Service Spirit: ನಿಮ್ಮಲ್ಲಿ ಸೇವಾ ಮನೋಭಾವ ಇದ್ರೆ ಮಾತ್ರ ಈ ಅರ್ಜಿ ಸಲ್ಲಿಸಿ

ಚಿಕ್ಕಮಗಳೂರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಪ್ಯಾರಾ ಲೀಗಲ್ ವಾಲಂಟಿಯರ್ಸ್ ಆಯ್ಕೆಗಾಗಿ ಅರ್ಜಿ ಆಹ್ವಾನಿಸಿದೆ, ಆಸಕ್ತರು ಸೆಪ್ಟೆಂಬರ್ 30ರೊಳಗೆ ಅರ್ಜಿ ಸಲ್ಲಿಸಿ.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಚಿಕ್ಕಮಗಳೂರು (Chikkamagaluru) ತಾಲೂಕು ಕಾನೂನು (Law) ಸೇವೆಗಳ ಸಮಿತಿ, ಕಡೂರು, ತರೀಕೆರೆ, ಮೂಡಿಗೆರೆ, ಕೊಪ್ಪ, ನರಸಿಂಹರಾಜಪುರ ಮತ್ತು ಶೃಂಗೇರಿ ಇಲ್ಲಿ ಪ್ಯಾರಾ ಲೀಗಲ್ ವಾಲಂಟಿಯರ್ಸ್ ಗಳ (ಅರೆ ಕಾಲಿಕ ಸ್ವಯಂಸೇವಕರು) ಆಯ್ಕೆಗಾಗಿ ಅರ್ಜಿಗಳನ್ನು (Application) ಆಹ್ವಾನಿಸಲಾಗಿದೆ. ರಾಷ್ಟ್ರೀಯ ಮತ್ತು ರಾಜ್ಯ ಕಾನೂನು ಸೇವೆಗಳ (Service) ಪ್ರಾಧಿಕಾರದ ನಿರ್ದೇಶನದಂತೆ ಈ ಆಯ್ಕೆ ಪ್ರಕ್ರಿಯೆ ನಡೆಯುತ್ತಿದ್ದು, ಸೇವಾ ಮನೋಭಾವ ಇರುವ ಆಸಕ್ತರು ಅರ್ಜಿ ಸಲ್ಲಿಸಬಹುದು.

ಕಾನೂನು ಸೇವೆಗಳ ನೇಮಕಾತಿ ಯಾವುದೇ ಶುಲ್ಕ ಸಂಭಾವನೆ ಇಲ್ಲ

ಈ ಹುದ್ದೆಗೆ ಯಾವುದೇ ಶುಲ್ಕ ಸಂಭಾವನೆ ಅಥವಾ ಸಂಬಳ ಇರುವುದಿಲ್ಲ. ಕಾನೂನು ವಿದ್ಯಾರ್ಥಿಗಳು, ವೈದ್ಯಕೀಯ ಕ್ಷೇತ್ರದಲ್ಲಿ ಕೆಲಸ ಮಾಡುವವರು, ಉನ್ನತ ಶಿಕ್ಷಣದ ವಿದ್ಯಾರ್ಥಿಗಳು, ಎಂ.ಎಸ್.ಡಬ್ಲ್ಯು ವಿದ್ಯಾರ್ಥಿಗಳು ಮತ್ತು ಶಿಕ್ಷಕರು, ಆಶಾ-ಅಂಗನವಾಡಿ ಕಾರ್ಯಕರ್ತೆಯರು, ನಿವೃತ್ತ ಸರ್ಕಾರಿ ನೌಕರರು, ಮಾಜಿ ಸೈನಿಕರು ಮತ್ತು ಅವರ ಕುಟುಂಬದ ಸದಸ್ಯರು, ವಿವಿಧ ಸಂಘಟನೆಗಳಲ್ಲಿರುವ ಸಾಮಾಜಿಕ ಕಾರ್ಯಕರ್ತರು, ಮಂಗಳಮುಖಿಯರು ಮತ್ತು ಸ್ವ-ಸಹಾಯ ಸಂಘಗಳ ಸದಸ್ಯರು ಅರ್ಜಿ ಸಲ್ಲಿಸಬಹುದು.

ಇಂದೇ ಅರ್ಜಿ ಸಲ್ಲಿಸಿ

ಚಿಕ್ಕಮಗಳೂರು ತಾಲೂಕಿನಲ್ಲಿ ಸೇವೆ ಸಲ್ಲಿಸಲು ಇಚ್ಛಿಸುವವರು ಚಿಕ್ಕಮಗಳೂರು ಜಿಲ್ಲಾ ನ್ಯಾಯಾಲಯದ ಆವರಣದಲ್ಲಿರುವ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಬಹುದು. ಉಳಿದ ತಾಲೂಕುಗಳ ಅಭ್ಯರ್ಥಿಗಳು ಆಯಾ ತಾಲೂಕು ನ್ಯಾಯಾಲಯದ ಆವರಣದಲ್ಲಿರುವ ಕಾನೂನು ಸೇವಾ ಸಮಿತಿಗಳಲ್ಲಿ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿ ಸೆಪ್ಟೆಂಬರ್ 30ರೊಳಗೆ ಖುದ್ದಾಗಿ ಸಲ್ಲಿಸಬೇಕು

Previous Post Next Post