Paramedical Admission 2025: ಪ್ಯಾರಾ ವೈದ್ಯಕೀಯ ಡಿಪ್ಲೊಮಾ ಕೋರ್ಸ್‌ಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

2025-26ನೇ ಸಾಲಿನ ಅರೆ ವೈದ್ಯಕೀಯ ಡಿಪ್ಲೊಮಾ ಕೋರ್ಸ್‌ಗಳಿಗೆ ಸರ್ಕಾರಿ ಕೋಟಾದ ಸೀಟುಗಳಡಿ ಪ್ರವೇಶ ಪಡೆಯಲು ಅರ್ಹ ಅಭ್ಯರ್ಥಿಗಳಿಂದ(Karnataka Paramedical Admission 2025) ಅರ್ಜಿ ಆಹ್ವಾನಿಸಲಾಗಿದೆ.

ಸರ್ಕಾರಿ ವೈದ್ಯಕೀಯ ಕಾಲೇಜುಗಳು ಮತ್ತು ಇತರ ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ಯಾರಾ ವೈದ್ಯಕೀಯ ಡಿಪ್ಲೊಮಾ ಕೋರ್ಸ್‌ಗಳಿಗೆ ಮತ್ತು ಖಾಸಗಿ ಪ್ಯಾರಾ ವೈದ್ಯಕೀಯ ಕಾಲೇಜುಗಳಲ್ಲಿನ ಸರ್ಕಾರಿ ಕೋಟಾ ಸೀಟುಗಳ ಪ್ರವೇಶಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರೆ ವೈದ್ಯಕೀಯ ಮಂಡಳಿಯ ಅಧಿಕೃತ ವೆಬ್ಸೈಟ್ https://www.pmbkarnataka.org/ಗೆ ಭೇಟಿ ನೀಡಿ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಕರ್ನಾಟಕ ನರ್ಸಿಂಗ್‌ ಹಾಗೂ ಅರೆ ವೈದ್ಯಕೀಯ ವಿಜ್ಞಾನಗಳ ಶಿಕ್ಷಣ (ನಿಯಂತ್ರಣ) ಪ್ರಾಧಿಕಾರವು ಅಧಿಸೂಚನೆಯಲ್ಲಿ ತಿಳಿಸಿದೆ.

ಈ ಲೇಖನದಲ್ಲಿ ಸದರಿ ಪ್ರವೇಶಾತಿಗೆ ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು, ಅರ್ಹತೆ, ವಯೋಮಿತಿ ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು ನೀಡಲಾಗಿದೆ. ತಪ್ಪದೇ ಕೊನೆವರೆಗೂ ಓದಿ. ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಆರಂಭದ ದಿನಾಂಕ – ಜೂನ್ 26, 2025

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಜುಲೈ 25, 2025

ಕೋರ್ಸ್ ಗಳ ವಿವರ:

ವೈದ್ಯಕೀಯ ಪ್ರಯೋಗಾಲಯ ತಂತ್ರಜ್ಞಾನದಲ್ಲಿ ಡಿಪ್ಲೊಮಾ (DMLT)

ವೈದ್ಯಕೀಯ ಇಮೇಜಿಂಗ್ ತಂತ್ರಜ್ಞಾನದಲ್ಲಿ ಡಿಪ್ಲೊಮಾ (DMIT)

ಆರೋಗ್ಯ ನಿರೀಕ್ಷಕರಲ್ಲಿ ಡಿಪ್ಲೊಮಾ (DHI)

ವೈದ್ಯಕೀಯ ದಾಖಲೆ ತಂತ್ರಜ್ಞಾನದಲ್ಲಿ ಡಿಪ್ಲೊಮಾ (DMRT)

ಡಯಾಲಿಸಿಸ್ ತಂತ್ರಜ್ಞಾನದಲ್ಲಿ ಡಿಪ್ಲೊಮಾ (DDT)

ಆಪರೇಷನ್ ಥಿಯೇಟರ್ ಮತ್ತು ಅರಿವಳಿಕೆ ತಂತ್ರಜ್ಞಾನದಲ್ಲಿ ಡಿಪ್ಲೊಮಾ (DOT & AT)

ನೇತ್ರ ತಂತ್ರಜ್ಞಾನದಲ್ಲಿ ಡಿಪ್ಲೊಮಾ (DOT)

ದಂತ ಮೆಕ್ಯಾನಿಕ್‌ನಲ್ಲಿ ಡಿಪ್ಲೊಮಾ (DDM)

ದಂತ ನೈರ್ಮಲ್ಯದಲ್ಲಿ ಡಿಪ್ಲೊಮಾ (DDH)

ಶೈಕ್ಷಣಿಕ ಅರ್ಹತೆ:

DMLT, DMIT, DHI, DMRT, DDT, DOT & AT, DOT, DDM & DDH ಕೋರ್ಸುಗಳಿಗೆ;

ಎಸ್ಸೆಸ್ಸೆಲ್ಸಿ ಉತ್ತೀರ್ಣ ಅಥವಾ (ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಜೀವಶಾಸ್ತ್ರ/ಸಸ್ಯಶಾಸ್ತ್ರ/ಪ್ರಾಣಿಶಾಸ್ತ್ರ) ವಿಷಯಗಳಲ್ಲಿ ದ್ವಿತೀಯ ಪಿಯುಸಿ ಉತ್ತೀರ್ಣರಾಗಿರಬೇಕು.

DMRT ಕೋರ್ಸಿಗೆ;

ಎಸ್ಸೆಸ್ಸೆಲ್ಸಿ ಉತ್ತೀರ್ಣ ಅಥವಾ ಕಲೆ/ವಾಣಿಜ್ಯ/PCMC/PCME ವಿಭಾಗದಲ್ಲಿ ದ್ವಿತೀಯ ಪಿಯುಸಿ ಉತ್ತೀರ್ಣರಾಗಿರಬೇಕು.

ವಯೋಮಿತಿ:

ಸಾಮಾನ್ಯ ಮತ್ತು OBC ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿ – 35 ವರ್ಷಗಳು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮತ್ತು ಸೇವಾವಧಿಯಲ್ಲಿರುವ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿ – 40 ವರ್ಷಗಳು.

ಕೋರ್ಸ್‌ನ ಅವಧಿ:

ದ್ವಿತೀಯ ಪಿಯುಸಿ ಅಭ್ಯರ್ಥಿಗಳಿಗೆ – 2 ವರ್ಷಗಳು ಜೊತೆಗೆ 3 ತಿಂಗಳು ಇಂಟರ್ನ್‌ಶಿಪ್

ಎಸ್ಸೆಸ್ಸೆಲ್ಸಿ ಅಭ್ಯರ್ಥಿಗಳಿಗೆ – 3 ವರ್ಷಗಳು ಜೊತೆಗೆ 3 ತಿಂಗಳ ಇಂಟರ್ನ್‌ಶಿಪ್

ಆಯ್ಕೆ ವಿಧಾನ:

ಮೆರಿಟ್-ಕಮ್- ವರ್ಗವಾರು ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಕೌನ್ಸೆಲಿಂಗ್

ದಾಖಲಾತಿ ಪರಿಶೀಲನೆ

Previous Post Next Post