Free Phenyl Soap Making Training-ಉಚಿತ ಫಿನಾಯಿಲ್,ಸೋಪ್ ಗೃಹ ಬಳಕೆ ವಸ್ತು ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಕೇಂದ್ರದಿಂದ ಸ್ವಂತ ಉದ್ದಿಮೆಯನ್ನು(Free Phenyl Soap Making Training) ಆರಂಭಿಸಲು ಆಸಕ್ತಿಯನ್ನು ಹೊಂದಿರುವ ಅರ್ಹ ಅಭ್ಯರ್ಥಿಗಳಿಗೆ ಉಚಿತವಾಗಿ ಫಿನಾಯಿಲ್,ಮೇಣದಬತ್ತಿ,ಸೋಪ್ ಅಯಿಲ್,ಎನ್ವಲಪ್ ಕವರ್,ಪೇಪರ್ ಬ್ಯಾಗ್ ತಯಾರಿಕೆ ತರಬೇತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಗ್ರಾಮೀಣ ಭಾಗದಲ್ಲಿ ಇದ್ದುಕೊಂಡು ಸ್ವಂತ ಉದ್ದಿಮೆಯನ್ನು ಆರಂಭಿಸಬೇಕು ಎನ್ನುವ ಕನಸನ್ನು ಹೊಂದಿರುವ ಅಭ್ಯರ್ಥಿಗಳು ಈ ತರಬೇತಿಯ ಪ್ರಯೋಜನವನ್ನು ಪಡೆದುಕೊಳ್ಳಲು ಕೊನೆಯ ದಿನಾಂಕ ಮುಗಿಯುವುದರ ಒಳಗಾಗಿ ಅರ್ಜಿ ಸಲ್ಲಿಸಿ ಈ ಉಚಿತ ತರಬೇತಿಯನ್ನು ಭಾಗವಹಿಸಬಹುದು.

ಇಂದಿನ ಅಂಕಣದಲ್ಲಿ ಉಚಿತ ತರಬೇತಿಯನ್ನು ಪಡೆಯಲು ಯಾರೆಲ್ಲ ಅರ್ಜಿ(Phenyl Making Training Application) ಸಲ್ಲಿಸಬಹುದು? ಆನ್ಲೈನ್ ನಲ್ಲಿ ತಮ್ಮ ಮೊಬೈಲ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ? ಅರ್ಜಿ ಸಲ್ಲಿಸಲು ಅರ್ಹತಾ ಮಾನದಂಡಗಳೇನು? ಅರ್ಜಿ ಸಲ್ಲಿಸಲು ಅವಶ್ಯಕ ದಾಖಲಾತಿ ಸೇರಿದಂತೆ ಸಂಪೂರ್ಣ ವಿವರವನ್ನು ಈ ಕೆಳಗೆ ಹಂಚಿಕೊಳ್ಳಲಾಗಿದೆ.

Training Duration-ತರಬೇತಿ ಅವಧಿ:

ಕೆನರಾ ಬ್ಯಾಂಕ್ ಸ್ವ-ಉದ್ಯೋಗ ತರಬೇತಿ ಕೇಂದ್ರದಲ್ಲಿ ಈ ಉಚಿತ ತರಬೇತಿಯು ದಿನಾಂಕ: 20 ಆಗಸ್ಟ್ 2025 ರಿಂದ ಆರಂಭವಾಗಿ ದಿನಾಂಕ: 31 ಆಗಸ್ಟ್ 2025ಕ್ಕೆ ಮುಕ್ತಾಯವಾಗಲಿದೆ.

Training Center Address-ತರಬೇತಿ ನಡೆಯುವ ಕೇಂದ್ರದ ವಿಳಾಸ:

