Muskaan Scholarship: 9 -12ನೇ ತರಗತಿ ವಿದ್ಯಾರ್ಥಿಗಳಿಗೆ ವರ್ಷಕ್ಕೆ ₹12,000 ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

Muskaan Scholarship: 9 -12ನೇ ತರಗತಿ ವಿದ್ಯಾರ್ಥಿಗಳಿಗೆ ವರ್ಷಕ್ಕೆ ₹12,000 ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ವಾಲ್ವೋಲಿನ್ ಕಮ್ಮಿನ್ಸ್ ಪ್ರೈವೇಟ್ ಲಿಮಿಟೆಡ್ (VCPL) ನಿಂದ ಅನುಷ್ಠಾನಗೊಳ್ಳುತ್ತಿರುವ “ಮುಸ್ಕಾನ್ ಸ್ಕಾಲರ್‌ಶಿಪ್ ಯೋಜನೆ 2.0” ಅಡಿಯಲ್ಲಿ 9 ಮತ್ತು 12ನೇ ತರಗತಿಯ ವಿದ್ಯಾರ್ಥಿಗಳಿಗೆ ವರ್ಷಕ್ಕೆ ₹12,000 ವಿದ್ಯಾರ್ಥಿವೇತನ ನೀಡಲಾಗುತ್ತದೆ. ಈ ಯೋಜನೆಯು ವಾಣಿಜ್ಯ ವಾಹನ ಚಾಲಕರು (LMV/HMV), ಮೆಕ್ಯಾನಿಕ್‌ಗಳು ಮತ್ತು ಆರ್ಥಿಕವಾಗಿ ದುರ್ಬಲವಾದ ಕುಟುಂಬಗಳ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ರೂಪಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು 30 ಸೆಪ್ಟೆಂಬರ್ 2025 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.ಈ ಕುರಿತು ಸಂಪೂರ್ಣ ಮಾಹಿತಿ ಕೆಳಗೆ ಕೊಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಯಾರು ಅರ್ಜಿ ಸಲ್ಲಿಸಬಹುದು?

ಮುಸ್ಕಾನ್ ಸ್ಕಾಲರ್‌ಶಿಪ್ ಪಡೆಯಲು ವಿದ್ಯಾರ್ಥಿಗಳು ಈ ಕೆಳಗಿನ ಅರ್ಹತೆಗಳನ್ನು ಪೂರೈಸಬೇಕು:

ತರಗತಿ: 9ನೇ ಅಥವಾ 12ನೇ ತರಗತಿಯಲ್ಲಿ ನಿಯಮಿತವಾಗಿ ವ್ಯಾಸಂಗ ಮಾಡುತ್ತಿರಬೇಕು.

ಶೈಕ್ಷಣಿಕ ಅಂಕಗಳು: ಹಿಂದಿನ ತರಗತಿಯಲ್ಲಿ ಕನಿಷ್ಠ 60% ಅಂಕಗಳು ಪಡೆದಿರಬೇಕು.

ರಾಜ್ಯಗಳು: ಅಸ್ಸಾಂ, ಬಿಹಾರ, ಛತ್ತೀಸ್‌ಗಢ, ಕೇರಳ, ಕರ್ನಾಟಕ, ತಮಿಳುನಾಡು, ತೆಲಂಗಾಣ, ಆಂಧ್ರಪ್ರದೇಶ, ಒಡಿಶಾ, ಪಶ್ಚಿಮ ಬಂಗಾಳ, ಈಶಾನ್ಯ ರಾಜ್ಯಗಳು (ಮಣಿಪುರ, ನಾಗಾಲ್ಯಾಂಡ್, ಮಿಜೋರಾಂ, ತ್ರಿಪುರ, ಅರುಣಾಚಲ ಪ್ರದೇಶ, ಸಿಕ್ಕಿಂ, ಮೇಘಾಲಯ) ಮತ್ತು ಪುದುಚೇರಿಯ ವಿದ್ಯಾರ್ಥಿಗಳು ಮಾತ್ರ ಅರ್ಹರು.

ಕುಟುಂಬದ ಆದಾಯ: EWS ವರ್ಗದವರಿಗೆ ವಾರ್ಷಿಕ ಆದಾಯ ₹8 ಲಕ್ಷಕ್ಕಿಂತ ಕಡಿಮೆ ಇರಬೇಕು.

ವಿನಾಯಿತಿ: VCPL ಮತ್ತು Buddy4Study ನಲ್ಲಿ ಕೆಲಸ ಮಾಡುವ ಉದ್ಯೋಗಿಗಳ ಮಕ್ಕಳು ಈ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹರಲ್ಲ.

ಅರ್ಜಿ ಸಲ್ಲಿಸುವ ವಿಧಾನ

ವಿದ್ಯಾರ್ಥಿಗಳು Buddy4Study ಅಧಿಕೃತ ವೆಬ್‌ಸೈಟ್ www.buddy4study.com ಮೂಲಕ ಈ ಕೆಳಗಿನ ಹಂತಗಳನ್ನು ಅನುಸರಿಸಿ ಅರ್ಜಿ ಸಲ್ಲಿಸಬಹುದು:

ಹಂತ-1: ವೆಬ್‌ಸೈಟ್‌ಗೆ ಭೇಟಿ ನೀಡಿ “Apply Now” ಬಟನ್ ಕ್ಲಿಕ್ ಮಾಡಿ.

ಹಂತ-2: ನೊಂದಾಯಿಸಿಕೊಳ್ಳಲು “Create an Account” ಆಯ್ಕೆಯನ್ನು ಬಳಸಿ (ಇದ್ದರೆ ಲಾಗಿನ್ ಮಾಡಿ).

ಹಂತ-3: ಅರ್ಜಿ ಫಾರ್ಮ್‌ನಲ್ಲಿ ವಿದ್ಯಾರ್ಥಿಯ ವಿವರಗಳು, ಶೈಕ್ಷಣಿಕ ದಾಖಲೆಗಳು ಮತ್ತು ಆದಾಯ ಪ್ರಮಾಣಪತ್ರವನ್ನು ಅಪ್‌ಲೋಡ್ ಮಾಡಿ.

ಹಂತ-4: ಎಲ್ಲಾ ಮಾಹಿತಿಯನ್ನು ಪರಿಶೀಲಿಸಿ “Submit” ಬಟನ್ ಕ್ಲಿಕ್ ಮಾಡಿ.

Post a Comment

Previous Post Next Post

Top Post Ad

CLOSE ADS
CLOSE ADS
×