ಬಜಾಜ್ ಫ್ರೀಡಂ 125 (Bajaj Freedom 125) ವಿಶ್ವದ ಪ್ರಪಥಮ ಸಿಎನ್‌ಜಿ ಮೋಟಾರ್‌ಸೈಕಲ್ ಎಂದೇ ಮನೆ ಮಾತಾಗಿದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸ ಹಾಗೂ ಹತ್ತಾರು ವೈಶಿಷ್ಟ್ಯಗಳನ್ನು ಪಡೆದುಕೊಂಡಿದ್ದು, ದಿನಬಳಕೆಗೆ ಹೆಚ್ಚು ಸೂಕ್ತವಾಗಿದೆ. ನೀವು ಆಫೀಸ್‌ಗೆ ತೆರಳಲು ಹೊಚ್ಚ ಹೊಸ ಬೈಕ್‌ವೊಂದನ್ನು ಖರೀದಿ ಮಾಡಲು ಆಲೋಚಿಸಿದ್ದೀರಾ.. ಹಾಗಾದರೆ, ಇದೇ 'ಫ್ರೀಡಂ 125' ಅತ್ಯುತ್ತಮವಾದ ಆಯ್ಕೆಯಾಗಲಿದೆ. ನಾವಿಲ್ಲಿ ಈ ಮೋಟಾರ್‌ಸೈಕಲ್‌ನ ಬೆಲೆ, ವಿನ್ಯಾಸ, ಕಾರ್ಯಕ್ಷಮತೆ ಹಾಗೂ ವೈಶಿಷ್ಟ್ಯಗಳ ಕುರಿತಂತೆ ಸಂಪೂರ್ಣವಾಗಿ ತಿಳಿಸಿಕೊಟ್ಟಿದ್ದೇವೆ.ಈ ವಿಷಯದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಬೆಲೆ & ರೂಪಾಂತರಗಳು (Price & Variants):
ನೂತನ ಬಜಾಜ್ ಫ್ರೀಡಂ 125 ಬೈಕ್ ಕೈಗೆಟುಕುವ ಬೆಲೆಯಲ್ಲಿಯೂ ಸಿಗಲಿದ್ದು, ಮಧ್ಯಮ ವರ್ಗದ ಗ್ರಾಹಕರು ಸುಲಭವಾಗಿ ಖರೀದಿ ಮಾಡಬಹುದು. ಇದು ಕನಿಷ್ಠ ರೂ.90,976 ಹಾಗೂ ಗರಿಷ್ಠ ರೂ.1.11 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಡ್ರಮ್, ಡ್ರಮ್ ಎಲ್ಇಡಿ ಮತ್ತು ಡಿಸ್ಕ್ ಎಲ್ಇಡಿ ಎಂಬ ಮೂರು ಆಕರ್ಷಕ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ದೊರೆಯುತ್ತದೆ.
ವಿನ್ಯಾಸ & ಬಣ್ಣಗಳು (Design & Colors):
ಈ ಮೋಟಾರ್‌ಸೈಕಲ್ ನೋಡಲು ತುಂಬಾ ಚೆನ್ನಾಗಿದ್ದು, ಪ್ರತಿಯೊಬ್ಬರ ಕಣ್ಣು ಕುಕ್ಕುವಂತಿದೆ. ರೌಂಡ್ ಎಲ್ಇಡಿ ಹೆಡ್‌ಲೈಟ್ ಮತ್ತು ಸಿಂಗಲ್-ಪೀಸ್ ಸೀಟ್‌ನ್ನು ಪಡೆದಿದೆ. ರೇಸಿಂಗ್ ರೆಡ್, ಸೈಬರ್ ವೈಟ್, ಎಬೊನಿ ಬ್ಲ್ಯಾಕ್, ಪ್ಯೂಟರ್ ಗ್ರೇ, ಕೆರಿಬಿಯನ್ ಬ್ಲೂ, ಎಬೊನಿ ಬ್ಲ್ಯಾಕ್-ಗ್ರೇ ಹಾಗೂ ಪ್ಯೂಟರ್ ಗ್ರೇ ಯೆಲ್ಲೋ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ.
ಸುತ್ತಳತೆ (Dimensions):
ಇದು ಸ್ವಲ್ಪ ಮಟ್ಟಿಗೆ ವಿಶಾಲ ಗಾತ್ರದಲ್ಲಿದೆ. 170 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 1340 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ. 147.8 ಕೆಜಿ ತೂಕವಿದೆ. ತಲಾ 2 ಲೀಟರ್/ ಕೆಜಿ ಸಾಮರ್ಥ್ಯದ ಪೆಟ್ರೋಲ್ ಮತ್ತು ಸಿಎನ್‌ಜಿ ಫ್ಯುಯೆಲ್ ಟ್ಯಾಂಕ್‌ನ್ನು ಹೊಂದಿದೆ.
