PMFME Scheme-ಕೃಷಿ ಇಲಾಖೆಯಿಂದ ಸ್ವಂತ ಉದ್ದಿಮೆ ಸ್ಥಾಪನೆಗೆ 15 ಲಕ್ಷ ಸಬ್ಸಿಡಿ ಪಡೆಯಲು ಅರ್ಜಿ

ನಿನ್ನೆ ಬೆಂಗಳೂರಿನ ಟೌನ್ ಹಾಲ್‍ನಲ್ಲಿ ಭಾತರ ಸರ್ಕಾರದ ಆಹಾರ ಸಂಸ್ಕರಣಾ ಉದ್ಯಮ ಮಂತ್ರಾಲಯ, ಖೇತಿವಾಲಾಸ್ ಹಾಗೂ ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಮತ್ತು ರಫ್ತು ನಿಗಮದ ವತಿಯಿಂದ ಹಮ್ಮಿಕೊಂಡಿದ್ದ “ಕೃಷಿ ಜಾಗೃತಿ” ಕಾರ್ಯಗಾರದ ಉದ್ಘಾಟನೆ ಹಾಗೂ ಖೇತಿ ಪ್ರಶಸ್ತಿ ಪುರಸ್ಕøತರಾದ ಅಧಿಕಾರಿಗಳು ಹಾಗೂ ಸಂಸ್ಥೆಯ ಪ್ರತಿನಿಧಿಗಳನ್ನು ಸನ್ಮಾನ ಮಾಡಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಚಿವರು PMFME ಯೋಜನೆಯ ಕುರಿತು ತಿಳಿಸಿರುವ ಒಂದಿಷ್ಟು ಅಗತ್ಯ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ.

ಕೃಷಿ ಜಾಗೃತಿ” ಕಾರ್ಯಗಾರದ ಮಾಹಿತಿಯ ಜೊತೆಗೆ ಏನಿದು PMFME ಯೋಜನೆಯ? ಯಾರೆಲ್ಲ ಅರ್ಜಿ ಸಲ್ಲಿಸಿ ಈ ಯೋಜನೆಯಡಿ ಲಕ್ಷದವರೆಗೆ ಸರ್ಕಾರದಿಂದ ಸಹಾಯಧನವನ್ನು ಪಡೆದು ಆಹಾರ ಸಂಸ್ಕರಣಾ ಕ್ಷೇತ್ರದಲ್ಲಿ ಸ್ವಂತ ಉದ್ದಿಮೆಯನ್ನು ಆರಂಭಿಸಬಹುದು? ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗೆ? ಇನ್ನಿತರೆ ಸಂಪೂರ್ಣ ವಿವರವನ್ನು ಈ ಕೆಳಗೆ ಹಂಚಿಕೊಳ್ಳಲಾಗಿದೆ.

Karanataka Agriculture business Subsidy-ಸ್ವಂತ ಉದ್ದಿಮೆ ಸ್ಥಾಪನೆಗೆ 15 ಲಕ್ಷ ಸಬ್ಸಿಡಿ:

ಕಿರು ಆಹಾರ ಸಂಸ್ಕರಣಾ ಘಟಕಗಳಿಗೆ 15 ಲಕ್ಷ ರೂ. ಸಹಾಯಧನ ನೀಡಲಾಗುತ್ತಿದೆ. ಇದರಲ್ಲಿ ಕೇಂದ್ರ ಸರ್ಕಾರ 6 ಲಕ್ಷ ರೂ.ಗಳನ್ನು ಹಾಗೂ ರಾಜ್ಯ ಸರ್ಕಾರ 9 ಲಕ್ಷ ರೂ.ಗಳ ಸಹಾಯ ಧನ ನೀಡುತ್ತಿದ್ದು, ಈ ರೀತಿಯ ಯೋಜನೆ ನಮ್ಮ ರಾಜ್ಯದಲ್ಲಿ ಬಿಟ್ಟರೆ ಬೇರೆ ಯಾವುದೇ ರಾಜ್ಯದಲ್ಲಿ ಇಲ್ಲ ಎಂದು ಕೃಷಿ ಸಚಿವ ಎನ್.ಚಲುವರಾಯ ಸ್ವಾಮಿ ತಿಳಿಸಿದರು.

