Government schemes for SC/ST Farmers : ಸಮಾಜ ಕಲ್ಯಾಣ ಇಲಾಖೆಯಿಂದ ರೈತರಿಗಾಗಿ ಹಲವಾರು ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಗಂಗಾ ಕಲ್ಯಾಣ ಯೋಜನೆ ಸೇರಿದಂತೆ ಹಲವಾರು ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಗಳಿಗಾಗಿ ಸಂಬಂದಿಸಿದ ಅರ್ಜಿ ಸಲ್ಲಿಸಲು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗಿದೆ.ಅರ್ಜಿ ಸಲ್ಲಿಸುವವರು ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ.ಈ ವಿಷಯದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಯಾವೆಲ್ಲಾ ಯೋಜನೆಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ?
1. ಭೂ ಒಡೆತನ ಯೋಜನೆ
2. ಗಂಗಾ ಕಲ್ಯಾಣ ಯೋಜನೆ
3. ಉದ್ಯಮಶೀಲತಾ ಅಭಿವೃದ್ಧಿ ಯೋಜನೆ
4. ಸ್ವಯಂ ಉದ್ಯೋಗ ನೇರ ಸಾಲ ಯೋಜನೆಗಳು
1. ಭೂ ಒಡೆತನ ಯೋಜನೆ : ಈ ಯೋಜನೆಯನ್ನು ಭೂ ರೈತ ಮಹಿಳಾ ಕೃಷಿ ಕಾರ್ಮಿಕರಿಗಾಗಿ ಜಾರಿಗೆ ತಂದಿದ್ದು, ಅಂತವರಿಗಾಗಿ ಕೃಷಿ ಜಮೀನು ಖರೀದಿಸಲು ಶೇಕಡ 50ರಷ್ಟು ಹಣವನ್ನು ಸಹಾಯಧನ ರೂಪದಲ್ಲಿ ಮತ್ತು ಶೇಕಡ 50ರಷ್ಟು ಹಣವನ್ನು ಸಾಲದ ರೂಪದಲ್ಲಿ ನಿಗಮದಿಂದ ನೀಡಲಾಗುತ್ತದೆ.
2. ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ವರ್ಗದ ರೈತರಿಗೆ ನಮ್ಮ ಕೃಷಿ ಜಮೀನಿನಲ್ಲಿ ಬೋರ್ವೆಲ್ ಕೊರೆಸಿಕೊಳ್ಳಲು ಹಾಗೂ ಅದಕ್ಕೆ ಬೇಕಾಗಿರುವಂತಹ ವಿದ್ಯುತ್ ಪಂಪ್ ಸೆಟ್ಟುಗಳನ್ನು ಅಳವಡಿಸಿಕೊಳ್ಳಲು ನಿಗಮದಿಂದ ಸಹಾಯಧನ ನೀಡಲಾಗುತ್ತದೆ.
3. ಉದ್ಯಮಶೀಲತಾ ಅಭಿವೃದ್ಧಿ ಯೋಜನೆ : ಇದರ ಅಡಿಯಲ್ಲಿ ಸ್ವಾವಲಂಬಿ ಸಾರಥಿ, ಫಾಸ್ಟ್ ಫುಡ್ ಟ್ರೈಲರ್ ಮೊಬೈಲ್ ಕಿಚನ್ ಫುಡ್ ಹಾಗೂ ಹೈನುಗಾರಿಕೆ ಸರ್ಕಾರವು ಸಹಾಯದ ನೀಡುತ್ತಿದೆ.
4. ಸ್ವಯಂ ಉದ್ಯೋಗ ನೇರ ಸಾಲ ಯೋಜನೆ : ಈ ಯೋಜನೆಯ ಅಡಿಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ರೈತರಿಗೆ ಸ್ವಯಂ ಉದ್ಯೋಗ ಆರಂಭಿಸಲು ಆರ್ಥಿಕ ಸಹಾಯಧನ ನೀಡುತ್ತದೆ ಮತ್ತು ಕಡಿಮೆ ಬಡ್ಡಿ ದರದಲ್ಲಿ ಬ್ಯಾಂಕಿನಿಂದ ಸಾಲ ಪಡೆಯಲು ಸಹಾಯಮಾಡುತ್ತದೆ.
ಈ ಎಲ್ಲಾ ಯೋಜನೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ?
ಈ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ನಿಮ್ಮ ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್ ಅಥವಾ ಬೆಂಗಳೂರು ಒನ್ ಗ್ರಾಹಕ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ಅಗತ್ಯ ದಾಖಲಾತಿಗಳೊಂದಿಗೆ ಸೇವಾ ಸಿಂಧು ಪೋರ್ಟಲ್ ಮುಖಾಂತರ ಅರ್ಜಿ ಸಲ್ಲಿಸಬಹುದು.
ಈ ಎಲ್ಲಾ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 10ನೇ ಸೆಪ್ಟೆಂಬರ್ 2025