ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ಇಡಿಸಿಎಸ್ ನಿರ್ದೇಶನಾಲಯ(ಇ-ಆಡಳಿತ)ದಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗ್ರಾಮೀಣ ಮಟ್ಟದಲ್ಲಿ ಗ್ರಾಮ ಒನ್ ಕೇಂದ್ರವನ್ನು(Grama One) ಆರಂಭಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ರಾಜ್ಯ ಮತ್ತು ಕೇಂದ್ರ ಸರಕಾರದ ವಿವಿಧ ಯೋಜನೆಗಳ ಸೌಲಭ್ಯವನ್ನು ಪಡೆಯಲು(Grama One Center) ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಗ್ರಾಮೀಣ ಭಾಗದ ಜನರು ನಗರ ಪ್ರದೇಶಕ್ಕೆ ಹೋಗುವುದನ್ನು ತಪ್ಪಿಸಲು ಹಳ್ಳಿ ಮಟ್ಟದಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವ್ಯವಸ್ಥೆಯನ್ನು ಒದಗಿಸಲು ಈ ಕಾರ್ಯಕ್ರಮವನ್ನು ಜಾರಿಗೆ ತರಲಾಗಿದೆ.
ಇಂದಿನ ಅಂಕಣದಲ್ಲಿ ಗ್ರಾಮ ಒನ್ ಕೇಂದ್ರವನ್ನು(Grama One Center Application) ಆರಂಭಿಸಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸಲು ಅರ್ಹ ಅಭ್ಯರ್ಥಿಗಳು ಅನುಸರಿಸಬೇಕಾದ ಕ್ರಮಗಳೇನು? ಅರ್ಜಿ ಸಲ್ಲಿಸಲು ಅವಶ್ಯಕ ದಾಖಲಾತಿಗಳೇನು? ಇನ್ನಿತರೆ ಸಂಪೂರ್ಣ ವಿವರವಾದ ಮಾಹಿತಿಯನ್ನು ಇಲ್ಲಿ ಹಂಚಿಕೊಳ್ಳಲಾಗಿದೆ.
What Is Grama One Center-ಗ್ರಾಮ್ ಒನ್ ಕೇಂದ್ರ ಎಂದರೇನು?
ಗ್ರಾನ್ ಒನ್ ಕೇಂದ್ರ ಎಂದರೆ ಇವು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಹಳ್ಳಿ ಮಟ್ಟದ ಸ್ಥಾಪನೆ ಗೊಂಡಿರುವ ಆನ್ಲೈನ್ ಸೇವೆಯನ್ನು ಸಾರ್ವಜನಿಕರಿಗೆ ತ್ವರಿತವಾಗಿ ಒದಗಿಸುವ ಒಂದು ವ್ಯವಸ್ಥೆಯಾಗಿದೆ. ಗ್ರಾಮೀಣ ಜನರು ಈ ಕೇಂದ್ರಗಳ ಮೂಲಕ ವಿವಿಧ ಸರಕಾರಿ ಸೌಲಭ್ಯಗಳನ್ನು ಪಡೆಯಲು ಅಗತ್ಯ ದಾಖಲೆಗಳನ್ನು ಒದಗಿಸಿ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ ಒಟ್ಟಾರೆಯಾಗಿ ಹೇಳುವುದಾದರೆ ಕಡಿಮೆ ಶುಲ್ಕ ಪಾವತಿ ಮಾಡಿ ಎಲ್ಲ ಬಗ್ಗೆಯ ಆನ್ಲೈನ್ ಸೇವೆಗಳನ್ನು ಪಡೆಯಬಹುದು.
Benefits of Grama One Center for the Public-ಗ್ರಾಮ್ ಒನ್ ಕೇಂದ್ರದಿಂದ ಸಾರ್ವಜನಿಕರಿಗೆ ಯಾವೆಲ್ಲ ಪ್ರಯೋಜನಗಳಿವೆ?
ಬೆಳೆ ವಿಮೆ ಮಾಡಿಸಲು ಅರ್ಜಿ ಸಲ್ಲಿಸಬಹುದು.
ರಾಜ್ಯ ಮತ್ತು ಕೇಂದ್ರ ಸರಕಾರದ ವಿವಿಧ ಸಬ್ಸಿಡಿ ಯೋಜನೆಗಳ ಪ್ರಯೋಜನ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ.
ರೇಶನ್ ಕಾರ್ಡ/ಆಧಾರ್ ಕಾರ್ಡ/ಜಮೀನಿನ ಪಹಣಿ/ಊತಾರ್ ಪಡೆಯಲು ಹಾಗೂ ತಿದ್ದುಪಡಿಗೆ ಅರ್ಜಿ ಸಲ್ಲಿಸಬಹುದು.
ವಂಶವೃಕ್ಷ ಪ್ರಮಾಣ ಪತ್ರ/ಆರೋಗ್ಯ ವಿಮೆ/ವಾಹನ ವಿಮೆ ಸೇರಿದಂತೆ ಇನ್ನು ಆನೇಕ ಸೌಲಭ್ಯವನ್ನು ಪಡೆಯಲು ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.
