Ration Card: ರಾಜ್ಯದ ಜನತೆಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿಯನ್ನು ನೀಡಿದ್ದು, ರೇಷನ್ ಕಾರ್ಡ್ ತಿದ್ದುಪಡಿಗೆ ಮತ್ತೊಂದು ಅವಕಾಶವನ್ನು ಕಲ್ಪಿಸಿಕೊಟ್ಟಿದೆ. ಹಾಗಾದ್ರೆ ಏನೆಲ್ಲ ತಿದ್ದುಪಡಿ ಮಾಡಬಹುದು? ತಿದ್ದುಪಡಿ ಮಾಡಲು ಬೇಕಾಗುವ ದಾಖಲೆಗಳೇನು? ಎಂದು ನೋಡೋಣ.
ಏನೆಲ್ಲಾ ತಿದ್ದುಪಡಿ ಮಾಡಿಸಬಹುದು?
* ಹೊಸ ಸದಸ್ಯರ ಹೆಸರು ಸೇರ್ಪಡೆ
* ವಿಳಾಸ ಬದಲಾವಣೆ
* ಹೆಸರು ತೆಗೆದುಹಾಕುವುದು
* ಕುಟುಂಬದ ಮುಖ್ಯಸ್ಥರ ಬದಲಾವಣೆ
* ಫೋಟೋ ಬದಲಾವಣೆ
ಬೇಕಾದ ದಾಖಲೆಗಳು
* ಸದಸ್ಯರ ಆಧಾರ ಕಾರ್ಡ್
* ಸದಸ್ಯರ ಜಾತಿ ಮತ್ತು ಆದಾಯ 6 ವರ್ಷ ಮೆಲ್ಪಟ್ಟವರಿಗೆ
* ಜನನ ಪ್ರಮಾಣ ಪತ್ರ 6 ವರ್ಷದ ಒಳಗಿನ ಮಕ್ಕಳಿದ್ದರೆ
ಪತ್ನಿ ಹೆಸರು ಸೇರ್ಪಡೆಗೆ ಬೇಕಾದ ದಾಖಲೆಗಳು
* ಆಧಾರ್ ಕಾರ್ಡ್
* ಮದುವೆ ಪ್ರಮಾಣ ಪತ್ರ
* ಪೋಷಕರ ಪಡಿತರ ಚೀಟಿ
ಮಗುವಿನ ಹೆಸರು ಸೇರ್ಪಡೆಗೆ ಬೇಕಾದ ದಾಖಲೆಗಳು
* ಮಗುವಿನ ಜನನ ಪ್ರಮಾಣಪತ್ರ
* ಪೋಷಕರ ಆಧಾರ್ ಕಾರ್ಡ್
ತಿದ್ದುಪಡಿಗೆ ಎಲ್ಲೆಲ್ಲಿ ಅರ್ಜಿ ಸಲ್ಲಿಸಬಹುದು?
* ಬೆಂಗಳೂರು ಒನ್, ಗ್ರಾಮ ಒನ್, ಸೈಬರ್ ಸೆಂಟರ್‌ಗಳಲ್ಲಿ ಹೊಸ ಕಾರ್ಡ್ ಅಥವಾ ಹೆಸರು ಸೇರ್ಪಡೆಗೆ ಎಪಿಎಲ್ ಕಾರ್ಡ್ ಪಡೆಯುವವರು ಸಹ ಆನ್‌ಲೈನಲ್ಲಿ ಅರ್ಜಿ ಸಲ್ಲಿಕೆ ಮಾಡಬಹುದು. * * ಈಗಾಗಲೇ ಪಡಿತರ ಚೀಟಿ ಹೊಂದಿದವರು ಹೊಸದಾಗಿ ಮಕ್ಕಳು ಅಥವಾ ತಮ್ಮ ಕುಟುಂಬದ ಇತರ ಸದಸ್ಯರ ಸೇರ್ಪಡೆಗೆ ಅವಕಾಶ ನೀಡಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
* ಅಧಿಕೃತ ವೆಬ್ ಸೈಟ್ https://ahara.kar.nic.in/homeಗೆ ಭೇಟಿ ನೀಡಿ
* ಮುಖ್ಯ ಪುಟದಲ್ಲಿ ಇ-ಸೇವೆಗಳ ಮೇಲೆ ಆಯ್ಕೆ ಮಾಡಿ
* ತಿದ್ದುಪಡಿ/ಹೊಸ ಸೇರ್ಪಡೆಗೆ ವಿನಂತಿ ಆಯ್ಕೆಯನ್ನು ಕ್ಲಿಕ್ ಮಾಡಿ
* ಹೊಸ ಪೇಜ್‌ನಲ್ಲಿ ಫಾರ್ಮ್‌ನಲ್ಲಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ
* ನಂತರ ಕೇಳಲಾದ ಎಲ್ಲ ದಾಖಲೆಗಳನ್ನ ಸ್ಕ್ಯಾನ್ ಪ್ರತಿಯನ್ನು ಅಪ್ಲೋಡ್ ಮಾಡಿ ಫಾರ್ಮ್ ಅನ್ನು ಸಬ್ಮೀಟ್ ಮಾಡಿ
* ಅರ್ಜಿ ಸಲ್ಲಿಕೆ ವೇಳೆ ಎಲ್ಲಾ ದಾಖಲಾತಿಗಳು ಸರಿಯಾಗಿದ್ದರೆ ನಿಮ್ಮ ಮನಗೆ ಅಪ್ಡೇಟ್ ಆಗಿರುವ ಹೊಸ ಪಡಿತರ ಚೀಟಿ ಬರುತ್ತದೆ.