ಪ್ರಸ್ತುತ ಉಚಿತ ಸ್ವಂತ ಉದ್ದಿಮೆ ಉತೇಜನ ಮತ್ತು ಪ್ರಯೋಗಿಕ ಕಲಿಕೆ ಪೂರಕ ತರಬೇತಿಯು ಕೆನರಾ ಬ್ಯಾಂಕ್ ಸ್ವ-ಉದ್ಯೋಗ ತರಬೇತಿ ಕೇಂದ್ರ, ಇಂಡಿಸ್ಟ್ರೀಯಲ್ ಏರಿಯಾ, ಹೆಗಡೆ ರಸ್ತೆ, ಕುಮಟಾ, ಉತ್ತರಕನ್ನಡ ಜಿಲ್ಲೆಯಲ್ಲಿ ನಡೆಯಲಿದ್ದು ಆಸಕ್ತ ಅಭ್ಯರ್ಥಿಗಳು ಈ ತರಬೇತಿಯ ಪ್ರಯೋಜನವನ್ನು ಪಡೆದುಕೊಂಡು ಸ್ವಂತ ಉದ್ಯೋಗವನ್ನು ಆರಂಭಿಸಬಹುದು. ಈ ವಿಷಯದ ಹೊರತಾಗಿಯು ಇನ್ನಿತರೆ ತರಬೇತಿಯನ್ನು ಈ ಕೇಂದ್ರದಲ್ಲಿ ಆಯೋಜನೆ ಮಾಡಲಾಗುತ್ತದೆ.

Who Can Apply For Free Training-ತರಬೇತಿಯಲ್ಲಿ ಭಾಗವಹಿಸಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಉಚಿತ ತರಬೇತಿಯನ್ನು ಪಡೆಯಲು ಈ ಕೆಳಗಿನ ಪಟ್ಟಿಯಲ್ಲಿರುವ ಅರ್ಹತೆಯನ್ನು ಹೊಂದಿರುವ ಫಲಾನುಭವಿಗಳು ಆನ್ಲೈನ್ ಮೂಲಕ ಮುಂಚಿತವಾಗಿ ನೋಂದಣಿಯನ್ನು ಮಾಡಿಕೊಂಡು ಅಥವಾ ತರಬೇತಿ ನಡೆಯುವ ದಿನ ನೇರವಾಗಿ ಕೇಂದ್ರವನ್ನು ಭೇಟಿ ಮಾಡಿ ತರಬೇತಿಯಲ್ಲಿ ಭಾಗವಹಿಸಬಹುದು.

ಅರ್ಜಿದಾರರು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.

ಗ್ರಾಮೀಣ ಭಾಗದ ಹಾಗೂ ಬಿಪಿಎಲ್ ಕಾರ್ಡ ಅನ್ನು ಹೊಂದಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ಇರುತ್ತದೆ.

ಅಭ್ಯರ್ಥಿಗಳಿಗೆ ಕಡ್ಡಾಯವಾಗಿ ಕನ್ನಡ ಓದಲು ಹಾಗೂ ಬರೆಯಲು ಬರಬೇಕು.

ಅರ್ಜಿದಾರ ಅಭ್ಯರ್ಥಿಯ ವಯಸ್ಸು 18 ರಿಂದ 45 ವರ್ಷದ ಒಳಗಿರಬೇಕು. 

ತರಬೇತಿಯನ್ನು ಪಡೆದ ನಂತರ ಅಭ್ಯರ್ಥಿಗಳು ಸ್ವಂತ ಉದ್ದಿಮೆಯನ್ನು ಆರಂಭಿಸಲು ಆಸಕ್ತಿಯನ್ನು ಹೊಂದಿರಬೇಕು.

ಅರ್ಜಿದಾರರಿಗೆ ಕನ್ನಡ ಓದಲು ಮತ್ತು ಬರೆಯಲು ಬರುವುದು ಕಡ್ಡಾಯವಾಗಿರುತ್ತದೆ.

Soap Making Training- ಸಂಪೂರ್ಣ ಉಚಿತ ತರಬೇತಿ:

ಅರ್ಜಿ ಸಲ್ಲಿಸಿ ಆಯ್ಕೆಯಾಗುವ ಎಲ್ಲಾ ಅಭ್ಯರ್ಥಿಗಳಿಗೆ ಈ ತರಬೇತಿಯು ಸಂಪೂರ್ಣ ಉಚಿತವಾಗಿದ್ದು ಇದರಲ್ಲಿ ಯಾವುದೇ ಬಗ್ಗೆಯ ವರ್ಗವಾರು ತಾರತಮ್ಯ ಇರುವುದಿಲ್ಲ, ಅರ್ಜಿದಾರ ಅಭ್ಯರ್ಥಿಯು ಯಾವುದೇ ಅರ್ಜಿ ಶುಲ್ಕ ಮತ್ತು ತರಬೇತಿ ಸಮಯದಲ್ಲಿ ಉಳಿದುಕೊಳ್ಳಲು ಹಾಗೂ ಊಟದ ವ್ಯವಸ್ಥೆಯು ಸಹ ಉಚಿತವಾಗಿ ತರಬೇತಿ ಕೇಂದ್ರದಲ್ಲೇ ನೀಡಲಾಗುತ್ತದೆ.

