Railway Recruitment 2025: 10ನೇ ತರಗತಿ ಪಾಸಾದವರಿಗೆ ಸರ್ಕಾರಿ ಕೆಲಸ, ತಿಂಗಳಿಗೆ 45,000 ದವರೆಗೆ ಸಂಬಳ, ಈ ರೀತಿ ಅರ್ಜಿ ಸಲ್ಲಿಸಿ

ನಮಸ್ಕಾರ ಗೆಳೆಯರೇ ಸರ್ಕಾರಿ ಕೆಲಸ ಮಾಡಲು ಆಸಕ್ತಿ ಇರುವಂತಹ ಜನರಿಗೆ ಇದೀಗ ರೈಲ್ವೆ ಇಲಾಖೆಯ ವತಿಯಿಂದ ಭರ್ಜರಿ ಗುಡ್ ನ್ಯೂಸ್ ನೀಡಲಾಗಿದೆ.ಹೌದು ಸ್ನೇಹಿತರೆ ಸೌತ್ ವೆಸ್ಟ್ರನ್ ರೈಲ್ವೆ ಇಲಾಖೆ ಇದೀಗ ಹೊಸ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದ್ದು ಈ ಒಂದು ಅಧಿಸೂಚನೆ ಪ್ರಕಾರ ನಮ್ಮ ಕರ್ನಾಟಕದ ಹುಬ್ಬಳ್ಳಿ ಹಾಗೂ ಮೈಸೂರು ಮತ್ತು ಬೆಂಗಳೂರು ನಗರಗಳಲ್ಲಿ ಇರುವ ರೈಲ್ವೆ ಇಲಾಖೆಯ ವಿವಿಧ ಅಪ್ರಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಿದೆ.

ಹಾಗಾಗಿ ನಾವು ಈ ಲೇಖನಯ ಮೂಲಕ ಈ ರೈಲ್ವೆ ಇಲಾಖೆಯ ಹುದ್ದೆಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ಎಷ್ಟು ಹುದ್ದೆಗಳು ಖಾಲಿ ಇವೆ. ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮತ್ತು ಇತರ ವಿವರಗಳಿಗೆ ಸಂಬಂಧಿಸಿದಂತೆ ಮಾಹಿತಿ ತಿಳಿಯೋಣ

ರೈಲ್ವೆ ಇಲಾಖೆ ಹೊಸ ನೇಮಕಾತಿ 2025 (Railway Recruitment 2025).?

ಹೌದು ಸ್ನೇಹಿತರೆ ನಿಮಗೆ ಸರ್ಕಾರಿ ಉದ್ಯೋಗ ಮಾಡಲು ಆಸಕ್ತಿ ಇದೆಯಾ ಹಾಗಾದರೆ ನಿಮಗೆ ಭರ್ಜರಿ ಗುಡ್ ನ್ಯೂಸ್, ಸೌತ್ ವೆಸ್ಟರ್ನ್ ರೈಲ್ವೆ ಇಲಾಖೆ ಇದೀಗ ನಮ್ಮ ಕರ್ನಾಟಕದ ಹುಬ್ಬಳ್ಳಿ ಹಾಗೂ ಮೈಸೂರು ಮತ್ತು ಬೆಂಗಳೂರು ನಗರದಲ್ಲಿ ಇರುವ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತೆ ವಿವಿಧ ಅಪ್ರಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಿದೆ.

Railway Recruitment 2025

ರೈಲ್ವೆ ಇಲಾಖೆ ನೇಮಕಾತಿ ಅತಿ ಸೂಚನೆ ಪ್ರಕಾರ ಈ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಜಸ್ಟ್ ಹತ್ತನೇ ತರಗತಿ ಪಾಸಾದರೆ ಅರ್ಜಿ ಸಲ್ಲಿಸಬಹುದು ಹಾಗಾಗಿ ನಾವು ಈ ಹುದ್ದೆಗಳ ನೇಮಕಾತಿ ಕುರಿತು ಇನ್ನಷ್ಟು ಹೆಚ್ಚಿನ ಮಾಹಿತಿಯನ್ನು ಇದೀಗ ತಿಳಿದುಕೊಳ್ಳೋಣ.

ರೈಲ್ವೆ ಇಲಾಖೆ ಖಾಲಿ ಹುದ್ದೆಗಳ ನೇಮಕಾತಿ ವಿವರ..?

