Prize Money Scholarship 2025- SSLC, PUC, ಪದವಿ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ₹35,000 ರೂಪಾಯಿ ಪ್ರೋತ್ಸಾಹಧನ

Prize Money Scholarship 2025- SSLC, PUC, ಪದವಿ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ₹35,000 ರೂಪಾಯಿ ಪ್ರೋತ್ಸಾಹಧನ

ರಾಜ್ಯ ಸರ್ಕಾರ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು (Prize Money Scholarship 2025) ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗೆ ಪ್ರೋತ್ಸಾಹ ನೀಡುವ ಹಿನ್ನಲೆಯಲ್ಲಿ ಸರ್ಕಾರ ಹಲವು ವಿಶೇಷ ಯೋಜನೆಗಳನ್ನು ಜಾರಿಗೊಳಿಸಿದೆ. ಈ ಪೈಕಿ ಕರ್ನಾಟಕ ರಾಜ್ಯ ಸರ್ಕಾರವು ಸಮಾಜ ಕಲ್ಯಾಣ ಇಲಾಖೆಯ ಮೂಲಕ ಪ್ರತಿಭಾವಂತ ವಿದ್ಯಾರ್ಥಿಗಳಿಗಾಗಿ ಕೊಡಮಾಡುವ ‘ಪ್ರೋತ್ಸಾಹಧನ ಯೋಜನೆ 2025’ (Prize Money Scholarship 2025) ಕೂಡ ಒಂದಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಈ ಯೋಜನೆಯಡಿ ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ, ಡಿಪ್ಲೋಮಾ, ಪದವಿ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ₹20,000ರಿಂದ ₹35,000ರ ವರೆಗೆ ಹಣಕಾಸು ಪ್ರೋತ್ಸಾಹಧನವನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ.

ಅರ್ಹತಾ ಮಾನದಂಡಗಳು

ಈ ಯೋಜನೆಯ ಸೌಲಭ್ಯವನ್ನು ಪಡೆಯಲು ವಿದ್ಯಾರ್ಥಿಗಳು ಕೆಳಗಿನ ಅರ್ಹತೆಗಳನ್ನು ಹೊಂದಿರಬೇಕು:

ವಿದ್ಯಾರ್ಥಿಯು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು ಮತ್ತು ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು.

2025ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ, ಡಿಪ್ಲೋಮಾ, ಪದವಿ ಅಥವಾ ಸ್ನಾತಕೋತ್ತರ ಪದವಿಯಲ್ಲಿ ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರಬೇಕು.

ಅಭ್ಯರ್ಥಿಯು ಬ್ಯಾಂಕ್ ಖಾತೆ ಮತ್ತು ಆಧಾರ್ ಲಿಂಕ್ ಮಾಡಿರುವುದು ಕಡ್ಡಾಯ.

ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು SSLC, PUC, ಪದವಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

Prize Money Scholarship 2025 ಕೋರ್ಸ್ ಪ್ರಕಾರ ಸಹಾಯಧನದ ವಿವರ

ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ, ಅವರು ಪಾಸಾದ ಕೋರ್ಸ್ ಆಧಾರದ ಮೇಲೆ ಈ ಕೆಳಗಿನಂತೆ ಸಹಾಯಧನ ನೀಡಲಾಗುತ್ತದೆ:

ದ್ವಿತೀಯ ಪಿಯುಸಿ ಅಥವಾ 3 ವರ್ಷದ ಡಿಪ್ಲೋಮಾ: ₹20,000

ಪದವಿ (Degree): ₹25,000

ಸ್ನಾತಕೋತ್ತರ ಪದವಿ (Post-Graduation): ₹30,000

ವೃತ್ತಿಪರ ಹಾಗೂ ತಾಂತ್ರಿಕ ಪದವಿ (BE, MBBS, BAMS, BDS, etc.): ₹35,000

ಅರ್ಜಿ ಸಲ್ಲಿಸುವ ವಿಧಾನ

ಈ ಯೋಜನೆಯ ಅರ್ಜಿ ಪ್ರಕ್ರಿಯೆ ಸಂಪೂರ್ಣವಾಗಿ ಆನ್‌ಲೈನ್ ಆಗಿದ್ದು, ವಿದ್ಯಾರ್ಥಿಗಳು ಸರ್ಕಾರಿ ಪೋರ್ಟಲ್‌ನಲ್ಲಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಯ ಲಿಂಕ್ ಲೇಖನದ ಕೊನೆಯಲ್ಲಿದೆ ಗಮನಿಸಿ.

ಮಹತ್ವದ ಸೂಚನೆ: 

ಅರ್ಜಿ ಸಲ್ಲಿಸುವ ಸಮಯದಲ್ಲಿ ನಿಮ್ಮ ಕಾಲೇಜಿನ ಹೆಸರು ಪೋರ್ಟಲ್‌ನಲ್ಲಿ ಲಭ್ಯವಿಲ್ಲದಿದ್ದರೆ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳ ಕಚೇರಿ ಅಥವಾ ಜಿಲ್ಲಾ ಪರಿಶಿಷ್ಟ ವರ್ಗದ ಕಲ್ಯಾಣಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ ನಿಮ್ಮ ಕಾಲೇಜು ಹೆಸರು ಸೇರಿಸುವಂತೆ ಕೋರಿ ನಂತರ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು

ಆಧಾರ್ ಕಾರ್ಡ್ (UIDAI)

ಮೊಬೈಲ್ ಸಂಖ್ಯೆ (ಆಧಾರ್‌ಗೆ ಲಿಂಕ್ ಆಗಿರಬೇಕು)

10ನೇ ತರಗತಿಯ ಅಂಕಪಟ್ಟಿ

ಇತ್ತೀಚಿನ ಶೈಕ್ಷಣಿಕ ಅಂಕಪಟ್ಟಿ (PUC/Degree/PG)

ಜಾತಿ ಪ್ರಮಾಣ ಪತ್ರ

ಆದಾಯ ಪ್ರಮಾಣ ಪತ್ರ

ಪಾಸ್‌ಪೋರ್ಟ್ ಸೈಜಿನ ಎರಡು ಭಾವಚಿತ್ರಗಳು

ಬ್ಯಾಂಕ್ ಪಾಸ್‌ಬುಕ್ ನಕಲು

ಈ ಯೋಜನೆಯಿಂದ ಲಾಭ ಪಡೆಯಲು ಅರ್ಹರಾದ ವಿದ್ಯಾರ್ಥಿಗಳು ತಕ್ಷಣವೇ ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿ, ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕವನ್ನು ಮೇಲ್ಕಂಡ ವೆಬ್‌ಸೈಟ್‌ನಲ್ಲಿ ನಿರಂತರವಾಗಿ ಪರಿಶೀಲಿಸಿ.

ಅರ್ಜಿ ಸಲ್ಲಿಕೆ ಲಿಂಕ್: Apply now


Post a Comment

Previous Post Next Post

Top Post Ad

CLOSE ADS
CLOSE ADS
×