Jalajeevana Yojane-ಲಿಂಗಾಯತ ನಿಗಮದಿಂದ ಬೋರ್ವೆಲ್ ಕೊರೆಸಲು ₹4.25 ಲಕ್ಷ ಸಬ್ಸಿಡಿಗೆ ಅರ್ಜಿ

By SVR Creations

ಕರ್ನಾಟಕ ವೀರಶೈವ ಅಂಗಾಯತ ಅಭಿವೃದ್ಧಿ ನಿಗಮ ನಿಯಮಿತ (ಕರ್ನಾಟಕ ಸರ್ಕಾರದ ಉದ್ಯಮ) ದಿಂದ 2024-25ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಜೀವಜಲ(Jalajeevana) ಯೋಜನೆಯಡಿ ಉಚಿತವಾಗಿ ಬೋರ್ವೆಲ್ ಅನ್ನು ಕೊರೆಸಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

2024-25ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ನಿಗಮದ ಯೋಜನೆಯ ಭಾಗವಾಗಿ ವೀರಶೈವ-ಲಿಂಗಾಯತ(Lingayat Nigama Yojane) ಜಾತಿ ಹಾಗೂ ಉಪಜಾತಿಗೆ ಸೇರಿದ ಸಮುದಾಯದ ಜನರ (ಪವರ್ಗ-3B) ಅಭಿವೃದ್ಧಿಗಾಗಿ ನಿಗಮದಿಂದ ಕೃಷಿಕರಿಗೆ ನೀರಾವರಿ ಸೌಲಭ್ಯವನ್ನು ಹೊಂದಲು ಉಚಿತವಾಗಿ ಕೊಳವೆ ಬಾವಿಯನ್ನು ಕೊರೆಸಲು ಅರ್ಹ ರೈತರನ್ನು ಆಯ್ಕೆ ಮಾಡಲು ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಈ ಅಂಕಣದಲ್ಲಿ ಜೀವಜಲ(Ganga Kalyana) ಯೋಜನೆಯಡಿ ಎಷ್ಟು ಸಬ್ಸಿಡಿ ನೀಡಲಾಗುತ್ತದೆ? ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕ, ಯಾರೆಲ್ಲ ಅರ್ಜಿಯನ್ನು ಸಲ್ಲಿಸಬಹುದು? ಅರ್ಜಿ ಸಲ್ಲಿಸುವ ವಿಧಾನ ಹೇಗೆ? ಇನ್ನಿತರೆ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ಹಂಚಿಕೊಳ್ಳಲಾಗಿದೆ.

Jalajeevana Subsidy Amount-ಜೀವಜಲ ಯೋಜನೆಯಡಿ ಎಷ್ಟು ಸಬ್ಸಿಡಿ ನೀಡಲಾಗುತ್ತದೆ?

1) ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಒಟ್ಟು 7 ಜಿಲ್ಲೆಗಳಿಗೆ ಒಟ್ಟು ಘಟಕ ವೆಚ್ಚಕ್ಕೆ ರೂ 4,75,000/- ನಿಗದಿಪಡಿಸಲಾಗಿದ್ದು ಇದರಲ್ಲಿ ಬೋರ್ ವೆಲ್ Drilling ಮತ್ತು ಪಂಪ್ ಸೆಟ್ ವೆಚ್ಚಕ್ಕೆ ರೂ 3,50,000/- ಲಕ್ಷ ಹಾಗೂ ರೂ 75,000/- ವಿದ್ಯುತ್ ಸರಬರಾಜಿಗೆ ಆರ್ಥಿಕ ನೆರವು ನೀಡಲಾಗುತ್ತದೆ ಇದಲ್ಲದೇ ಹೆಚ್ಚುವರಿಯಾಗಿ ಶೇ 4% ಬಡ್ಡಿದರದಲ್ಲಿ ರೂ 50,000/- ಸಾಲವನ್ನು ನೀಡಲಾಗುತ್ತದೆ.

