ರಾಜ್ಯ ಸರ್ಕಾರದಡಿ ಬರುವ ವಿವಿಧ ಇಲಾಖೆ ಮತ್ತು ನಿಗಮಗಳ ವಿದ್ಯಾರ್ಥಿವೇತನಕ್ಕೆ SSP ತಂತ್ರಾಂಶದಿಂದ(SSP Scholarship) ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಈಗಾಗಲೇ ಅವಕಾಶವನ್ನು ಮಾಡಿಕೊಡಲಾಗಿದ್ದು ಇದರ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ.
ಇದರೊಟ್ಟಿಗೆ ಸಮಾಜ ಕಲ್ಯಾಣ ಇಲಾಖೆಯಿಂದ(SSP Scholarship Schemes) ವಿದ್ಯಾರ್ಥಿವೇತನ ಹಾಗೂ ಪ್ರೋತ್ಸಾಹಧನ ಪಡೆಯಲು ಅಭಿಯಾನ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು ಇದರ ವಿವರವನ್ನು ಸಹ ಇಲ್ಲಿ ಹಂಚಿಕೊಳ್ಳಲಾಗಿದೆ.
ಪ್ರಸ್ತುತ ಈ ಅಂಕಣದಲ್ಲಿ ವಿದ್ಯಾರ್ಥಿ ವೇತನಕ್ಕೆ(SSP Scholarship Yojana) ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದ ಮಾಹಿತಿ ಹಾಗೂ ಯಾವೆಲ್ಲ ವಿದ್ಯಾರ್ಥಿವೇತನಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ? ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ ಸೇರಿದಂತೆ ಇನ್ನಿತರೆ ಅಗತ್ಯ ಮಾಹಿತಿಯನ್ನು ಇಲ್ಲಿ ಹಂಚಿಕೊಳ್ಳಲಾಗಿದೆ.
Last Date For SSP Scholarship-ಯಾವೆಲ್ಲ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ? ಮತ್ತು ಕೊನೆಯ ದಿನಾಂಕದ ವಿವರ:
2025-26ನೇ ಸಾಲಿನ ಮೆಟ್ರಿಕ್ ಅಂದರೆ 11ನೇ ತರಗತಿ/ಪಿಯುಸಿ ನಂತರದ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
2025-26ನೇ ಸಾಲಿನ ಮೆಟ್ರಿಕ್ ಫೂರ್ವ ಅಂದರೆ 1 ರಿಂದ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ತಾಂತ್ರಿಕ ಶಿಕ್ಷಣ ಇಲಾಖೆಯ (ಡಿ ಟಿ ಇ) ಎಸ್ಸಿ / ಎಸ್ಟಿ ಶುಲ್ಕ ಮರುಪಾವತಿ ಯೋಜನೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಜೂನ್ 15, 2005 ರವರೆಗೆ ವಿಸ್ತರಿಸಲಾಗಿದೆ (ಕಿನ್ ಆಫ್ ಡಿಫೆನ್ಸ್ ಯೋಜನೆಗೆ ಇದು ಅನ್ವಯಿಸುವುದಿಲ್ಲ )
2024-25ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ (ವ್ಯತ್ತಿಪರ ಕೋರ್ಸ್‌ಗಳಿಗೆ) ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30/06/2025
2024-25 ನೇ ಸಾಲಿಗೆ ಸಂಬಂಧಿಸಿದಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಯೋಜನೆಯಡಿಯಲ್ಲಿ ಎಲ್ಲಾ ವೈದ್ಯಕೀಯ ಕೋರ್ಸ್‌ಗಳಿಗೆ (RGUHS) ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು 30/06/2025 ರವರಗೆ ವಿಸ್ತರಿಸಲಾಗಿದೆ. (ಅರ್ಜಿಗಳನ್ನು ಕೇವಲ ಶುಲ್ಕ ಮರುಪಾವತಿ ಯೋಜನೆಗೆ ಮಾತ್ರ ಪರಿಗಣಿಸಲಾಗುವುದು)
SSP Scholarship Application-ಅರ್ಜಿ ಸಲ್ಲಿಸುವುದು ಹೇಗೆ?
