ಬಜಾಜ್ ಪ್ಲಾಟಿನಾ (Bajaj Platina) ಜನಪ್ರಿಯ ಬೈಕ್ ಆಗಿದೆ. ದಿನಬಳಕೆಗೆ ಹೆಚ್ಚು ಸೂಕ್ತವಾಗಿದ್ದು, ಬೆಂಗಳೂರು ಸೇರಿದಂತೆ ಹೆಚ್ಚಿನ ಸಂಚಾರ ದಟ್ಟಣೆವಿರುವ ನಗರಗಳಲ್ಲಿ ಆಫೀಸ್‌ಗೆ ಹೋಗುವವರು ಬಳಕೆ ಮಾಡಬಹುದು. ನೀವು ಹೊಸದೊಂದು ಮೋಟಾರ್‌ಸೈಕಲ್‌ನ್ನು ಖರೀದಿಸಲು ಆಲೋಚಿಸಿದ್ದೀರಾ.. ಹಾಗಾದರೆ, 'ಪ್ಲಾಟಿನಾ'ವನ್ನು ತೆಗೆದುಕೊಳ್ಳಬಹುದು. ಇದು ಪ್ಲಾಟಿನಾ 100 ಹಾಗೂ ಪ್ಲಾಟಿನಾ 110 ಎಂಬ ರೂಪದಲ್ಲಿ ಸಿಗುತ್ತದೆ. ನಾವಿಲ್ಲಿ ಈ ಬೈಕ್‌ನ ಆನ್-ರೋಡ್ ಬೆಲೆ, ಇಎಂಐ, ಕಾರ್ಯಕ್ಷಮತೆ ಹಾಗೂ ವೈಶಿಷ್ಟ್ಯಗಳ ಕುರಿತಂತೆ ಒಂದಷ್ಟು ವಿವರಗಳನ್ನು ತಿಳಿಸಿಕೊಟ್ಟಿದ್ದೇವೆ.
ಬಜಾಜ್ ಪ್ಲಾಟಿನಾ 100 (Bajaj Platina 100) ರೂ.82,000 ವರೆಗೆ ಆನ್-ರೋಡ್ ಬೆಲೆಯನ್ನು ಹೊಂದಿದೆ. ರೂ.20,000 ವರೆಗೆ ಡೌನ್-ಪೇಮೆಂಟ್ ಪಾವತಿಸಿ ಖರೀದಿ ಮಾಡಿದರೆ, ರೂ.62,000 ವರೆಗೆ ಸಾಲವಿರುತ್ತದೆ. ಶೇಕಡ 8% ಬಡ್ಡಿ ದರದಲ್ಲಿ 3 ವರ್ಷದ ಅವಧಿಗೆ ಮಾಸಿಕ ರೂ.2,000 ವರೆಗೆ ಇಎಂಐ ಕಟ್ಟಬೇಕು.
ಮತ್ತೊಂದು ಬಜಾಜ್ ಪ್ಲಾಟಿನಾ 110 (Bajaj Platina 110) ರೂ.86,000 ವರೆಗೆ ಆನ್-ರೋಡ್ ದರವನ್ನು ಪಡೆದಿದೆ. ರೂ.20,000 ವರೆಗೆ ಡೌನ್-ಪೇಮೆಂಟ್ ಕಟ್ಟಿ ಮನೆಗೆ ತಂದರೆ, ರೂ.82,000 ವರೆಗೆ ಸಾಲ ಬಾಕಿಯಿರುತ್ತದೆ. ಶೇಕಡ 8% ಬಡ್ಡಿ ದರದಲ್ಲಿ 3 ವರ್ಷಕ್ಕೆ ತಿಂಗಳಿಗೆ ರೂ.2,100 ವರೆಗೆ ಇಎಂಐ ಪಾವತಿ ಮಾಡಬೇಕು.
ಪ್ಲಾಟಿನಾ 100 ಮೋಟಾರ್‌ಸೈಕಲ್ 102 ಸಿಸಿ ಏರ್-ಕೂಲ್ಡ್ ಪೆಟ್ರೋಲ್ ಎಂಜಿನ್ ಹಾಗೂ 4-ಸ್ಪೀಡ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 75 ರಿಂದ 90 ಕಿ.ಮೀ ವರೆಗೆ ಮೈಲೇಜ್ ಕೊಡಬಲ್ಲದು. 11 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‍ನ್ನು ಒಳಗೊಂಡಿದೆ. 70 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. 9 ಸೆಕೆಂಡುಗಳಲ್ಲಿಯೇ 0 ರಿಂದ 60 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.