Eligibility Criteria for Establishing a Grama One Center-ಗ್ರಾಮ ಒನ್ ಕೇಂದ್ರ ಸ್ಥಾಪನೆ ಮಾಡಲು ಅರ್ಹತಾ ಮಾನದಂಡಗಳು:
ಗ್ರಾಮ ಒನ್ ಕೇಂದ್ರವನ್ನು ಆರಂಭಿಸಲು ಆಸಕ್ತಿಯನ್ನು ಹೊಂದಿರುವ ಅಭ್ಯರ್ಥಿಗಳು ಈ ಕೆಳಗಿನ ಪಟ್ಟಿಯಲ್ಲಿರುವ ಅರ್ಹತೆಯನ್ನು ಹೊಂದಿರುವುದ ಕಡ್ಡಾಯವಾಗಿದೆ.
ಅರ್ಜಿದಾರ ಅಭ್ಯರ್ಥಿಯು ಕಂಪ್ಯೂಟರ್ ಜ್ಞಾನ ಹೊಂದಿರುವ ಪಿಯುಸಿ II/ಡಿಪ್ಲೊಮಾ/ಐಟಿಐ/ಪದವಿ/ ಸ್ನಾತಕೋತ್ತರ ಪದವಿ ಯಾವುದೇ ವಿಭಾಗದಲ್ಲೂ ಕನಿಷ್ಟ ಅರ್ಹತೆ ಹೊಂದಿರಬೇಕು.
ಅಭ್ಯರ್ಥಿಯು ರೂ. 1 ರಿಂದ 2 ಲಕ್ಷ ಬಂಡವಾಳ ಹೂಡಿಕೆ ಮಾಡುವ ಸಾಮರ್ಥ್ಯವನ್ನು ಹೊಂದಿರಬೇಕು.
ಗ್ರಾಮಒನ್ ಪೊಲೀಸ್ ತಪಾಸಣಾ ಪ್ರಮಾಣ ಪತ್ರವನ್ನು ಸಲ್ಲಿಸಬೇಕು.
ಗ್ರಾಮಒನ್ ಕೇಂದ್ರವನ್ನು ಸ್ಥಾಪನೆ ಮಾಡಲು ಹೊರಟಿರುವ ಸ್ಥಳವು ಸಾರ್ವಜನಿಕರು ಸುಲಭವಾಗಿ ಸಂಪರ್ಕಿಸುವಂತಿರಬೇಕು (ದೊರೆಯುವಂತಿರಬೇಕು).
Grama One Center-ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅವಶ್ಯಕ ಪರಿಕರಗಳು:
ಲ್ಯಾಪ್ ಟಾಪ್/ಡೆಸ್ಕ್ ಟಾಪ್
ಪ್ರಿಂಟರ್
ಬಯೋಮೆಟ್ರಿಕ್
ವೆಬ್ ಕ್ಯಾಮರಾ
ವೈ-ಪೈ ರಿಸೀವರ್
How To Apply For Grama One-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ ಹೇಗೆ?
ಗ್ರಾಮ ಒನ್ ಕೇಂದ್ರವನ್ನು ಆರಂಭಿಸಲು ಆಸಕ್ತಿಯನ್ನು ಹೊಂದಿರುವವರು ಕೆಳಗೆ ವಿವರಿಸಿರುವ ಹಂತಗಳನ್ನು ಅನುಸರಿಸಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ.
Step-1: ಅಭ್ಯರ್ಥಿಗಳು ಇಲ್ಲಿ ಕ್ಲಿಕ್ "Grama One Online Application" ಮಾಡಿ ಅಧಿಕೃತ ಜಾಲತಾಣವನ್ನು ಪ್ರವೇಶ ಮಾಡಬೇಕು.
Step-2: ಬಳಿಕ ಈ ಪೇಜ್ ನಲ್ಲಿ ಕೊನೆಯಲ್ಲಿ ಕಾಣುವ ಘೋಷಣೆ ಬಟನ್ ಮೇಲೆ ಕ್ಲಿಕ್ ಮಾಡಿ "ನೋಂದಣಿ ಮಾಡಿ/Register Now" ಬಟನ್ ಮೇಲೆ ಕ್ಲಿಕ್ ಮಾಡಿ ನಿಮ್ಮ ಮೊಬೈಲ್ ನಂಬರ್ ಮತ್ತು ಇ-ಮೇಲ್ ವಿಳಾಸವನ್ನು ಹಾಕಿ OTP ಬಟನ್ ಮೇಲೆ ಕ್ಲಿಕ್ ಮಾಡಿ ಒಟಿಪಿ ಅನ್ನು ಪಡೆದು ಒಟಿಪಿ ಅನ್ನು ನಮೂದಿಸಿ "Validate OTP" ಬಟನ್ ಮೇಲೆ ಕ್ಲಿಕ್ ಮಾಡಿದರೆ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ.
Step-3: ಇಲ್ಲಿ ಅವಶ್ಯವಿರುವ ಎಲ್ಲಾ ವಿವರ ಮತ್ತು ದಾಖಲಾತಿಗಳನ್ನು ಭರ್ತಿ ಮಾಡಿ ಕೊನೆಯಲ್ಲಿ "Submit" ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.
For More Information-ಹೆಚ್ಚಿನ ಮಾಹಿತಿಗಾಗಿ:
Grama One Official Website-ಅಧಿಕೃತ ಗ್ರಾಮ ಒನ್ ಜಾಲತಾಣ- Click Here