ಕೊರ್ಟೆವಾ ಅಗ್ರಿಸೈನ್ಸ್ ಸೀಡ್ಸ್ ಪ್ರೈವೇಟ್ ಲಿಮಿಟೆಡ್‌ನಿಂದ 2025-26 ನೇ ಸಾಲಿನ "ಕೊರ್ಟೆವಾ ಅಗ್ರಿಸೈನ್ಸಸ್ ಸ್ಕಾಲರ್‌ಶಿಪ್/Scholarship Scheme" ಕಾರ್ಯಕ್ರಮದಡಿ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ಪಾವತಿ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಇಂದಿನ ಈ ಲೇಖನದಲ್ಲಿ ಸ್ಕಾಲರ್‌ಶಿಪ್ ಪಡೆಯಲು ಅರ್ಜಿ ಸಲ್ಲಿಸುವುದರ ಕುರಿತು ಸಂಪೂರ್ಣ ಮಾಹಿತಿಯನ್ನು ಪ್ರಕಟಿಸಲಾಗಿದೆ.
ರಾಜ್ಯ ಮತ್ತು ಕೇಂದ್ರ ಸರಕಾರದ ಯೋಜನೆಯ ಜೊತೆಗೆ ಖಾಸಗಿ ಸಂಸ್ಥೆಗಳಿಂದಲು ಸಹ ಪ್ರತಿ ವರ್ಷ ಅನೇಕ ಯೋಜನೆಗಳ ಮೂಲಕ ವಿದ್ಯಾರ್ಥಿವೇತನವನ್ನು(Scholarship Application) ಪಡೆಯಲು ಅವಕಾಶವಿದ್ದು ಅನೇಕ ಜನರಿಗೆ ಈ ಯೋಜನೆಗಳ ಕುರಿತು ಅಗತ್ಯ ಮಾಹಿತಿ ಇರುವುದಿಲ್ಲ ಇಂದಿನ ಈ ಲೇಖನದಲ್ಲಿ ಕೊರ್ಟೆವಾ ಅಗ್ರಿಸೈನ್ಸಸ್ ಸ್ಕಾಲರ್‌ಶಿಪ್ ಯೋಜನೆಯ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ.
ಕೊರ್ಟೆವಾ ಅಗ್ರಿಸೈನ್ಸಸ್ ಸ್ಕಾಲರ್‌ಶಿಪ್ ಯೋಜನೆಯಡಿ(Online Scholarship Application)ವಿದ್ಯಾರ್ಥಿವೇತನವನ್ನು ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸಲು ಅವಶ್ಯಕ ದಾಖಲಾತಿಗಳೇನು? ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ ಹೇಗೆ? ಇತ್ಯಾದಿ ಅಗತ್ಯ ಮಾಹಿತಿಯನ್ನು ಈ ಕೆಳಗೆ ಹಂಚಿಕೊಳ್ಳಲಾಗಿದೆ.
Agriscience Scholarship Amount-ಎಷ್ಟು ವಿದ್ಯಾರ್ಥಿವೇತನ ನೀಡಲಾಗುತ್ತದೆ?
ಪದವಿಪೂರ್ವ ವಿದ್ಯಾರ್ಥಿಗಳಿಗೆ: ₹25,000
ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ: ₹35,000
Last Date For Scholarship Application-ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31 ಆಗಸ್ಟ್ 2025
Who Can Apply-ಅರ್ಜಿ ಸಲ್ಲಿಸಲು ಅರ್ಹರು:
ಕೊರ್ಟೆವಾ ಅಗ್ರಿಸೈನ್ಸ್ ಸೀಡ್ಸ್ ಪ್ರೈವೇಟ್ ಲಿಮಿಟೆಡ್‌ನಿಂದ ಕೃಷಿ ಸಂಬಂಧಿತ ಕ್ಷೇತ್ರಗಳಲ್ಲಿ ಪದವಿಪೂರ್ವ, ಸ್ನಾತಕೋತ್ತರ ಅಥವಾ ಡಾಕ್ಟರೇಟ್ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವನ್ನು ನೀಡುವ ದೇಸೆಯಲ್ಲಿ "ಕೊರ್ಟೆವಾ ಅಗ್ರಿಸೈನ್ಸಸ್ ಸ್ಕಾಲರ್‌ಶಿಪ್" ಕಾರ್ಯಕ್ರಮವನ್ನು ಜಾರಿಗೆ ತರಲಾಗಿದ್ದು ಅರ್ಜಿ ಸಲ್ಲಿಸಲು ಅರ್ಹರ ವಿವರ ಈ ಕೆಳಗಿನಂತಿದೆ.
