IBPS PO 2025 Notification: ಪ್ರೊಬೇಷನರಿ ಆಫೀಸರ್ ಹುದ್ದೆಗಳ ಬೃಹತ್ ನೇಮಕಾತಿ, ಅಪ್ಲೈ ಮಾಡಿ

ದೇಶದ ವಿವಿಧ ಬ್ಯಾಂಕುಗಳಲ್ಲಿ ಖಾಲಿ ಇರುವ 5208 ಪ್ರೊಬೇಷನರಿ ಆಫೀಸರ್ (PO) ಹುದ್ದೆಗಳ ನೇಮಕಾತಿಗಾಗಿ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ (IBPS)ಯು ಅಧಿಸೂಚನೆ ಬಿಡುಗಡೆ ಮಾಡಿ ಅರ್ಜಿ ಸಲ್ಲಿಕೆ ಪ್ರಾರಂಭಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಸಾರ್ವಜನಿಕ ವಲಯದ ಬ್ಯಾಂಕುಗಳ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 5208 ಪ್ರೊಬೇಷನರಿ ಆಫೀಸರ್ (PO) /ನಿರ್ವಹಣಾ ತರಬೇತುದಾರ ಹುದ್ದೆಗಳ ಬೃಹತ್ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಬ್ಯಾಂಕಿಂಗ್ ವಲಯದಲ್ಲಿ ಉದ್ಯೋಗ ಪಡೆಯುವ ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳು IBPS ಅಧಿಕೃತ ವೆಬ್ ಸೈಟ್

https://ibps.in/ಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು ಹಾಗೂ ಇತರೆ ಮಾಹಿತಿಯನ್ನು ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ, ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಅಧಿಸೂಚನೆಯ ದಿನಾಂಕ 01-07-2025

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 21-07-2025

IBPS PO 2025ರ ನೇಮಕಾತಿಯಲ್ಲಿ ಭಾಗವಹಿಸಿರುವ ಬ್ಯಾಂಕುಗಳು:

ಪಂಜಾಬ್ ನ್ಯಾಷನಲ್‌ ಬ್ಯಾಂಕ್

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ

ಬ್ಯಾಂಕ್ ಆಫ್ ಇಂಡಿಯಾ

ಇಂಡಿಯನ್ ಬ್ಯಾಂಕ್

ಕೆನರಾ ಬ್ಯಾಂಕ್

ಇಂಡಿಯನ್ ಓವರ್‌ಸೀಸ್‌ ಬ್ಯಾಂಕ್

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ

ಯುಕೋ ಬ್ಯಾಂಕ್

ಬ್ಯಾಂಕ್ ಆಫ್ ಬರೋಡಾ

ಪಂಜಾಬ್ ಮತ್ತು ಸಿಂದ್‌ ಬ್ಯಾಂಕ್

ಬ್ಯಾಂಕ್ ಆಫ್ ಮಹಾರಾಷ್ಟ್ರ

ಶೈಕ್ಷಣಿಕ ಅರ್ಹತೆ:

ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಯಾವುದೇ ವಿಭಾಗದಲ್ಲಿ ಪದವಿ ಅಥವಾ ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಪದವಿ ಸಮಾನ ಅರ್ಹತೆ ಹೊಂದಿರಬೇಕು.

ವಯೋಮಿತಿ:

ದಿನಾಂಕ 01-07-2025 ರಂತೆ

ಸರ್ಕಾರಿ ನಿಯಮಗಳ ಅನುಸಾರ ಮೀಸಲಾತಿ ವರ್ಗಗಳಿಗೆ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ

ಆಯ್ಕೆ ಪ್ರಕ್ರಿಯೆ:

ಪ್ರಿಲಿಮ್ಸ್ ಲಿಖಿತ ಪರೀಕ್ಷೆ.

ಮುಖ್ಯ ಪರೀಕ್ಷೆ. 

ಸಂದರ್ಶನ.

ಅರ್ಜಿ ಶುಲ್ಕ:

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ - 175ರೂ.

ಇತರೆ ಎಲ್ಲಾ ಅಭ್ಯರ್ಥಿಗಳಿಗೆ - 850ರೂ.

ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ

IBPS ಅಧಿಕೃತ ವೆಬ್ ಸೈಟ್ https://ibpsreg.ibps.in/crppoxvjun25/233 ಭೇಟಿ ನೀಡಿ.

ಹೊಸ ನೋಂದಣಿಗಾಗಿ ಇಲ್ಲಿ ಕ್ಲಿಕ್ ಮಾಡಿ ಲಿಂಕ್ ಮೇಲೆ ಟ್ಯಾಪ್ ಮಾಡಿ.

ಅರ್ಜಿಯಲ್ಲಿ ಕೇಳಲಾಗಿರುವ ಮೂಲ ಮಾಹಿತಿ, ಸ್ವ-ವಿವರ, ಭಾವಚಿತ್ರ, ಸಹಿ ಹಾಗೂ ಶೈಕ್ಷಣಿಕ ವಿವರಗಳನ್ನು ಅಪ್ಲೋಡ್ ಮಾಡಿ.

ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕ ಪಾವತಿ ಮಾಡಿ.

ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ. - ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿ ಸಲ್ಲಿಸಿದ ಪ್ರತಿಯನ್ನು ಡೌನ್ಸ್‌ಡ್ ಮಾಡಿಕೊಳ್ಳಿ.

Important Direct Links:

Official Notification:- Download PDF

Online Application Form Link:- Apply Now

Official Website:- www.ibps.in

Previous Post Next Post