ನೇಮಕಾತಿ ಸಂಸ್ಥೆ:- ಭಾರತೀಯ ರೈಲ್ವೆ ಇಲಾಖೆ

ಖಾಲಿ ಹುದ್ದೆಗಳ ಸಂಖ್ಯೆ:- 904 ಹುದ್ದೆಗಳು

ಉದ್ಯೋಗ ಸ್ಥಳ:- ಬೆಂಗಳೂರು, ಮೈಸೂರು, ಹುಬ್ಬಳ್ಳಿ

ಖಾಲಿ ಹುದ್ದೆಯ ಹೆಸರು:- ವಿವಿಧ ಅಪ್ರೆಂಟಿಸ್ ಹುದ್ದೆಗಳು

ಅರ್ಜಿ ಪ್ರಾರಂಭ ದಿನಾಂಕ:- 14/07/2025

ಅರ್ಜಿ ಕೊನೆಯ ದಿನಾಂಕ:- 13/08/2025

ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ

ಖಾಲಿ ಹುದ್ದೆಗಳ ವಿವರ:-

ಹುಬ್ಬಳ್ಳಿ ಡಿವಿಜನ್:- 237 ಖಾಲಿ ಹುದ್ದೆಗಳು

ಬೆಂಗಳೂರು ಡಿವಿಷನ್:- 230 ಖಾಲಿ ಹುದ್ದೆಗಳು

ಮೈಸೂರು ಡಿವಿಜನ್:- 177 ಖಾಲಿ ಹುದ್ದೆಗಳು

ಸೆಂಟ್ರಲ್ ವರ್ಕ್ ಶಾಪ್ ಮೈಸೂರ್:- 43 ಖಾಲಿ ಹುದ್ದೆಗಳು

ಗ್ಯಾರೇಜ್ ರಿಪೇರ್ ವರ್ಕ್ ಶಾಪ್ ಹುಬ್ಬಳ್ಳಿ:- 217 ಹುದ್ದೆಗಳು

ರೈಲ್ವೆ ಇಲಾಖೆಯಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (Railway Recruitment 2025).?

ಶೈಕ್ಷಣಿಕ ಅರ್ಹತೆ:- ಸೌತ್ ವೆಸ್ಟರ್ನ್ ರೈಲ್ವೆ ಇಲಾಖೆ ಬಿಡುಗಡೆ ಮಾಡಿರುವ ನೇಮಕಾತಿ ಅಧಿಸೂಚನೆ ಪ್ರಕಾರ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಹತ್ತನೇ ತರಗತಿ ಪಾಸ್ ಆಗಿರಬೇಕು ಹಾಗೂ ಆಯಾ ಟ್ರೇಡ್ ಗಳಲ್ಲಿ ITI ವಿದ್ಯಾರ್ಹತೆ ಹೊಂದಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

ವಯೋಮಿತಿ:- ರೈಲ್ವೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 15 ವರ್ಷ ಹಾಗೂ ಗರಿಷ್ಠ 24 ವರ್ಷ ವಯೋಮಿತಿ ನಿಗದಿ ಮಾಡಲಾಗಿದೆ, ಮೀಸಲಾತಿ ಆಧಾರದ ಮೇಲೆ SC/ST ಅಭ್ಯರ್ಥಿಗಳಿಗೆ ಐದು ವರ್ಷ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಮತ್ತು ಪಿ ಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಲಿಕ್ಕೆ ಮಾಡಲಾಗಿದೆ.

ಸಂಬಳ ಎಷ್ಟು:- ರೈಲ್ವೆ ಇಲಾಖೆ ಬಿಡುಗಡೆ ಮಾಡಿರುವ 904 ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ಕನಿಷ್ಠ 18000 ಇಂದ ಗರಿಷ್ಠ 45,000 ವರೆಗೆ ಹುದ್ದೆಗಳ ಅನುಗುಣವಾಗಿ ಸಂಬಳ ನೀಡಲಾಗುತ್ತದೆ

ಅರ್ಜಿ ಶುಲ್ಕ ಎಷ್ಟು:- ರೈಲ್ವೆ ಇಲಾಖೆಯ 904 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಮಹಿಳಾ ಮತ್ತು ಪಿ ಡಬ್ಲ್ಯೂ ಡಿ ಅಭ್ಯರ್ಥಿಗಳಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ ಹಾಗೂ ಉಳಿದ ಅಭ್ಯರ್ಥಿಗಳಿಗೆ ₹100/- ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ

ಆಯ್ಕೆ ವಿಧಾನ:- ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 904 ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಿದಂತ ಅಭ್ಯರ್ಥಿಗಳನ್ನು ಮೊದಲು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ ನಂತರ ದಾಖಲಾತಿ ಪರಿಶೀಲನೆ ಹಾಗೂ ಇತರ ಮಾಹಿತಿ ಪರಿಶೀಲನೆ ಮಾಡಿ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ

ರೈಲ್ವೆ ಇಲಾಖೆ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ..?

ಸ್ನೇಹಿತರೆ ನೀವು ಸೌತ್ ವೆಸ್ಟರ್ನ್ ರೈಲ್ವೆ ಇಲಾಖೆ ಬಿಡುಗಡೆ ಮಾಡಿರುವ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ಮೊದಲು ಈ ಹುದ್ದೆಗಳ ನೇಮಕಾತಿ ಅಧಿಕೃತ ಅರ್ಜಿ ಸೂಚನೆ ಓದಿಕೊಳ್ಳಿ ನಂತರ ಕೆಳಗಡೆ ನೀಡಿದ ಲಿಂಕ್ ಬಳಸಿಕೊಂಡು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

ಸ್ನೇಹಿತರೆ ನಿಮಗೆ ಇದೇ ರೀತಿ ಸರಕಾರಿ ಹುದ್ದೆಗಳಿಗೆ ಸಂಬಂಧಿಸಿದ ನೇಮಕಾತಿ ಕುರಿತು ಪ್ರತಿದಿನ ಹೊಸ ಮಾಹಿತಿ ಪಡೆದುಕೊಳ್ಳಲು ಆಸಕ್ತಿ ಇದೆಯಾ ಹಾಗಾದರೆ ತಕ್ಷಣ ನಮ್ಮ ವಾಟ್ಸಪ್ ಚಾನೆಲ್ ಮತ್ತು ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಬಹುದು

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ


Previous Post Next Post