ಭಾರತೀಯ ಕೃಷಿ ಸಂಶೋಧನಾ ಮಂಡಳಿ (ICAR) ಅಥವಾ ರಾಜ್ಯ ಕೃಷಿ ವಿಶ್ವವಿದ್ಯಾಲಯದಿಂದ ಮಾನ್ಯತೆ ಪಡೆದ ಕೃಷಿ ಮತ್ತು ಸಂಬಂಧಿತ ಕೋರ್ಸ್‌ಗಳಲ್ಲಿ ಯಾವುದೇ ವರ್ಷದ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮಹಿಳಾ ವಿದ್ಯಾರ್ಥಿನಿಯರಿಗೆ ಮುಕ್ತವಾಗಿದೆ.
ಭಾರತೀಯ ಕೃಷಿ ಸಂಶೋಧನಾ ಮಂಡಳಿ (ICAR) ಅಥವಾ ರಾಜ್ಯ ಕೃಷಿ ವಿಶ್ವವಿದ್ಯಾಲಯದಿಂದ ಮಾನ್ಯತೆ ಪಡೆದ ಕೃಷಿ ಮತ್ತು ಸಂಬಂಧಿತ ವಿಭಾಗಗಳಲ್ಲಿ ಸ್ನಾತಕೋತ್ತರ (MBA/MSc/MTech) ಅಥವಾ PhD ಕೋರ್ಸ್‌ಗಳ ಯಾವುದೇ ವರ್ಷದ ಮಹಿಳಾ ವಿದ್ಯಾರ್ಥಿನಿಯರಿಗೆ ಮುಕ್ತವಾಗಿದೆ.
ವಿದ್ಯಾರ್ಥಿಗಳು ಸರ್ಕಾರಿ ಕಾಲೇಜುಗಳಲ್ಲಿ ಓದುತ್ತಿರಬೇಕು.
ಅರ್ಜಿದಾರ ಅಭ್ಯರ್ಥಿಯು ಭಾರತೀಯ ನಿವಾಸಿಯಾಗಿರಬೇಕು.
ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ ₹6,00,000 ಅಥವಾ ಅದಕ್ಕಿಂತ ಕಡಿಮೆ ಇರಬೇಕು.
Corteva ಮತ್ತು Buddy4Study ಉದ್ಯೋಗಿಗಳ ಮಕ್ಕಳು ಅರ್ಜಿ ಅರ್ಹರಲ್ಲ ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ವಿಶೇಷ ಸೂಚನೆ:
ವಿದ್ಯಾರ್ಥಿವೇತನ ನಿಧಿಯನ್ನು ಶೈಕ್ಷಣಿಕ ವೆಚ್ಚಗಳಿಗೆ ಮಾತ್ರ ಬಳಸಿಕೊಳ್ಳಬಹುದು, ಇದರಲ್ಲಿ ಬೋಧನಾ ಶುಲ್ಕ, ಹಾಸ್ಟೆಲ್ ಶುಲ್ಕ, ಆಹಾರ, ಪ್ರಯಾಣ, ಪುಸ್ತಕಗಳು, ಲೇಖನ ಸಾಮಗ್ರಿಗಳು, ಸಂಶೋಧನಾ ಕಾರ್ಯಗಳು ಇತ್ಯಾದಿ ಸೇರಿವೆ.
