜಿಯನ್ನು ಸಲ್ಲಿಸಲು ಅವಶ್ಯಕ ದಾಖಲೆಗಳು:

1) ವಿದ್ಯಾರ್ಥಿಯ ಆಧಾರ್ ಕಾರ್ಡ ಪ್ರತಿ/Aadhar card

2) ವಿದ್ಯಾರ್ಥಿಯ ಶಾಲಾ ದಾಖಲಾತಿ ಪತ್ರ/School Admission

3) ವಿದ್ಯಾರ್ಥಿ ಪೋಟೋ/Photo

4) ವಿದ್ಯಾರ್ಥಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ/Caste and Income Certificate

5) ವಿದ್ಯಾರ್ಥಿ ವ್ಯಾಸಂಗ ಪ್ರಮಾಣ ಪತ್ರ/Study Certificate

6) ಮೊಬೈಲ್ ನಂಬರ್/Mobile Number

Free Hostel In Karnataka-ರಾಜ್ಯದಲ್ಲಿರುವ ವಿದ್ಯಾರ್ಥಿನಿಲಯಗಳ ಅಂಕಿ-ಅಂಶ:

ರಾಜ್ಯದಲ್ಲಿರುವ ಒಟ್ಟು ಮೆಟ್ರಿಕ್-ಪೂರ್ವ ಹಾಸ್ಟೆಲ್ ಗಳು- 1277

ಬಾಲಕರ ಹಾಸ್ಟೆಲ್ ಗಳು- 993

ಬಾಲಕಿಯರ ಹಾಸ್ಟೆಲ್ ಗಳು- 284

ಒಟ್ಟು ಎಷ್ಟು ವಿದ್ಯಾರ್ಥಿಗಳು- 68,803

For More Information-ಇದರ ಕುರಿತು ಇನ್ನು ಅಧಿಕ ಮಾಹಿತಿಯನ್ನು ಪಡೆಯಲು ಉಪಯುಕ್ತ ಕೊಂಡಿಗಳು:

ಉಚಿತ ವಿದ್ಯಾರ್ಥಿನಿಯಲದ ಅಧಿಕೃತ ಪ್ರಕಟಣೆ - Download Now

ಇಲಾಖೆಯ ಸಹಾಯವಾಣಿ ಸಂಖ್ಯೆ : 8050770004 ಅಥವಾ 8050770005

ಇಲಾಖೆ ಅಧಿಕೃತ ಜಾಲತಾಣ- Click here

Post a Comment

Previous Post Next Post

Top Post Ad

CLOSE ADS
CLOSE ADS
×