Farmer Award-ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ! ಪ್ರಥಮ ಬಹುಮಾನ ರೂ ₹50,000

ಕೃಷಿ ಇಲಾಖೆಯಿಂದ ಕೃಷಿ ವಲಯದ ಉತ್ಪಾದಕತೆ ಯೋಜನೆಯಡಿ ಕೃಷಿ ಪ್ರಶಸ್ತಿಗಳನ್ನು(Best Farmer Award)ಅರ್ಹ ರೈತರಿಗೆ ವಿತರಣೆ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದ್ದು ಇದರ ಕುರಿತು ಸಂಪೂರ್ಣ ಅವಶ್ಯಕ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ.

ಕೃಷಿಕರಿಗೆ ಉತೇಜನ ನೀಡಲು ಕೃಷಿ ಇಲಾಖೆಯಿಂದ(Karnataka Agriculture Department)ಪ್ರತಿ ವರ್ಷ ಮುಂಗಾರು ಹಂಗಾಮಿನಲ್ಲಿ ಉತ್ತಮ ಕೃಷಿ ತಾಂತ್ರಿಕತೆಗಳನ್ನು ಅವಳಡಿಸಿಕೊಂಡು ಹೆಚ್ಚು ಇಳುವರಿಯನ್ನು ತೆಗೆಯುವ ರೈತರಿಗೆ ಪ್ರಶಸ್ತಿ ನೀಡಿ ಸಮ್ಮಾನ ಮಾಡುವುದರ ಜೊತೆಗೆ ನಗದು ಬಹುಮಾನವನ್ನು ನೀಡಲಾಗುತ್ತದೆ.

ಪ್ರಸ್ತುತ ಈ ಲೇಖನದಲ್ಲಿ ಕೃಷಿ ಪ್ರಶಸ್ತಿಯನ್ನು(Krishi Prashasti)ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸಲು ಅವಶ್ಯಕ ದಾಖಲಾತಿ, ಕೃಷಿ ಪ್ರಶಸ್ತಿಗೆ ರೈತರನ್ನು ಆಯ್ಕೆ ಮಾಡುವ ವಿಧಾನ ಹೇಗೆ? ಮಟ್ಟವಾರು ಕೃಷಿ ಪ್ರಶಸ್ತಿ ಮೊತ್ತವೆಷ್ಟು? ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ಹಂಚಿಕೊಳ್ಳಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

Who Can Apply-ಅರ್ಜಿ ಸಲ್ಲಿಸಲು ಅರ್ಹರು:

ಅರ್ಜಿದಾರ ರೈತರ ಹೆಸರಿಗೆ ಕೃಷಿ ಜಮೀನನ್ನು ಹೊಂದಿರಬೇಕು.

ಕಳೆದ 5 ವರ್ಷಗಳಲ್ಲಿ ಈ ಯೋಜನೆಯಡಿ ಪ್ರಶಸ್ತಿಯನ್ನು ಪಡೆದಿರುವವರು ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.

ಬೆಳೆ ಸ್ಪರ್ಧೆಗೆ ಸ್ಪರ್ಧಿಸಲು ಕನಿಷ್ಠ 1 ಎಕರೆ ಪ್ರದೇಶದಲ್ಲಿ ಬೆಳೆ ಬೆಳೆದಿರಬೇಕು. ಹಾಗೂ ರೆವಿನ್ಯೂ ದಾಖಲೆಯ ಪ್ರಕಾರ ಖಾತೆ ಹೊಂದಿರುವ ಸ್ವತಃ ಬೇಸಾಯದಲ್ಲಿ ತೊಡಗಿರುವ ಕ್ರಿಯಾಶೀಲ ರೈತರಾಗಿರಬೇಕು.

ಕುಟುಂಬದ ಒಬ್ಬರು ಮಾತ್ರ ಬೆಳೆ ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ.

ಸರ್ಕಾರಿ ಹಾಗೂ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳ ನೌಕರರು ಹಾಗೂ ಅವರ ಕುಟುಂಬದ ಸದಸ್ಯರು ಬೆಳ ಸ್ಪರ್ಧೆಯಲ್ಲಿ ಭಾಗವಹಿಸುವಂತಿಲ್ಲ.

ಆನ್‌ಲೈನ್ ಮುಖಾಂತರ ನೋಂದಾಯಿಸುವ ರೈತರು ಹಾಗೂ ರೈತ ಮಹಿಳೆಯರು ಇಲಾಖೆಯಿಂದ ಮಾರ್ಗಸೂಚಿಯನ್ವಯ ನಿಗದಿಪಡಿಸುವ ಸ್ಪರ್ಧಾತ್ಮಕ ಇಳುವರಿ ಮಟ್ಟಕ್ಕಿಂತ ಹೆಚ್ಚಿನ ಇಳುವರಿ ಪಡೆದಲ್ಲಿ ಮಾತ್ರ ಬೆಳೆ ಸ್ಪರ್ಧೆಯಡಿ ಬಹುಮಾನಕ್ಕೆ ಪರಿಗಣಿಸಲಾಗುತ್ತದೆ.

