ಕಾರ್ಕಳ : ಕಾರ್ಕಳ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ ಒಟ್ಟು 3 ಅಂಗನವಾಡಿ ಕಾರ್ಯಕರ್ತೆ ಹಾಗೂ 23 ಅಂಗನವಾಡಿ ಸಹಾಯಕಿಯರ ಗೌರವ ಸೇವೆ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಇಲಾಖೆಯ ವೆಬ್‌ಸೈಟ್ https://karnemakaone.kar.nic.in/abcd/ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸುವಾಗ ಈ ಕೆಳಕಂಡ 4 ಹಂತಗಳನ್ನು ಅನುಸರಿಸತಕ್ಕದ್ದು. ಯಾವುದೇ ಹಂತ ಪೂರ್ಣಗೊಳಿಸದೇ ಇದ್ದಲ್ಲಿ ಅಂತಹ ಅರ್ಜಿಗಳು ಪರಿಶೀಲನೆಗೆ ಲಭ್ಯವಾಗದೇ ಅಪೂರ್ಣ ಎಂದು ಪರಿಗಣಿಸಲಾಗುತ್ತದೆ.
ಒಂದನೇ ಹಂತ- ಅಭ್ಯರ್ಥಿಗಳು ಮೊದಲ ಹಂತದಲ್ಲಿ ಆನ್‌ಲೈನ್‌ನಲ್ಲಿ ನೀಡಲಾದ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡುವುದು.
ಎರಡನೇ ಹಂತ:– ಅರ್ಜಿದಾರರ ಸಹಿ ಹಾಗೂ ಭಾವಚಿತ್ರವನ್ನು ಅಪ್ ಲೋಡ್ ಮಾಡುವುದು ನಂತರ ಇ-ಸೈನ್ ಹಂತವನ್ನು ಕಡ್ಡಾಯವಾಗಿ ಪೂರ್ಣಗೊಳಿಸುವುದು.
ಮೂರನೇ ಹಂತ:- ಅರ್ಜಿದಾರರು ತಮ್ಮ ಸಂಬಂಧಪಟ್ಟ ಎಲ್ಲಾ ದಾಖಲೆಗಳನ್ನು ಅಪ್ಲೋಡ್ ಮಾಡುವುದು.
ನಾಲ್ಕನೇ ಹಂತ:- ಮೂರನೇ ಹಂತದಲ್ಲಿ ಎಲ್ಲಾ ದಾಖಲಾತಿಗಳನ್ನು ಆಪ್ ಲೋಡ್ ಮಾಡಿದ ಬಳಿಕ ಅರ್ಜಿ ಮುದ್ರಿಸುವುದು.
ಸೆ. 6ರಿಂದ ಅರ್ಜಿಯನ್ನು ಆನ್‌ಲೈನ್ ಮುಖಾಂತರ ಸಲ್ಲಿಸಬಹುದಾಗಿದ್ದು, ಅ. 10 ಕೊನೆಯ ದಿನಾಂಕವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಕಾರ್ಕಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಕಚೇರಿ ಅವಧಿಯಲ್ಲಿ ಸಂಪರ್ಕಿಸಬಹುದು ಎಂದು ಇಲಾಖೆ ಪ್ರಕಟನೆಯಲ್ಲಿ ತಿಳಿಸಿದೆ.