Agriculture business schemes-ಈ ಯೋಜನೆಯಡಿ 6,585 ಫಲಾನುಭವಿಗಳಿಗೆ ಅನುದಾನ ಮಂಜೂರು:

ಕಳೆದ 5 ವರ್ಷದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಯೋಗದಲ್ಲಿ ಅನುಷ್ಠಾನ ಮಾಡುತ್ತಿರುವ PMFME ಯೋಜನೆಯಡಿ ವಿವಿಧ ಜಿಲ್ಲೆಗಳಿಂದ ಒಟ್ಟು 20,051 ಅರ್ಜಿಗಳು ಸಲ್ಲಿಕೆಯಾಗಿದ್ದು ಇದರಲ್ಲಿ 6,585 ಅರ್ಜಿಗಳಿಗೆ ಸಾಲ ಮಂಜೂರಾಗಿದ್ದು, ಒಟ್ಟು 758.48 ಕೋಟಿ ಬಂಡವಾಳ ಹೂಡಿಕೆಯಾಗಿದೆ.

ಇದಲ್ಲದೇ ಆಹಾರ ಸಂಸ್ಕರಣೆಯಲ್ಲಿ ತೊಡಗಿರುವ ಸ್ವಸಹಾಯ ಸಂಘದ 11,825 ಸದಸ್ಯರಿಗೆ 46.58 ಕೋಟಿಯಷ್ಟು ಆರಂಭಿಕ ಬಂಡವಾಳದ ಬೆಂಬಲವನ್ನು, ಸಣ್ಣ ಉಪಕರಣಗಳನ್ನು ಖರೀದಿಸಲು ಮತ್ತು ಕಾರ್ಯನಿರತ ಬಂಡವಾಳಕ್ಕಾಗಿ ಬಿಡುಗಡೆ ಮಾಡಲಾಗಿದೆ ಎಂದು ಕೃಷಿ ಸಚಿವರು ಕಾರ್ಯಕ್ರಮದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ರಾಜ್ಯದಲ್ಲಿ ದೇಶದಲ್ಲೇ ಅತಿ ಹೆಚ್ಚು ಇನ್ಕ್ಯುಬೇಶನ್ ಕೇಂದ್ರಗಳು:

ವಿವಿಧ ಕೃಷಿ, ತೋಟಗಾರಿಕೆ ವಿಶ್ವವಿದ್ಯಾಲಯಗಳು, ಸರ್ಕಾರಿ ಸಂಸ್ಥೆಗಳಗೆ 14 ಸಾಮಾನ್ಯ ಇನ್ಕ್ಯುಬೇಶನ್ ಕೇಂದ್ರಗಳನ್ನು ಮಂಜೂರು ಮಾಡಲಾಗಿದೆ. ದೇಶದಲ್ಲೇ ಅತಿ ಹೆಚ್ಚು ಇನ್ಕ್ಯುಬೇಶನ್ ಕೇಂದ್ರಗಳನ್ನು ರಾಜ್ಯಕ್ಕೆ ಮಂಜೂರು ಮಾಡಲಾಗಿದೆ ಎಂದರು.

ಕೃಷಿಗೆ ಮೌಲ್ಯವರ್ಧನೆ ಅಳವಡಿಸಿಕೊಂಡರೆ ಇಡೀ ದೇಶವೇ ಆರ್ಥಿಕವಾಗಿ ಸದೃಢವಾಗುತ್ತದೆ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ

ಕೃಷಿ ವಲಯದಲ್ಲಿ ತಾಂತ್ರಿಕ ಸಮಗ್ರ ಕೃಷಿಗೆ ಮೌಲ್ಯವರ್ಧನೆ ಅಳವಡಿಸಿಕೊಂಡರೆ ಇಡೀ ದೇಶವೇ ಆರ್ಥಿಕವಾಗಿ ಸದೃಢವಾಗುತ್ತದೆ. ರೈತರಿಗೆ ಹಾಗೂ ನವೋದ್ಯಮಿಗಳಿಗೆ ಉತ್ತೇಜನ ನೀಡಲು ಈ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ. ತಾಂತ್ರಿಕತೆಯನ್ನು ಪರಿಚಯ ಮಾಡಿಕೊಡುವ ಹಾಗೂ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳುವಂತಹ ಇಂತಹ ಕಾರ್ಯಕ್ರಮಗಳನ್ನು ಹೆಚ್ಚು ಆಯೋಜಿಸಿದಷ್ಟು ರೈತ ಸಮುದಾಯಕ್ಕೆ, ಯುವ ಸಮುದಾಯಕ್ಕೆ ಬಹಳಷ್ಟು ಅನುಕೂಲವಾಗುತ್ತದೆ ಎಂದರು.

