ಈ ಯೋಜನೆ ಅಡಿಯಲ್ಲಿ ರಾಜ್ಯದ ಈ ಜಿಲ್ಲೆಯವರಿಗೆ ಉಚಿತ ವಸತಿ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಪ್ರಧಾನ ಮಂತ್ರಿ ಅವಾಸ್ ಯೋಜನೆ (ಪಿಎಮ್ ಅವಾಸ್ 2.0) ಅಡಿಯಲ್ಲಿ ನಗರ ಪ್ರದೇಶಗಳಲ್ಲಿ ವಸತಿ ಸೌಲಭ್ಯ ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಯೋಜನೆಯಡಿ, ವಸತಿ ರಹಿತ, ಕಚ್ಚಾ ಮನೆಗಳಲ್ಲಿ ವಾಸಿಸುವ ಅಥವಾ ಸ್ವಂತ ನಿವೇಶನವಿಲ್ಲದ ಕುಟುಂಬಗಳಿಗೆ ಮನೆ ನಿರ್ಮಾಣಕ್ಕೆ ಸಹಾಯಧನ ನೀಡಲಾಗುತ್ತದೆ.ಈ ಕುರಿತು ಸಂಪೂರ್ಣ ಮಾಹಿತಿ ಕೆಳಗೆ ಕೊಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಯಾರು ಅರ್ಹರು?

ಈ ಯೋಜನೆಯಡಿ ಕೆಳಗಿನ ವರ್ಗಗಳಿಗೆ ಪ್ರಾಶಸ್ತ್ಯ ನೀಡಲಾಗುತ್ತದೆ:

ಒಂಟಿ ಮಹಿಳೆಯರು

ಅಂಗವಿಕಲರು

ಹಿರಿಯ ನಾಗರಿಕರು (60 ವರ್ಷ ಮೇಲ್ಪಟ್ಟವರು)

ತೃತೀಯ ಲಿಂಗಿಗಳು

ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST), ಹಿಂದುಳಿದ ವರ್ಗ (OBC) ಮತ್ತು ಅಲ್ಪಸಂಖ್ಯಾತ ಸಮುದಾಯದವರು

ಸ್ವಚ್ಛತಾ ಕಾರ್ಮಿಕರು

ಬೀದಿ ವ್ಯಾಪಾರಿಗಳು (ಪಿಎಂ ಎಸ್ವಿ ನಿಧಿ ಯೋಜನೆ ಅಡಿಯಲ್ಲಿ ನೋಂದಾಯಿತರು)

ಕುಶಲಕರ್ಮಿಗಳು (ಪಿಎಂ ವಿಶ್ವಕರ್ಮ ಯೋಜನೆ ಅಡಿಯಲ್ಲಿ ನೋಂದಾಯಿತರು)

ಅಂಗನವಾಡಿ ಕಾರ್ಯಕರ್ತರು

ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರು

ವಲಸೆ ಬಂದ ಕುಟುಂಬಗಳು

ಅಗತ್ಯ ದಾಖಲೆಗಳು:

ನಿವೇಶನ/ಮನೆ ಸ್ವಾಧೀನಕ್ಕೆ ಸಂಬಂಧಿಸಿದ ದಾಖಲೆಗಳು

ಜಾತಿ ಮತ್ತು ಆದಾಯ ಪ್ರಮಾಣಪತ್ರ

ಪಡಿತರ ಚೀಟಿ (ರೇಷನ್ ಕಾರ್ಡ್)

ಬ್ಯಾಂಕ್ ಪಾಸ್ ಬುಕ್ ನಕಲು

ಆಧಾರ್ ಕಾರ್ಡ್ ಮತ್ತು ಪ್ಯಾನ್ ಕಾರ್ಡ್ ನಕಲು

ಮೊಬೈಲ್ ಸಂಖ್ಯೆ

ನಿಗದಿತ ಅರ್ಜಿ ಪತ್ರ (ಯೋಜನೆಯ ಅಧಿಕೃತ ವೆಬ್ ಸೈಟ್ ನಲ್ಲಿ ಲಭ್ಯ)

ಅರ್ಜಿ ಸಲ್ಲಿಸುವ ವಿಧಾನ:

ಅರ್ಜಿಗಳನ್ನು ಪಿಎಮ್ ಅವಾಸ್ ನಗರ ಅಧಿಕೃತ ವೆಬ್ ಸೈಟ್ http://pmayurban.gov.in ಮೂಲಕ ಆನ್ ಲೈನ್ ನಲ್ಲಿ ಸಲ್ಲಿಸಬೇಕು.

ಕೊನೆಯ ದಿನಾಂಕ: ಜುಲೈ 15, 2024

ಗಮನಿಸಿ: ಅವಧಿ ಮೀರಿ ಸಲ್ಲಿಸಿದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗೆ:

ದಾವಣಗೆರೆ ನಗರ ಪಾಲಿಕೆ ಅಥವಾ ಜಿಲ್ಲಾ ನಗರಾಭಿವೃದ್ಧಿ ಪ್ರಾಧಿಕಾರವನ್ನು ಸಂಪರ್ಕಿಸಬಹುದು.

ಪಾಲಿಕೆ ಆಯುಕ್ತ ರೇಣುಕಾ ಅವರ ಸೂಚನೆ:

“ಯೋಗ್ಯರಾದ ಎಲ್ಲಾ ಅರ್ಜಿದಾರರು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಿ. ಅರ್ಜಿ ಪ್ರಕ್ರಿಯೆ ಪೂರ್ಣಗೊಳಿಸಲು ಎಲ್ಲಾ ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಂಡಿರಿ.”


Previous Post Next Post