ಕಾರ್ಯಕ್ಷಮತೆ (Performance):
ಹೊಸ ಫ್ರೀಡಂ ಬೈಕ್ ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಪಡೆದಿದೆ. 124.58 ಸಿಸಿ 4-ಸ್ಟೋಕ್ ಏರ್-ಕೂಲ್ಡ್ ಸಿಂಗಲ್-ಸಿಲಿಂಡರ್ ಪೆಟ್ರೋಲ್/ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 8000 ಆರ್‌ಪಿಎಂನಲ್ಲಿ 9.5 ಬಿಹೆಚ್‍ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 5000 ಆರ್‌ಪಿಎಂನಲ್ಲಿ 9.7 ಎನ್ಎಂ (ನ್ಯೂಟನ್) ಮೀಟರ್ ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ.
ಈ ಮೋಟಾರ್‌ಸೈಕಲ್‌ನ ಇಂಧನ ದಕ್ಷತೆ ಕೂಡ ಉತ್ತಮವಾಗಿದೆ. ಬರೋಬ್ಬರಿ 330 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 90 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಕೇವಲ 7.85 ಸೆಕೆಂಡುಗಳಲ್ಲಿ 0 ರಿಂದ 60 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.
ವೈಶಿಷ್ಟ್ಯಗಳು (Features):
ಹೊಸ ಬಜಾಜ್ ಫ್ರೀಡಂ 125 ಬೈಕ್ ಫುಲ್ ಎಲ್‌ಸಿಡಿ ಇನ್ಸ್ಟ್ರುಮೆಂಟ್ ಡಿಸ್‌ಪ್ಲೇಯನ್ನು ಪಡೆದಿದೆ. ಇದು ಗಾಡಿಯ ಸ್ವೀಡ್, ರಿಯಲ್ ಟೈಮ್ ಮೈಲೇಜ್ ಹಾಗೂ ಗೇರ್ ಇಂಡಿಕೇಟರ್ ಬಗ್ಗೆ ವಿವರಗಳನ್ನು ತೋರಿಸುತ್ತದೆ. ಇದರೊಂದಿಗೆ ಬ್ಲೂಟೂತ್ - ಕನೆಕ್ಟಿವಿಟಿ ಹಾಗೂ ಮೊಬೈಲ್ ಫೋನ್ ಚಾರ್ಜ್ ಮಾಡಲು ಚಾರ್ಜಿಂಗ್ ಪೋರ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.
ಸಸ್ಪೆನ್ಷನ್ ಸೆಟಪ್ & ಬ್ರೇಕಿಂಗ್ ಸಿಸ್ಟಮ್ (Suspension Setup & Braking System):
ಇದು ಸವಾರರಿಗೆ ಗರಿಷ್ಠ ಮಟ್ಟದ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಗಾಗಿ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂಭಾಗ (ರೇರ್) ಲಿಂಕ್ಡ್ ಮೊನೊಶಾಕ್ ಸಸ್ಪೆನ್ಷನ್ ಸೆಟಪ್‌ನ್ನು ಪಡೆದಿದೆ. ಜೊತೆಗೆ ರೂಪಾಂತರಗಳಿಗೆ ಅನುಗುಣವಾಗಿ ಡಿಸ್ಕ್/ ಡ್ರಮ್ ಬ್ರೇಕ್‌ನ್ನು ಪಡೆದಿದೆ.
ಒಟ್ಟಾರೆಯಾಗಿ ನೂತನ 'ಬಜಾಜ್ ಫ್ರೀಡಂ 125'ಗೆ ಹೋಂಡಾ ಎಸ್‌ಪಿ 125, ಹೋಂಡಾ ಶೈನ್ 125 ಹಾಗೂ ಹೀರೋ ಸೂಪರ್ ಸ್ಪ್ಲೆಂಡರ್ ಮೋಟಾರ್‌ಸೈಕಲ್‌ಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ. ಅದರ ಹೊರತಾಗಿಯೂ ಇದು ಹೆಚ್ಚು ಅತ್ಯಾಧುನಿಕವಾಗಿದ್ದು, ಜೊತೆಗೆ ದಿನ ಬಳಕೆಗೂ ಸೂಕ್ತವಾಗಿದೆ. ಹೀಗಾಗಿ ಗ್ರಾಹಕರು ಸಹ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ ಎಂದು ಹೇಳಬಹುದು.