Farmer Award Amount Details-ಪ್ರಶಸ್ತಿ ಮೊತ್ತದ ವಿವರ ಹೀಗಿದೆ:

ಹಂತ ಪ್ರಥಮ ದ್ವೀತಿಯ ತೃತೀಯ

ತಾಲೂಕು ಮಟ್ಟ 15,000 10,000 5,000

ಜಿಲ್ಲಾ ಮಟ್ಟ 30,000 25,000 20,000

ರಾಜ್ಯ ಮಟ್ಟ 50,000 40,000 35,000

Selection Procces-ಆಯ್ಕೆ ಮಾಡುವ ವಿಧಾನ:

ರೈತರು ಅಗತ್ಯ ದಾಖಲೆಗಳ ಸಮೇತ ಅರ್ಜಿಯನ್ನು ಸಲ್ಲಿಸಿದ ಬಳಿಕ ಕೃಷಿ ಇಲಾಖೆ ಅಧಿಕಾರಿಗಳು ನಿಮ್ಮ ಅರ್ಜಿಯನ್ನು ಪರಿಶೀಲನೆ ಮಾಡಿ ನಂತರ ಬೆಳೆ ಕಟಾವಿಗೆ ಬಂದಾಗ ಮೀಟರ್ ಅಳತೆಯಲ್ಲಿ ಬೆಳೆಯನ್ನು ಕಟಾವು ಮಾಡಿ ಇಳುವರಿಯನ್ನು ನಮೂದಿಸಲಾಗುತ್ತದೆ ಇಲ್ಲಿ ಅತೀ ಹೆಚ್ಚು ಮೊದಲ ಮೂರು ಸ್ಥಾನದಲ್ಲಿ ಇಳುವರಿಯನ್ನು ಪಡೆದಿರುವ ರೈತರಿಗೆ ಪ್ರಥಮ,ದ್ವೀತಿಯ,ತೃತೀಯ ಬಹುಮಾನ ಮತ್ತು ಪ್ರಶಸ್ತಿಯನ್ನು ನೀಡಲಾಗುತ್ತದೆ.

Required Documents For Farmer Award-ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು:

ರೈತರು ಕೃಷಿ ಪ್ರಶಸ್ತಿಗೆ ಅರ್ಜಿಯನ್ನು ಸಲ್ಲಿಸಲು ಈ ಕೆಳಗಿನ ಪಟ್ಟಿಯಲ್ಲಿರುವ ದಾಖಲೆಗಳನ್ನು ಸಲ್ಲಿಸಬೇಕಾಗುತ್ತದೆ.

ಅರ್ಜಿದಾರ ರೈತರ ಆಧಾರ್ ಕಾರ್ಡ

ಜಮೀನಿನ ಪಹಣಿ

ಪೋಟೋ

ಬ್ಯಾಂಕ್ ಪಾಸ್ ಬುಕ್ ಪ್ರತಿ

ಬೆಳೆ ದೃಡೀಕರಣ ಪ್ರಮಾಣ ಪತ್ರ

ಮೊಬೈಲ್ ನಂಬರ್

How To Apply-ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗೆ?

ಅರ್ಹ ಅರ್ಜಿದಾರರು ಎರಡು ವಿಧಾನವನ್ನು ಅನುಸರಿಸಿ ಕೃಷಿ ಪ್ರಶಸ್ತಿಗೆ ಅರ್ಜಿಯನ್ನು ಸಲ್ಲಿಸಲು ಅವಕಾಶವಿದ್ದು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು ಮತ್ತು ಎರಡನೇ ವಿಧಾನ ನೇರವಾಗಿ ನಿಮ್ಮ ಹೋಬಳಿಯ ರೈತ ಸಂಪರ್ಕ ಕೇಂದ್ರವನ್ನು ಭೇಟಿ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.

Farmer Award Online Application-ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸುವ ವಿಧಾನ:

ಅರ್ಹ ರೈತರು ಅಗತ್ಯ ದಾಖಲೆಗಳನ್ನು ಸಿದ್ದಪಡಿಸಿಕೊಂಡು ಈ ಕೆಳಗಿನ ಹಂತಗಳನ್ನು ಅನುಸರಿಸಿ ಅಧಿಕೃತ ಕೃಷಿ ಇಲಾಖೆಯ ಕೆ-ಕಿಸಾನ್ ಪೋರ್ಟಲ್ ಅನ್ನು ಪ್ರವೇಶ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.

Step-1: ಮೊದಲಿಗೆ ಇಲ್ಲಿ ಕ್ಲಿಕ್ Best Farmer Award Online Application ಮಾಡಿ ಅಧಿಕೃತ ಕೃಷಿ ಇಲಾಖೆಯ ಕೆ-ಕಿಸಾನ್ ಜಾಲತಾಣವನ್ನು ಪ್ರವೇಶ ಮಾಡಬೇಕು.

Step-2: ಬಳಿಕ ಈ ಪುಟದಲ್ಲಿ ಕಾಣುವ "Krishi Pandit Prashasti Application Entry" ಆಯ್ಕೆಯ ಮೇಲೆ ಕ್ಲಿಕ್ ಮಾಡಿ ಅರ್ಜಿದಾರರ ರೈತರ ಆಧಾರ್ ಕಾರ್ಡ ನಂಬರ್ ಅನ್ನು ಹಾಕಿ "Get Details" ಬಟನ್ ಮೇಲೆ ಕ್ಲಿಕ್ ಮಾಡಿದರೆ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ.

Step-3: ಅರ್ಜಿ ನಮೂನೆಯಲ್ಲಿ ಕೇಳಿರುವ ಎಲ್ಲಾ ಅಗತ್ಯ ವಿವರ ಮತ್ತು ದಾಖಲೆಗಳನ್ನು ಅಪ್ಲೋಡ್ ಮಾಡಿ ಕೊನೆಯಲ್ಲಿ "Submit" ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.

Previous Post Next Post