Online Scholarship Application-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ:
ಅರ್ಹ ವಿದ್ಯಾರ್ಥಿಗಳು ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗಾಗಿ ಈ ಕೆಳಗೆ ವಿವರಿಸಿರುವ ಹಂತಗಳನ್ನು ಅನುಸರಿಸಿ www.buddy4study.com ಅಧಿಕೃತ ತಂತ್ರಾಂಶವನ್ನು ಭೇಟಿ ಮಾಡಿ ಮನೆಯಲ್ಲೇ ಕುಳಿತು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ.
Step-1: ಮೊದಲಿಗೆ ಇಲ್ಲಿ ಕ್ಲಿಕ್ Apply Now ವಿದ್ಯಾರ್ಥಿವೇತನದ ಜಾಲತಾಣವನ್ನು ಪ್ರವೇಶ ಮಾಡಬೇಕು.
Step-2: ಇದಾದ ನಂತರ ಈ ಪೇಜ್ ನಲ್ಲಿ "Apply Now" ಬಟನ್ ಗೋಚರಿಸುತ್ತವೆ ಇಲ್ಲಿ ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಅನುಸಾರಗಾಗಿ ಒಂದು ಆಯ್ಕೆಯ ಮೇಲೆ ಕ್ಲಿಕ್ ಮಾಡಿ “Create an Account” ಆಯ್ಕೆಯ ಮೇಲೆ ಕ್ಲಿಕ್ ಮಾಡಿ ಖಾತೆಯನ್ನು ರಚಿಸಿಕೊಳ್ಳಬೇಕು ಬಳಿಕ “Login” ಬಟನ್ ಕ್ಲಿಕ್ ಮಾಡಿ ಲಾಗಿನ್ ಅಗಬೇಕು.
Step-3: ಲಾಗಿನ್ ಬಟನ್ ಮೇಲೆ ಕ್ಲಿಕ್ ಮಾಡಿ ಲಾಗಿನ್ ಅದ ಬಳಿಕ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ ಇಲ್ಲಿ ಅವಶ್ಯವಿರುವ ಎಲ್ಲಾ ಅಗತ್ಯ ವಿವರ ಮತ್ತು ದಾಖಲಾತಿಗಳನ್ನು ಅಪ್ಲೋಡ್ ಮಾಡಿ ಕೊನೆಯಲ್ಲಿ ತೋರಿಸುವ "Submit" ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬೇಕಾಗುತ್ತದೆ.
Required Documents For Scholarship-ಅರ್ಜಿ ಸಲ್ಲಿಸಲು ಅವಶ್ಯಕ ದಾಖಲೆಗಳು:
ಅರ್ಹ ಮತ್ತು ಆಸಕ್ತ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದ್ದು ಅರ್ಜಿಯನ್ನು ಸಲ್ಲಿಸಲು ಈ ಕೆಳಗಿನ ಪಟ್ಟಿಯಲ್ಲಿರುವ ದಾಖಲೆಗಳನ್ನು ಸಲ್ಲಿಸುವುದು ಕಡ್ಡಾಯವಾಗಿರುತ್ತದೆ.
ವಿದ್ಯಾರ್ಥಿಯ ಆಧಾರ್ ಕಾರ್ಡ/Aadhar
ಪೋಟೋ/Photo
ಅಂಕಪಟ್ಟಿ/Markscard
ಶಾಲಾ-ಕಾಲೇಜು ಪ್ರವೇಶ ದೃಡೀಕರಣ/Study Certificate
ಕುಟುಂಬದ ವಾರ್ಷಿಕ ಆದಾಯ ಪ್ರಮಾಣ ಪತ್ರ/Income Certificate
ಮೊಬೈಲ್ ನಂಬರ್/Mobile Number
ಇ-ಮೇಲ್ ವಿಳಾಸ/Email
Helpline-ಸಹಾಯವಾಣಿ:
011-430-92248 (Ext-334) (ಸೋಮವಾರದಿಂದ ಶುಕ್ರವಾರದವರೆಗೆ - ಬೆಳಿಗ್ಗೆ 10:00 ರಿಂದ ಸಂಜೆ 06:00 (IST))