2) ಈ ಜಿಲ್ಲೆಗಳನ್ನು ಹೊರತುಪಡಿಸಿ ಬಾಕಿ ಉಳಿದ 25 ಜಿಲ್ಲೆಗಳಿಗೆ ಒಟ್ಟು ಘಟಕ ವೆಚ್ಚಕ್ಕೆ ರೂ 3,75,000/- ನಿಗದಿಪಡಿಸಲಾಗಿದ್ದು ಇದರಲ್ಲಿ ಬೋರ್ ವೆಲ್ Drilling ಮತ್ತು ಪಂಪ್ ಸೆಟ್ ವೆಚ್ಚ ರೂ 2,50,000/- ಲಕ್ಷ ಹಾಗೂ ರೂ 75,000/- ವಿದ್ಯುತ್ ಸರಬರಾಜಿಗೆ ಆರ್ಥಿಕ ನೆರವು ನೀಡಲಾಗುತ್ತದೆ ಇದಲ್ಲದೇ ಹೆಚ್ಚುವರಿಯಾಗಿ ಶೇ 4% ಬಡ್ಡಿದರದಲ್ಲಿ ರೂ 50,000/- ಸಾಲವನ್ನು ನೀಡಲಾಗುತ್ತದೆ.

Last Date For Application-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- 31 ಜುಲೈ 2025

How Can Apply For Jalajeevana Scheme-ಅರ್ಜಿ ಸಲ್ಲಿಸಲು ಅರ್ಹರು:

ಅರ್ಜಿದಾರರು ಕರ್ನಾಟಕದ ಖಾಯಂ ನಿವಾಸಿಯಾಗಿದ್ದು ವೀರಶೈವ-ಲಿಂಗಾಯತ(3B) ಸಮುದಾಯಕ್ಕೆ ಸೇರಿದವರಾಗಿರಬೇಕು.

ಕುಟುಂಬದ ವಾರ್ಷಿಕ ವರಮಾನವು ಗ್ರಾಮಾಂತರ ಪ್ರದೇಶದವರಿಗೆ ರೂ 98,000/- ಹಾಗೂ ನಗರ ಪ್ರದೇಶದವರಿಗೆ ರೂ 1,20,000/- ಮಿತಿಯೊಳಗಿರಬೇಕು.

ಸಣ್ಣ ಮತ್ತು ಅತಿ ಸಣ್ಣ ರೈತರು ಕೊಳವೆ ಬಾವಿಯನ್ನು ಕೊರೆಸಲು ಅರ್ಜಿ ಸಲ್ಲಿಸಲು ಅರ್ಹರು.

ಈ ಹಿಂದೆ ನಿಗಮದಿಂದ ಅರ್ಜಿಯನ್ನು ಸಲ್ಲಿಸಿ ಈ ಯೋಜನೆಯಡಿ ಸೌಲಭ್ಯವನ್ನು ಪಡೆದಿರುವವರು ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.

ಅರ್ಜಿ ಸಲ್ಲಿಸುವವರಿಗೆ ಕನಿಷ್ಟ 18 ವರ್ಷ ತುಂಬಿರಬೇಕು.

ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.

How To Apply For Jalajeevana Yojane-ಎಲ್ಲಿ ಅರ್ಜಿ ಸಲ್ಲಿಸಬೇಕು?

ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳನ್ನು ಸಿದ್ದಪಡಿಸಿಕೊಂಡು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು ಅಥವಾ ತಮ್ಮ ಹತ್ತಿರದ ಗ್ರಾಮ ಒನ್/ಕರ್ನಾಟಕ ಒನ್/ಬೆಂಗಳೂರು ಒನ್ ಕೇಂದ್ರವನ್ನು ನೇರವಾಗಿ ಭೇಟಿ ಮಾಡಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.

Online Application Link-ಅರ್ಜಿ ಸಲ್ಲಿಸುವ ವಿಧಾನ ಹೇಗೆ?

ಅರ್ಹ ಅರ್ಜಿದಾರರ ಈ ಕೆಳಗಿನ ವಿಧಾನವನ್ನು ಅನುಸರಿಸಿ ಸೇವಾ ಸಿಂಧು ಪೋರ್ಟಲ್ ಅನ್ನು ಪ್ರವೇಶ ಮಾಡಿ ತಮ್ಮ ಮೊಬೈಲ್ ನಲ್ಲೇ ಅರ್ಜಿಯನ್ನು ಸಲ್ಲಿಸಬಹುದು.

