Arya Vysya Loan Schemes Online Form 2025:-ಆರ್ಯ ವೈಶ್ಯ ಸಮುದಾಯಕ್ಕೆ ಸೇರಿದ ಅಭ್ಯರ್ಥಿಗಳಿಗೆ 2025-26ನೇ ಸಾಲಿನಲ್ಲಿ ವಿವಿಧ ಯೋಜನೆಗಳಾದ ಸ್ವಯಂ-ಉದ್ಯೋಗ ನೇರಸಾಲ ಯೋಜನೆ(Self Employment Direct Loan), ಬ್ಯಾಂಕುಗಳ ಸಹಯೋಗದೊಂದಿಗೆ ಆರ್ಯ ವೈಶ್ಯ ಆಹಾರ ವಾಹಿನಿ(Arya Vysya Aahaara Vahini)/ವಾಹಿನಿ ಯೋಜನೆ, ವಾಸವಿ ಜಲಶಕ್ತಿ ಯೋಜನೆ(Vasavi Jalashakthi Scheme)ಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಅಧಿಕೃತ ವೆಬ್ಸೈಟ್ https//kacdc.karnataka.gov.in ಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಹಾಗೂ ಅರಿವು ಶೈಕ್ಷಣಿಕ ಸಾಲ ಯೋಜನೆ(Arivu Education Loan)ಗೆ – ಸಿಇಟಿ ಹಾಗೂ ನೀಟ್ ಕೌನ್ಸಿಲಿಂಗ್ ಮುಗಿದ ನಂತರ ಅರ್ಜಿಗಳನ್ನು ಆಹ್ವಾನಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಈ ಲೇಖನದಲ್ಲಿ ಸದರಿ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆ, ಪ್ರಮುಖ ದಿನಾಂಕಗಳು ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು ನೀಡಲಾಗಿದೆ. ತಪ್ಪದೇ ಕೊನೆಯವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಪ್ರಕಟಣೆಯ ದಿನಾಂಕ – 23-06-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ(Last Date) – 31-07-2025
ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು:
ಅರ್ಜಿದಾರರು ಸಾಮಾನ್ಯ ವರ್ಗದಲ್ಲಿನ ಆರ್ಯ ವೈಶ್ಯ ಸಮುದಾಯಕ್ಕೆ ಸೇರಿದವರಾಗಿರಬೇಕು.
ನಮೂನೆ-ಜಿಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು.
ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿದ್ದು, ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು.
ಅರ್ಜಿದಾರರ ಮೊಬೈಲ್ ಸಂಖ್ಯೆಗೆ ಆಧಾರ್ ಜೋಡಣೆಯಾಗಿರಬೇಕು.
ಅರ್ಜಿದಾರರ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಆಗಿರಬೇಕು.
How to Apply for Arya Vysya Loan Schemes,ಅರ್ಜಿ ಸಲ್ಲಿಸುವ ವಿಧಾನ
ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಅಧಿಕೃತ ವೆಬ್ಸೈಟ್ https//kacdc.karnataka.gov.inಗೆ ಭೇಟಿ ನೀಡಿ.
ನಂತರ ಮುಖಪುಟದಲ್ಲಿ “APPLY ONLINE” ಮೇಲೆ ಕ್ಲಿಕ್ ಮಾಡಿನೀವು ಅರ್ಜಿ ಸಲ್ಲಿಸ ಬಯಸುವ ಯೋಜನೆಯನ್ನು ಆಯ್ಕೆ ಮಾಡಿ.
ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ ಹಾಗೂ ಶೈಕ್ಷಣಿಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.
ವಿಶೇಷ ಸೂಚನೆ:
ಅರ್ಹ ಅರ್ಜಿದಾರರುಗಳನ್ನು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಚಿಸಿರುವ ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯ ಮೂಲಕ ಆಯ್ಕೆ ಮಾಡಲಾಗುತ್ತದೆ.
2019-20ನೇ ಸಾಲಿನಿಂದ 2021-22ನೇ ಸಾಲಿನವರೆಗೆ ಸ್ವಯಂ-ಉದ್ಯೋಗ ನೇರ ಸಾಲ ಯೋಜನೆಯಡಿ ಸಾಲ ಪಡೆದು ಸಕಾಲದಲ್ಲಿ ಸಾಲವನ್ನು ಪೂರ್ಣ ಪ್ರಮಾಣದಲ್ಲಿ ಮರುಪಾವತಿಸಿದ ಫಲಾನುಭವಿಗಳಿಗೆ ಪುನಃ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೈಸೂರು ಜಿಲ್ಲಾ ಕಚೇರಿ ಹಾಗೂ ನಿಗಮದ ಸಹಾಯವಾಣಿ – 9448451111, ದೂ.ಸಂ-0821-2341194 ನ್ನು ಸಂಪರ್ಕಿಸಬಹುದು.