ಭಾರತದ ನವದೆಹಲಿ, ಮುಂಬೈ, ಬೆಂಗಳೂರು, ಚೆನ್ನೈ, ಹೈದರಾಬಾದ್ ಹಾಗೂ ಕೋಲ್ಕತ್ತಾದಂತಹ ಮಹಾನಗರಗಳಲ್ಲಿ ಆಫೀಸ್ ಕೆಲಸಕ್ಕೆ ಹೋಗುವುದು ತುಂಬಾ ಪ್ರಯಾಸದ ಕೆಲಸ. ಅಂತಹವರಿಗೆ ಬಜಾಜ್ ಪ್ಲಾಟಿನಾ (Bajaj Platina) ಬೈಕ್ ಅತ್ಯುತ್ತಮವಾದ ಆಯ್ಕೆಯಾಗಲಿದೆ. ಇದು ಅತಿ ಕಡಿಮೆ ದರದಲ್ಲಿ ಖರೀದಿಗೆ ದೊರೆಯಲಿದ್ದು, ಸಾಮಾನ್ಯ ವರ್ಗದ ಜನರ ಅಂಬಾರಿಯಾಗಿದೆ. 2006ರಲ್ಲಿ ಮೊದಲ ಬಾರಿಗೆ ಬಿಡುಗಡೆಗೊಂಡ ಈ ಮೋಟಾರ್‌ಸೈಕಲ್, ಎರಡು ದಶಕಗಳಿಂದಲೂ ಉತ್ತಮ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ. ನಾವಿಲ್ಲಿ 'ಪ್ಲಾಟಿನಾ' ಬೈಕ್‌ನ ಬೆಲೆ ಹಾಗೂ ವಿಶೇಷತೆಗಳ ಕುರಿತಂತೆ ಸಂಪೂರ್ಣವಾಗಿ ತಿಳಿಸಿಕೊಟ್ಟಿದ್ದೇವೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಬೆಲೆ (Price):
ಈ ಬಜಾಜ್ ಪ್ಲಾಟಿನಾ ಬೈಕ್ ಎರಡು ವಿಧದಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. ಪ್ಲಾಟಿನಾ 100 ರೂ.70,611 ಬೆಲೆಯನ್ನು ಹೊಂದಿದೆ. ಅದೇ ರೀತಿಯಲ್ಲಿ ಪ್ಲಾಟಿನಾ 110 ರೂ.74,771 ಎಕ್ಸ್-ಶೋರೂಂ ಬೆಲೆಯನ್ನು ಪಡೆದಿದೆ. ಇವೆರೆಡು ಮೋಟಾರ್‌ಸೈಕಲ್‌ಗಳು ನೋಡಲು ತುಂಬಾ ಸರಳವಾದ ವಿನ್ಯಾಸವನ್ನು ಹೊಂದಿದ್ದು, ಹಲವು ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.
ಕಾರ್ಯಕ್ಷಮತೆ (Permanence):
ನೂತನ ಬಜಾಜ್ ಪ್ಲಾಟಿನಾ 100 ಬೈಕ್ 102 ಸಿಸಿ ಏರ್-ಕೂಲ್ಡ್ ಪೆಟ್ರೋಲ್ ಎಂಜಿನ್ ಪಡೆದಿದ್ದು, 7.9 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 8.34 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 4-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 75 ರಿಂದ 90 ಕಿ.ಮೀವರೆಗೂ ಮೈಲೇಜ್ ನೀಡಬಲ್ಲದು. 11 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‍ನ್ನು ಪಡೆದಿದೆ.
ಹೊಸ ಬಜಾಜ್ ಪ್ಲಾಟಿನಾ 110 ಮೋಟಾರ್‌ಸೈಕಲ್, 115 ಸಿಸಿ ಸಿಂಗಲ್ ಸಿಲಿಂಡರ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 8.6 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 9.81 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 4-ಸ್ಪೀಡ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 70 ಕಿ.ಮೀವರೆಗೂ ಮೈಲೇಜ್ ಕೊಡಬಲ್ಲದು. 11 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‍ನ್ನು ಒಳಗೊಂಡಿದೆ.
ವೈಶಿಷ್ಟ್ಯಗಳು (Features):
ಈ ಬಜಾಜ್ ಪ್ಲಾಟಿನಾ 100 ಬೈಕ್, ಅನಲಾಗ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಹಾಗೂ ಎಲೆಕ್ಟ್ರಿಕ್ ಸ್ಟಾರ್ಟರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. 117 ಕೆಜಿ ತೂಕವಿದ್ದು, 70 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಕೇವಲ 9 ಸೆಕೆಂಡುಗಳಲ್ಲಿ 0 ರಿಂದ 60 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.
ಮತ್ತೊಂದು ಬಜಾಜ್ ಪ್ಲಾಟಿನಾ 110 ಮೋಟಾರ್‌ಸೈಕಲ್, ಅನಲಾಗ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಮತ್ತು ಎಲೆಕ್ಟ್ರಿಕ್ ಸ್ಟಾರ್ಟರ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. 119 ಕೆಜಿ ತೂಕವಿದೆ. 90 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. 15.49 ಸೆಕೆಂಡುಗಳಲ್ಲಿ 0 ರಿಂದ 80 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.
ಸಸ್ಪೆನ್ಷನ್ ಸೆಟಪ್ & ಬೇಕಿಂಗ್ ಸಿಸ್ಟಮ್ (Suspension Setup & Braking System):
ನೂತನ ಬಜಾಜ್ ಪ್ಲಾಟಿನಾ 100 ಬೈಕ್ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ಸ್ ಹಾಗೂ ಹಿಂಭಾಗ (ರೇರ್) ಡುಯಲ್ ಸ್ಪ್ರಿಂಗ್ ಶಾಕ್ ಅಬ್ಸಾರ್ಬರ್ ಸಸ್ಪೆನ್ಷನ್ ಸೆಟಪ್ ಆಯ್ಕೆಯನ್ನು ಹೊಂದಿದೆ. ಸಿಬಿಎಸ್ (ಕಂಬೈನ್ಡ್ - ಬ್ರೇಕ್ ಸಿಸ್ಟಮ್) ಹಾಗೂ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.
ಹೊಸ ಬಜಾಜ್ ಪ್ಲಾಟಿನಾ 110 ಮೋಟಾರ್‌ಸೈಕಲ್, ಮುಂಭಾಗ (ಫ್ರಂಟ್) ಹೈಡ್ರಾಲಿಕ್ ಟೆಲಿಸ್ಕೋಪಿಕ್ ಫೋರ್ಕ್ಸ್ ಮತ್ತು ಹಿಂಭಾಗ (ರೇರ್) ಟ್ವಿನ್ ಶಾಕ್ ಅಬ್ಸಾರ್ಬರ್ ಸಸ್ಪೆನ್ಷನ್ ಸೆಟಪ್ ಪಡೆದಿದೆ. ಸಿಬಿಎಸ್ (ಕಂಬೈನ್ಡ್ - ಬ್ರೇಕ್ ಸಿಸ್ಟಮ್) & ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.