Step-1: ಪ್ರಥಮದಲ್ಲಿ Apply Now ಈ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ ಸೇವಾ ಸಿಂಧು ಪೋರ್ಟಲ್ ಅನ್ನು ಪ್ರವೇಶ ಮಾಡಬೇಕು.

Step-2: ಇದಾದ ಬಳಿಕ ಈ ಜಾಲತಾಣಕ್ಕೆ ಪ್ರಥಮ ಬಾರಿಗೆ ಭೇಟಿ ಮಾಡುತ್ತಿರುವವರು ಈ ಪೇಜ್ ನಲ್ಲಿ ಕಾಣುವ "Register Here" ಬಟನ್ ಮೇಲೆ ಕ್ಲಿಕ್ ಮಾಡಿ ಬಳಕೆದಾರ ಐಡಿಯನ್ನು ಸಕ್ರಿಯಗೊಳಿಸಬೇಕು. ಬಳಿಕ ಬಳಕೆದಾರ ಐಡಿ ಮತು OTP ಅನ್ನು ನಮೂದಿಸಿ "Submit" ಬಟನ್ ಮೇಲೆ ಕ್ಲಿಕ್ ಮಾಡಿ ಲಾಗಿನ್ ಅದರೆ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ ಇಲ್ಲಿ ಎಲ್ಲಾ ಅಗತ್ಯ ವಿವರವನ್ನು ಭರ್ತಿ ಮಾಡಿ ಕೊನೆಯಲ್ಲಿ ದಾಖಲಾತಿಗಳನ್ನು ಅಪ್ಲೋಡ್ ಮಾಡಿ Submit ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬೇಕು.

Required Documents For Jalajeevana Yojane-ಅರ್ಜಿ ಸಲ್ಲಿಸಲು ದಾಖಲೆಗಳು:

ಜಲಜೀವನ ಯೋಜನೆಯಡಿ ಸಹಾಯಧನದಲ್ಲಿ ಬೋರ್ವೆಲ್ ಅನ್ನು ಕೊರೆಸಲು ಅರ್ಜಿದಾರರು ಅರ್ಜಿಯನ್ನು ಸಲ್ಲಿಸಲು ಅಗತ್ಯವಾಗಿ ಒದಗಿಸಬೇಕಾದ ದಾಖಲಾತಿಗಳ ವಿವರ ಈ ಕೆಳಗಿನಂತಿದೆ:

1) ರೈತರ ಆಧಾರ್ ಕಾರ್ಡ/Aadhar

2) ಬ್ಯಾಂಕ್ ಪಾಸ್ ಬುಕ್/Bank Pass Book

3) ಪೋಟೋ/Photo-3

4) ಜಮೀನಿನ ಪಹಣಿ/RTC

5) ಬೆಳೆ ದೃಡೀಕರಣ ಪ್ರಮಾಣ ಪತ್ರ/Crop Information

6) ಜಮೀನಿನಲ್ಲಿ ನೀರಾವರಿ ಸೌಲಭ್ಯ ಹೊಂದಿಲ್ಲದೇ ಇರುವುದಕ್ಕೆ ಸ್ವಯಂ ಘೋಷಣೆ.

7) ಜಾತಿ ಮತ್ತು ಆದಾಯ ಪ್ರಮಾಣ ಪತ್ರ

ಅರ್ಜಿ ಸಲ್ಲಿಸುವವರಿಗೆ ನಿಗಮದಿಂದ ವಿಶೇಷ ಸೂಚನೆಗಳು:

ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು ಹಾಗೂ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್/NPCI ಮ್ಯಾಪಿಂಗ್ ಮಾಡಿರಬೇಕು.

For More Information-ಹೆಚ್ಚಿನ ಮಾಹಿತಿಗಾಗಿ:

Lingayat Nigama-ಲಿಂಗಾಯತ ನಿಗಮದ ಅಧಿಕೃತ ವೆಬ್ಸೈಟ್- Click Here

Helpline Number-ಸಹಾಯವಾಣಿ- 8022865522/9900012351

Jeeva Jala Yojane-ಜೀವಜಲ ಯೋಜನೆ ಮಾಹಿತಿ-Click Here