ಅರ್ಹ ವಿದ್ಯಾರ್ಥಿಗಳು ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗಾಗಿ ಇಲ್ಲಿ ಕ್ಲಿಕ್ Apply Now ಮಾಡಿ ಅಧಿಕೃತ SSP ತಂತ್ರಾಂಶವನ್ನು ಪ್ರವೇಶ ಮಾಡಿ ಮನೆಯಲ್ಲಿ ಕುಳಿತು ತಮ್ಮ ಮೊಬೈಲ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
SSP Scholarship Benefits-ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿವೇತನ ಹಾಗೂ ಪ್ರೋತ್ಸಾಹಧನ ವಿವರ ಹೀಗಿದೆ:
ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳು, ವಿದ್ಯಾರ್ಥಿವೇತನ ಹಾಗೂ ಪ್ರೋತ್ಸಾಹಧನ ಪಡೆಯಲು ವಿದ್ಯಾರ್ಥಿವೇತನ ಅಭಿಯಾನ ಕಾರ್ಯಕ್ರಮ
ಸಮಾಜಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಠಿಯಿಂದ ಅನುಷ್ಠಾನ ಮಾಡಲಾಗುತ್ತಿರುವ ವಿದ್ಯಾರ್ಥಿವೇತನ, ಪ್ರೋತ್ಸಾಹಧನ ಮತ್ತು ವಿದ್ಯಾರ್ಥಿನಿಲಯಗಳಿಗೆ ಪ್ರವೇಶಾವಕಾಶ ಕಾರ್ಯಕ್ರಮಗಳಡಿ ಪ್ರತಿಶತ ಗುರಿ ಸಾಧಿಸಲು 2025 ನೇ ಜೂನ್ 10 ರಿಂದ ವಿದ್ಯಾರ್ಥಿವೇತನ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
Scholarship guidelines-ವಿದ್ಯಾರ್ಥಿಗಳು, ವಿದ್ಯಾರ್ಥಿವೇತನ ಹಾಗೂ ಪ್ರೋತ್ಸಾಹಧನ ಪಡೆಯಲು ಅನುಸರಿಸ ಬೇಕಾದ ಕ್ರಮಗಳು:
ಕೇಂದ್ರ ಸರ್ಕಾರವು 2025-26 ನೇ ಸಾಲಿನಿಂದ ವಿದ್ಯಾರ್ಥಿಗಳು ಹಾಗೂ INO/EMPOWERMENT OFFICER ಗಳ ಆಧಾರ್ ಬಯೋಮೆಟ್ರಿಕ್ ಇ-ದೃಡೀಕರಣವನ್ನು ಕಡ್ಡಾಯಗೊಳಿಸಲಾಗಿರುತ್ತದೆ. ಈ ಸಂಬಂಧ 1 ರಿಂದ 8ನೇ ತರಗತಿಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ, 9 ಮತ್ತು 10 ನೇ ತರಗತಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಅನೈರ್ಮಲ್ಯ ವೃತ್ತಿಯಲ್ಲಿ ತೊಡಗಿರುವ ಪೋಷಕರು ಮಕ್ಕಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಕಾರ್ಯಕ್ರಮದಡಿ ಅರ್ಜಿ ಸಲ್ಲಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಆಧಾರ್ ಬಯೋಮೆಟ್ರಿಕ್ ಇ-ದೃಢೀಕರಣ ಕಡ್ಡಾಯವಾಗಿರುತ್ತದೆ.
ಆಧಾರ್ ಬಯೋಮೆಟ್ರಿಕ್ ಇ-ದೃಢೀಕರಣವನ್ನು ಇ-ಆಡಳಿತ ಇಲಾಖೆಯ ನಾಗರೀಕ ಸರಬರಾಜು ಕೇಂದ್ರಗಳಾದ ಗ್ರಾಮ ಒನ್, ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್ ಕೇಂದ್ರಗಳಲ್ಲಿ ಈ ಪ್ರಕ್ರಿಯೆಯನ್ನು ಉಚಿತವಾಗಿ ಕೈಗೊಳ್ಳಲು ಕ್ರಮವಹಿಸಲಾಗಿರುತ್ತದೆ. ಹಾಗೂ ತಾಲ್ಲೂಕು ವ್ಯಾಪ್ತಿಯ ಸಮಾಜ ಕಲ್ಯಾಣ ಇಲಾಖಾ ಕಛೇರಿಯಲ್ಲಿಯು ಸಹ ಸದರಿ ಪ್ರಕ್ರಿಯೆಯನ್ನು ಕೈಗೊಳ್ಳಲಾಗುವುದು.
2024-25 ನೇ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ. 60% ಕ್ಕಿಂತ ಹೆಚ್ಚಿನ ಅಂಕ ಪಡೆದು ಉತ್ತೀರ್ಣರಾಗಿರುವ ಹಾಗೂ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಆಗಿರುವ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಡಿ.ಬಿ.ಟಿ ಮೂಲಕ ನೇರವಾಗಿ ಪ್ರೋತ್ಸಾಹಧನದ ಮೊತ್ತವನ್ನು ಜಮೆ ಮಾಡಲಾಗುವುದು.
ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆಯಾಗದಿರುವ ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಮಾಡಿಸಿ ಇಲಾಖೆಯ ವೆಬ್‍ಸೈಟ್ https://swdservices.karnataka.gov.in/PrizeMoneyClientAp/ ಮೂಲಕ ಪ್ರೋತ್ಸಾಹಧನಕ್ಕಾಗಿ ಅರ್ಜಿ ಸಲ್ಲಿಸುವುದು.
2024-25 ನೇ ಸಾಲಿನಲ್ಲಿ ಪಿ.ಯು.ಸಿ, ಪದವಿ ಹಾಗೂ ಸ್ನಾತಕೋತ್ತರ ಪದವಿಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಶೇ. 60% ಕ್ಕಿಂತ ಹೆಚ್ಚಿನ ಅಂಕ ಪಡೆದು ಉತ್ತೀರ್ಣರಾಗಿರುವ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಪೆÇ್ರೀತ್ಸಾಹಧನಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ವಿದ್ಯಾರ್ಥಿಗಳಿಗೆ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್ ಸೈಟ್ https://swd.karnataka.gov.in/ ನ್ನು ವೀಕ್ಷಿಸಬಹುದು ಎಂದು ಆನೇಕಲ್ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು (ಗ್ರೇಡ್-1) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಯನ್ನು ಪಡೆಯಲು ಅಧಿಕೃತ ವೆಬ್ಸೈಟ್- Click Here