2025-26ನೇ ಸಾಲಿನಲ್ಲಿ ಭಾರತ ಸರ್ಕಾರದ ಗ್ರಾಮೋದ್ಯೋಗ ವಿಕಾಸ ಯೋಜನೆ (GVY) ಅಡಿಯಲ್ಲಿ ಗ್ರಾಮೀಣ ನಿರುದ್ಯೋಗ ಯುವಕ/ ಯುವತಿಯರಿಗೆ ವಿವಿಧ ತರಬೇತಿಗಳನ್ನು ನೀಡಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದ ರಾಜ್ಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗ್ರಾಮೀಣ ನಿರುದ್ಯೋಗ ಯುವಕ ಮತ್ತು ಯುವತಿಯರಿಗೆ ಸುಧಾರಿತ ಟೂಲ್‌ಕಿಟ್‌ಗಳು/ಯಂತ್ರೋಪಕರಣಗಳು/ ಉಪಕರಣಗಳು ಉತ್ಪಾದನೆ, ಆದಾಯ, ಬೆಂಬಲ/ಸೇವೆಗಳು ಮತ್ತು ವಿವಿಧ ತರಬೇತಿಯನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಯೋಜನೆಯ ಕುರಿತು ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು, ವಯೋಮಿತಿ ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಪ್ರಕಟಣೆಯ ದಿನಾಂಕ – 28-06-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 20-07-2025
ತರಬೇತಿ ಮುಗಿದ ನಂತರ:
ತರಬೇತಿ ಮುಗಿದ ನಂತರ ಅಭ್ಯರ್ಥಿಗಳಿಗೆ ಸರ್ಕಾರಿ ಪ್ರಮಾಣಪತ್ರ
ಉದ್ಯಮಶೀಲತೆಯನ್ನು ಪ್ರಾರಂಭಿಸಲು ಸುಧಾರಿತ ಉಪಕರಣಗಳು/ಕಿಟ್‌ಗಳು/ ಯಂತ್ರೋಪಕರಣಗಳನ್ನು ಒದಗಿಸಲಾಗುವುದು.
ಸಲ್ಲಿಸಬೇಕಾದ ಅಗತ್ಯ ದಾಖಲೆ:
ಯಂತ್ರೋಪಕರಣಗಳು, ಉಪಕರಣಗಳು ಮತ್ತು ಸಲಕರಣೆಗಳ ನಿರ್ವಹಣೆಗೆ ಆಯ್ಕೆಯಾದ ಫಲಾನುಭವಿಯು ಸ್ವಯಂ ಘೋಷಿತ ಹೊಣೆಗಾರಿಕೆಯನ್ನು ಸಲ್ಲಿಸಬೇಕು.
ವಿತರಿಸಬೇಕಾದ ಯಂತ್ರಗಳು, ಉಪಕರಣಗಳು ಮತ್ತು ಸಲಕರಣೆಗಳ ಒಟ್ಟು ವೆಚ್ಚದ ವಿರುದ್ಧ ಸ್ವಂತ ಕೊಡುಗೆಯನ್ನು ಕೆಳಗೆ ನೀಡಲಾದ ಮಾದರಿಯ ಪ್ರಕಾರ ಕುಶಲಕರ್ಮಿಗಳಿಂದ ಸಂಗ್ರಹಿಸಲಾಗುತ್ತದೆ
ಅರ್ಜಿ ಸಲ್ಲಿಸುವ ವಿಧಾನ:
ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದ ಅಧಿಕೃತ ವೆಬ್ ಸೈಟ್ http://www.kvic.org.in/ ಗೆ ಭೇಟಿ ನೀಡಿ.
ವೆಬ್ ಸೈಟ್ ನಲ್ಲಿ ಯೋಜನೆಯ ವಿವರಗಳೊಂದಿಗೆ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು.
ಅರ್ಜಿಯಲ್ಲಿ ಕೇಳಲಾಗಿರುವ ಹೆಸರು, ವಿಳಾಸ, ವಯಸ್ಸು, ಆಧಾರ್ ಪ್ರತಿ, ಪ್ಯಾನ್ ಕಾರ್ಡ್ ಪ್ರತಿ, ಜಾತಿ ಆದಾಯ ಪ್ರಮಾಣ ಪತ್ರ, ಸಂಪರ್ಕ ಸಂಖ್ಯೆ, ಶಿಕ್ಷಣದ ಸ್ಥಿತಿ, ಅನುಭವ ಇತ್ಯಾದಿ ವಿವರಗಳನ್ನು ನಮೂದಿಸಿ ಹಾಗೂ ಎರಡು ಪಾಸ್‌ಪೋರ್ಟ್ ಅಳತೆ ಭಾವಚಿತ್ರ ಲಗತ್ತಿಸಿ ಈ ಕೆಳಗಿನ ವಿಳಾಸಕ್ಕೆ ಜುಲೈ 20 ರೊಳಗೆ ಕಳುಹಿಸಬಹುದು.
ವಿಳಾಸ:
ಖಾದಿ ಮತ್ತು ಗ್ರಾಮೋದ್ಯೋಗ ಆಯೋಗ, ವಿಜಿನಾಪುರ, ದೂರವಾಣಿ ನಗರ, ಬೆಂಗಳೂರು 560016
ವಿಶೇಷ ಸೂಚನೆ:
ಪುನರ್ವಸತಿ/ ಶರಣಾದ ನಕ್ಸಲೀಯರು/ ಉಗ್ರಗಾಮಿಗಳು/ರಕ್ಷಣಾ ಸಿಬ್ಬಂದಿಯ ವಿಧವೆಯರು, ಪ್ಯಾರಾ-ಮಿಲಿಟರಿ ಪಡೆಗಳು ಮತ್ತು ಉಗ್ರಗಾಮಿ ಪೀಡಿತ ಕುಟುಂಬಗಳು, ಸ್ವಸಹಾಯ ಗುಂಪು ಇತ್ಯಾದಿ. ವ್ಯಕ್ತಿಗಳಿಗೆ ಆದ್ಯತೆ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ:
ದೂರವಾಣಿ ಸಂಖ್ಯೆ – 080-25665885 ಅನ್ನು ಸಂಪರ್ಕಿಸಬಹುದು.