ಇಂದು ಇಡೀ ರಾಷ್ಟ್ರ ಮತ್ತು ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆ ಎದುರಿಸುತ್ತಿದ್ದೇವೆ ಅದೆಲ್ಲಕ್ಕೂ ಪರಿಹಾರ ಕೃಷಿ ಮತ್ತು ಕೃಷಿ ಉತ್ಪನನಗಳ ಮೌಲ್ಯವರ್ಧನೆ ಹಾಗೂ ಉದ್ದಿಮೆ ಕ್ಷೇತ್ರಗಳನ್ನು ಅಳವಡಿಸಿಕೊಂಡಾಗ ಮಾತ್ರ ಸಾಧ್ಯ ಎಂದು ನಾವು ಅರ್ಥ ಮಾಡಿಕೊಳ್ಳಬೇಕು. ರಾಜ್ಯದಲ್ಲಿ ಇಂದು ಅನೇಕ ಯುವಕರು ಕೃಷಿ ಕಡೆ ಆಲೋಚನೆ ಮಾಡುತ್ತಿರುವುದರಿಂದ ಕೃಷಿಗೆ ಹೆಚ್ಚಿನ ಒತ್ತು ನೀಡುವುದು ಸರ್ಕಾರ ಹಾಗೂ ಇಂತಹ ಸಂಸ್ಥೆಗಳ ಕರ್ತವ್ಯ. ನಮ್ಮೆಲ್ಲರ ಮುಂದಿನ ಭವಿಷ್ಯದ ಚಿಂತನೆಗೆ ಕೃಷಿಯಲ್ಲಿ ಮೌಲ್ಯವರ್ಧನೆ ಮಾಡಿದರೆ ಒಂದಕ್ಕಿಂತ ಹೆಚ್ಚು ಪಟ್ಟು ಹಣ ಸಿಗುತ್ತದೆ.

ಕೃಷಿ ಚಟವಟಿಕೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಬಹಳ ವರ್ಷಗಳಿಂದ ಪ್ರೋತ್ಸಾಹ ನೀಡುತ್ತಿದ್ದು ಇತ್ತೀಚಿನ ದಿನಗಳಲ್ಲಿ ಪ್ರಕೃತಿಯಲ್ಲಿ ಮೊದಲಿಗಿಂತ ಹೆಚ್ಚಿನ ಬದಲಾವಣೆ ಕಾಣುತ್ತಿದ್ದೇವೆ ಇದರ ಜೊತೆಗೆ ತಾಂತ್ರೀಕರಣ ವ್ಯವಸಾಯ ಮಾಡಬೇಕು ಮತ್ತು ಅದಕ್ಕಿಂತ ಹೆಚ್ಚಾಗಿ ಕೃಷಿಯಲ್ಲಿ ಸಂಸ್ಕರಣೆ ಮಾಡಿ, ಮೌಲ್ಯವರ್ಧನೆ ಮಾಡಿದರೆ ಮಾತ್ರ ಒಂದಕ್ಕಿಂತ ಹೆಚ್ಚು ಲಾಭ ಪಡೆಯಲು ಸಾಧ್ಯವಾಗುತ್ತದೆ.

ರೈತರು ತಮ್ಮ ಉತ್ಪನ್ನಗಳ ಮೌಲ್ಯವರ್ಧನೆಗೆ ಹೆಚ್ಚು ಆದ್ಯತೆ ನೀಡಬೇಕು ಹಾಗೂ ಮಾರುಕಟ್ಟೆಯ ಬಗ್ಗೆ ಜ್ಞಾನ ವಿಸ್ತಾರವಾಗಬೇಕು ಎಂಬ ಉದ್ದೇಶದಿಂದ ಮಾಹಿತಿ ನೀಡಲು ಇಂದು ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ಬಹತೇಕ ಯುವಕರು ಭಾಗವಹಿಸಿದ್ದು, ಈ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.

PMFME ಯೋಜನೆಯಡಿ ಎಷ್ಟು ಸಬ್ಸಿಡಿ ನೀಡಲಾಗುತ್ತದೆ?

ಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ (PMFME)ಯೋಜನೆಯಡಿ ಅರ್ಜಿ ಸಲ್ಲಿಸಿದ ಅರ್ಹ ಫಲಾನುಭವಿಗಳಿಗೆ ಒಟ್ಟಾರೆಯಾಗಿ ಶೇ. 50 ರಷ್ಟು ಅಥವಾ ಗರಿಷ್ಟ ರೂ. 15 ಲಕ್ಷ ಸಹಾಯಧನವನ್ನು ಪಡೆಯಲು ಅವಕಾಶವಿರುತ್ತದೆ ಈ ಸಬ್ಸಿಡಿಯು ಕೇಂದ್ರ ಸರ್ಕಾರದ ರೂ. 6 ಲಕ್ಷ ಹಾಗೂ ರಾಜ್ಯ ಸರ್ಕಾರದ ರೂ. 9 ಲಕ್ಷ ಸಹಾಯಧನವನ್ನು ಒಳಗೊಂಡಿರುತ್ತದೆ.