ಇನ್ನೊಂದು ಪ್ಲಾಟಿನಾ 110 ಬೈಕ್ 115 ಸಿಸಿ ಸಿಂಗಲ್ ಸಿಲಿಂಡರ್ ಪೆಟ್ರೋಲ್ ಎಂಜಿನ್ ಮತ್ತು 4-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 70 ಕಿ.ಮೀ ವರೆಗೆ ಮೈಲೇಜ್ ನೀಡಬಲ್ಲದು 11 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‍ನ್ನು ಪಡೆದಿದೆ. 90 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಇದ್ದು, 15.49 ಸೆಕೆಂಡುಗಳಲ್ಲಿ 0 ರಿಂದ 80 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.
ಬಜಾಜ್ ಪ್ಲಾಟಿನಾ 100 ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದೆ. ಅದು ನೋಡುಗರ ಸೆಳೆಯುವಂತಿದೆ. ಬ್ಲ್ಯಾಕ್ & ಬ್ಲೂ, ಬ್ಲ್ಯಾಕ್ & ಗೋಲ್ಡ್, ಬ್ಲ್ಯಾಕ್ & ಸಿಲ್ವರ್ ಮತ್ತು ಬ್ಲ್ಯಾಕ್ & ರೆಡ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. ಅನಲಾಗ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಸಿಂಗಲ್ ಪೀಸ್ ಸೀಟ್ ಹಾಗೂ ಎಲೆಕ್ಟ್ರಿಕ್ ಸ್ಟಾರ್ಟರ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ.
India Mileage King Bajaj Platina On-Road Price Engine Features And Emi Details
ಬಜಾಜ್ ಪ್ಲಾಟಿನಾ 110 ಕೂಡ ಅತ್ಯಾಧುನಿಕವಾದ ವಿನ್ಯಾಸವನ್ನು ಪಡೆದಿದೆ. ಕಾಕ್ಟೇಲ್ ವೈನ್ ರೆಡ್, ಎಬೊನಿ ಬ್ಲ್ಯಾಕ್ ರೆಡ್, ಎಬೊನಿ ಬ್ಲ್ಯಾಕ್ ಬ್ಲೂ ಮತ್ತು ಯೆಲ್ಲೋ ಎಂಬ ಬಣ್ಣಗಳನ್ನು ಪಡೆದಿದೆ. ಅನಲಾಗ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಮತ್ತು ಎಲೆಕ್ಟ್ರಿಕ್ ಸ್ಟಾರ್ಟರ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.
ಸವಾರರ ರಕ್ಷಣೆಗಾಗಿ ಪ್ಲಾಟಿನಾ 100 ಬೈಕ್ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂಭಾಗ (ರೇರ್) ಡುಯಲ್ - ಸ್ಪ್ರಿಂಗ್ ಶಾಕ್ ಅಬ್ಸಾರ್ಬರ್ ಸಸ್ಪೆನ್ಷನ್ ಸೆಟಪ್‌ನ್ನು ಪಡೆದಿದೆ. ಸಿಬಿಎಸ್ (ಕಂಬೈನ್ಡ್ ಬ್ರೇಕ್ ಸಿಸ್ಟಮ್) ಹಾಗೂ ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ.
ಸುರಕ್ಷತೆಯ ದೃಷ್ಟಿಯಿಂದ ಪ್ಲಾಟಿನಾ 110 ಮೋಟಾರ್‌ಸೈಕಲ್, ಮುಂಭಾಗ (ಫ್ರಂಟ್) ಹೈಡ್ರಾಲಿಕ್ ಟೆಲಿಸ್ಕೋಪಿಕ್ ಫೋರ್ಕ್ಸ್ ಮತ್ತು ಹಿಂಭಾಗ (ರೇರ್) ಟ್ವಿನ್ - ಶಾಕ್ ಅಬ್ಸಾರ್ಬರ್ ಸಸ್ಪೆನ್ಷನ್ ಸೆಟಪ್‌ನ್ನು ಹೊಂದಿದೆ. ಸಿಬಿಎಸ್ (ಕಂಬೈನ್ಡ್ ಬ್ರೇಕ್ ಸಿಸ್ಟಮ್) ಮತ್ತು ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.
ನಿಮ್ಮ ಗಮನಕ್ಕೆ.. ಈ ಬೈಕ್‌ನ ಆನ್-ರೋಡ್ ಬೆಲೆ ಹಾಗೂ ಸಾಲದ ಆಯ್ಕೆಗಳು ರಾಜ್ಯದಿಂದ ರಾಜ್ಯಕ್ಕೆ ಬೇರೆಯಾಗಿರಲಿದ್ದು, ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.