ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL)ನಲ್ಲಿ ಖಾಲಿ ಇರುವ ಸಹಾಯಕ ಮುಖ್ಯ ಭದ್ರತಾ ಅಧಿಕಾರಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಿದೆ.
ನಿಗಮವು ಮೆಟ್ರೋ ನಿಲ್ದಾಣಗಳು ಮತ್ತು ಡಿಪೋಗಳಲ್ಲಿ ಭದ್ರತೆ ಮತ್ತು ಇತರ ಸಂಬಂಧಿತ ಕೆಲಸಗಳನ್ನು ನಿರ್ವಹಿಸಲು ಒಟ್ಟು 05 ಸಹಾಯಕ ಮುಖ್ಯ ಭದ್ರತಾ ಅಧಿಕಾರಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಒಪ್ಪಂದದ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು BMRCL ಅಧಿಕೃತ ವೆಬ್ ಸೈಟ್ https://english.bmrc.co.in/career/ಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ – ಅರ್ಜಿ ಸಲ್ಲಿಕೆ ಈಗಾಗಲೇ ಪ್ರಾರಂಭವಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಆಗಸ್ಟ್ 12, 2025
ಅರ್ಜಿಯ ಸಹಿ ಮಾಡಿದ ಮುದ್ರಣವನ್ನು ಸ್ವೀಕರಿಸಲು ಕೊನೆಯ ದಿನಾಂಕ – ಆಗಸ್ಟ್ 18, 2025
ಅರ್ಹತೆ ಏನು?:
ಭಾರತೀಯ ಸೇನೆ/ಭಾರತೀಯ ನೌಕಾಪಡೆ/ಭಾರತೀಯ ವಾಯುಪಡೆ/ರಾಜ್ಯ ಪೊಲೀಸ್ ಇಲಾಖೆ/ಸಿಎಪಿಎಫ್/ಸಿಆರ್‌ಪಿಎಫ್/ಬಿಎಸ್‌ಎಫ್/ಸಿಐಎಸ್‌ಎಫ್/ರಾಜ್ಯ ಅಗ್ನಿಶಾಮಕ ಇಲಾಖೆ ಮತ್ತು ಇತರ ಸಂಬಂಧಿತ ಸಮಾನ ಸೇವೆಗಳಿಂದ ಸೇವೆ ಸಲ್ಲಿಸುತ್ತಿರುವ ಅಥವಾ ನಿವೃತ್ತ ಸಿಬ್ಬಂದಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕ್ಯಾಪ್ಟನ್/ಲೆಫ್ಟಿನೆಂಟ್/ಫ್ಲೈಟ್ ಲೆಫ್ಟಿನೆಂಟ್/ಸಹಾಯಕ ಕಮಾಂಡೆಂಟ್/ಸಹಾಯಕ ಪೊಲೀಸ್ ಆಯುಕ್ತ (ಅಥವಾ) ಸಮಾನ ಶ್ರೇಣಿಗಿಂತ ಕಡಿಮೆಯಿಲ್ಲದ ಸೇವೆ ಸಲ್ಲಿಸುತ್ತಿರುವ ಅಥವಾ ನಿವೃತ್ತ ಸಿಬ್ಬಂದಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರಿಜ್ಞಾನ ಕಡ್ಡಾಯ.
ವಯಸ್ಸಿನ ಮಿತಿ:
BMRCL ಹೊರಡಿಸಿದ ಅಧಿಸೂಚನೆಯಂತೆ ಗರಿಷ್ಠ ವಯಸ್ಸಿನ ಮಿತಿ 62 ವರ್ಷಗಳು.
ಆಯ್ಕೆ ಪ್ರಕ್ರಿಯೆ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶಾರ್ಟ್ ಲಿಸ್ಟ್ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಶುಲ್ಕ:
ಉಲ್ಲೇಖಿಸಲಗಿರುವುದಿಲ್ಲ
ಅರ್ಜಿ ಸಲ್ಲಿಸುವ ವಿಧಾನ
BMRCL ಅಧಿಕೃತ ವೆಬ್ ಸೈಟ್ https://english.bmrc.co.in/career/ ಗೆ ಭೇಟಿ ನೀಡಿ.
ಅಧಿಸೂಚನೆ ಸಂಖ್ಯೆ BMRCL/HR/0013/O&M/2025/- ಸಹಾಯಕ ಮುಖ್ಯ ಭದ್ರತಾ ಅಧಿಕಾರಿ ವಿಭಾಗದ ಕೆಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಲಿಂಕ್ ಮೇಲೆ ಟ್ಯಾಪ್ ಮಾಡಿ.
ಅಧಿಸೂಚನೆ ಸಂಖ್ಯೆ ಹಾಗೂ ನೀವು ಅರ್ಜಿ ಸಲ್ಲಿಸ ಬಯಸುವ ಹುದ್ದೆಯನ್ನು ಆಯ್ಕೆ ಮಾಡಿ.
ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ ನಂತರ ಅರ್ಜಿಯಲ್ಲಿ ಕೇಳಲಾಗುವ ಸ್ವ- ವಿವರ ಹಾಗೂ ಅಗತ್ಯ ಶೈಕ್ಷಣಿಕದ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.
ಸಲ್ಲಿಸಿದ ಅರ್ಜಿ ನಮೂನೆಯ ಹಾರ್ಡ್ ಪ್ರತಿಯನ್ನು ಸ್ಪೀಡ್ ಪೋಸ್ಟ್ ಅಥವಾ ಕೊರಿಯರ್ ಮೂಲಕ ಈ ಕೆಳಗಿನ ವಿಳಾಸಕ್ಕೆ ಕಳುಹಿಸಿ.
ಜನರಲ್ ಮ್ಯಾನೇಜರ್ (HR) ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ III ಮಹಡಿ, BMTC ಕಾಂಪ್ಲೆಕ್ಸ್, KH ರಸ್ತೆ ಶಾಂತಿನಗರ, ಬೆಂಗಳೂರು – 560027 ಇವರಿಗೆ ಆಗಸ್ಟ್ 18ರ ಒಳಗೆ ಕಳುಹಿಸಬೇಕು.ಲಕೋಟೆಯ ಮೇಲೆ ಸಹಾಯಕ ಮುಖ್ಯ ಭದ್ರತಾ ಅಧಿಕಾರಿ ಹುದ್ದೆಗೆ ಅರ್ಜಿ ಎಂದು ಬರೆಯಿರಿ.