How to apply-ಅರ್ಜಿ ಸಲ್ಲಿಸುವುದು ಹೇಗೆ?

ನಿಮ್ಮ ಹತ್ತಿರದ ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ಕಚೇರಿಯನ್ನು ಭೇಟಿ ಮಾಡಿ ಅಥವಾ ಅರ್ಜಿ ಸಲ್ಲಿಸಲು ಈ ಯೋಜನೆಗೆ ಸಂಬಂಧಪಟ್ಟ ನಿಮ್ಮ ಜಿಲ್ಲೆಯ ಜಿಲ್ಲಾ ಸಂಪನ್ಮೂಲ ವ್ಯಕ್ತಿ (DRP)ಅವರನ್ನು ಸಂಪರ್ಕಿಸಿ ಅಗತ್ಯ ದಾಖಲಾತಿಗಳನ್ನು ಸಲ್ಲಿಸಿ ಅರ್ಜಿ ಸಲ್ಲಿಸಬೇಕು ಅಥವಾ ನೇರವಾಗಿ ಈ ವೆಬ್ಸೈಟ್ ಭೇಟಿ ಮಾಡಿ ಅರ್ಜಿ ಸಲ್ಲಿಸಬವುದು.

PMFME Application Link- Apply Now

Documents For PMFME Scheme-ಅರ್ಜಿ ಸಲ್ಲಿಸಲು ಅವಶ್ಯಕ ದಾಖಲೆಗಳು:

ಅರ್ಜಿದಾರರ ಆಧಾರ್ ಕಾರ್ಡ್/Aadhar

ಪಾನ್ ಕಾರ್ಡ್/Pan Card

ರೇಷನ್‌ ಕಾರ್ಡ್‌/Ration Card

ಬ್ಯಾಂಕ್ ಪಾಸ್ ಬುಕ್/Bank Pass Book

ಪೋಟೋ/Photo

6 ತಿಂಗಳ ಬ್ಯಾಂಕ್ ಸ್ಟೇಟ್‌ ಮೆಂಟ್/Bank pass book Statement

ಮೊಬೈಲ್ ನಂಬರ್/Mobile Number

PMFME Yojana Subsidy Details-ಯಾವೆಲ್ಲ ಉದ್ದಿಮೆಗಳನ್ನು ಪ್ರಾರಂಭಿಸಲಿ ಈ ಯೋಜನೆಯಡಿ ಸಬ್ಸಿಡಿ ನೀಡಲಾಗುತ್ತದೆ?

1) ಸಿರಿಧಾನ್ಯಗಳ ಮತ್ತು ಇತರೆ ಧಾನ್ಯಗಳ ಸಂಸ್ಕರಣೆ ಘಟಕ

2) ಬೆಲ್ಲ, ನಿಂಬೆ ಉತ್ಪನ್ನಗಳು ಸಂಸ್ಕರಣೆ ಘಟಕ

3) ಬೇಕರಿ ಉತ್ಪನ್ನಗಳು ಸಂಸ್ಕರಣೆ ಘಟಕ

4) ಕೋಲ್ಡ್ ಪ್ರೆಸ್ಟ್ ಆಯಿಲ್ ಸಂಸ್ಕರಣೆ ಘಟಕ

5) ಮೆಣಸಿನ ಪುಡಿ ಘಟಕಗಳು ಸಂಸ್ಕರಣೆ ಘಟಕ

6) ಶುಂಠಿ ಸಂಸ್ಕರಣಾ ಘಟಕಗಳು

7) ಅನಾನಸ್ ಸಂಸ್ಕರಣಾ ಘಟಕಗಳು

8) ಮಸಾಲಾ ಉತ್ಪನ್ನಗಳ ಘಟಕಗಳು

9) ತೆಂಗಿನ ಉತ್ಪನ್ನಗಳ ಸಂಸ್ಕರಣೆ ಘಟಕ

10) ಕುಕ್ಕುಟಗಳ ಉತ್ಪನ್ನಗಳ ಸಂಸ್ಕರಣೆ ಘಟಕ

11) ಸಾಗರ ಉತ್ಪನ್ನಗಳ ಸಂಸ್ಕರಣೆ ಘಟಕ

For More Information-ಹೆಚ್ಚಿನ ಮಾಹಿತಿಯನ್ನು ಪಡೆಯಲು:

ಕೇಂದ್ರ ಸರ್ಕಾರದ ಅಧಿಕೃತ PMFME ವೆಬ್ಸೈಟ್-Click Here

ರಾಜ್ಯದ ಕೆಪೆಕ್ ಸಂಸ್ಥೆಯ ತಂತ್ರಾಂಶ: Click Here

Previous Post Next Post