Free Phenyl Making Training Application-ಅರ್ಜಿ ಸಲ್ಲಿಸುವ ವಿಧಾನ:

ಆಸಕ್ತ ಅರ್ಹ ಅಭ್ಯರ್ಥಿಗಳು ಉಚಿತ ತರಬೇತಿಯಲ್ಲಿ ಭಾಗವಹಿಸಲು ಕೊನೆಯ ದಿನಾಂಕ ಮುಗಿಯುವುದರ ಒಳಗಾಗಿ ಮುಂಚಿತವಾಗಿ ತಮ್ಮ ಹೆಸರನ್ನು ನೋಂದಣಿಯನ್ನು ಮಾಡಿಸುವುದು ಕಡ್ಡಾಯವಾಗಿದ್ದು, ಇದಕ್ಕಾಗಿ ಎರಡು ವಿಧಾನವನ್ನು ಅನುಸರಿಸಬೇಕು. ಮೊದಲನೇಯದು ಗೂಗಲ್ ಪಾರ್ಮ್ ಭರ್ತಿ ಮಾಡಿ ಅರ್ಜಿ ಸಲ್ಲಿಸಬಹುದು.

ಎರಡನೇ ವಿಧಾನ ನೇರವಾಗಿ ಈ ಮೊಬೈಲ್ 08386-220530, 9449860007, 9538281989, 9916783825, 888044612 ನಂಬರ್ ಗಳಿಗೆ ಕರೆ ಮಾಡಿ ನಿಮ್ಮ ಹೆಸರನ್ನು ನೋಂದಣಿ ಮಾಡಿಕೊಂಡು ತರಬೇತಿಯಲ್ಲಿ ಭಾಗವಹಿಸಲು ನಿಮ್ಮ ಹೆಸರನ್ನು ನೋಂದಣಿ ಮಾಡಿಕೊಳ್ಳಬಹುದು.

Online Application Link-ಮೊಬೈಲ್ ನಲ್ಲೇ ಅರ್ಜಿ ಸಲ್ಲಿಸಲು ಅವಕಾಶ:

ತರಬೇತಿಯಲ್ಲಿ ಭಾಗವಹಿಸಲು ಅರ್ಜಿದಾರರು ಈ ಗೂಗಲ್ ಪಾರ್ಮ್ Apply Now ಲಿಂಕ್ ಮೇಲೆ ಕ್ಲಿಕ್ ಮಾಡಿ ಅಗತ್ಯ ವಿವರವನ್ನು ಭರ್ತಿ ಮಾಡಿ ತರಬೇತಿಯಲ್ಲಿ ಭಾಗವಹಿಸಲು ಮುಂಚಿತವಾಗಿ ತಮ್ಮ ಹೆಸರನ್ನು ನೋಂದಣಿಯನ್ನು ಮಾಡಿಕೊಳ್ಳಬಹುದು.

Required Documents for Training - ತರಬೇತಿಯಲ್ಲಿ ಭಾಗವಹಿಸಲು ಅವಶ್ಯಕ ದಾಖಲೆಗಳು:

ಅಭ್ಯರ್ಥಿಯ ಅಧಾರ್ ಕಾರ್ಡ/Aadhar.

ಅಭ್ಯರ್ಥಿಯ ಪೋಟೋ/Photo.

ಅಭ್ಯರ್ಥಿಯ ಬ್ಯಾಂಕ್ ಪಾಸ್ ಬುಕ್ ಪ್ರತಿ/Bank Pass Book.

ಅಭ್ಯರ್ಥಿಯ ರೇಶನ್ ಕಾರ್ಡ ಪ್ರತಿ/Ration Card.

ಅಭ್ಯರ್ಥಿಯ ಮೊಬೈಲ್ ಸಂಖ್ಯೆ/Mobile Number.

Previous Post Next Post