Post Matric BCM Hostel Application 2025: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.
ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ 2025-26ನೇ ಸಾಲಿಗೆ ಹೊಸದಾಗಿ ಪ್ರವೇಶ ಪಡೆಯ ಬಯಸುವ ಪ್ರವರ್ಗ-1, 2A, 2B, 3A, 3B, SC ಮತ್ತು ST ಸಮುದಾಯಕ್ಕೆ ಸೇರಿದ PUC, ITI ಮತ್ತು ಡಿಪ್ಲೋಮಾ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವಾರ್ಷಿಕ ಆದಾಯ ಮಿತಿ:
ಪ್ರವರ್ಗ-1, SC ಮತ್ತು ST ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ ಎಲ್ಲಾ ಮೂಲಗಳಿಂದ: 2.50 ಲಕ್ಷ ರೂ. ಮೀರಿರಬಾರದು.
ಪ್ರವರ್ಗ- 2A, 2B, 3A, ಮತ್ತು 3B ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ ಎಲ್ಲಾ ಮೂಲಗಳಿಂದ: 1 ಲಕ್ಷ ರೂ. ಮೀರಿರಬಾರದು.
Post Matric BCM Hostel Application 2025 ಬೇಕಾಗುವ ದಾಖಲೆಗಳು:
- ಆಧಾರ್ ಕಾರ್ಡ್
- ಮೊಬೈಲ್ ನಂಬರ್
- ಅರ್ಜಿದಾರರ SSP ಐಡಿ
- ಆದಾಯ ಪ್ರಮಾಣ ಪತ್ರ
- ಜಾತಿ ಪ್ರಮಾಣ ಪತ್ರ
- ವಾಸಸ್ಥಳ ದೃಢೀಕರಣ ಪತ್ರ
- ಹಿಂದಿನ ತರಗತಿಯ ಮಾರ್ಕ್ಸ್ ಕಾರ್ಡ್
- ಇತ್ತೀಚಿನ ಪಾಸ್‌ಪೋರ್ಟ್ ಗಾತ್ರದ ಪೋಟೋ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 19-05-2025
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 30-06-2025
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಅರ್ಜಿ ಲಿಂಕ್: ಅರ್ಜಿ ಸಲ್ಲಿಸಿ
ಅಧಿಕೃತ ವೆಬ್’ಸೈಟ್: bcwd.karnataka.gov.in, shp.karnataka.gov.in/bcwd