Indian Army: ಭಾರತೀಯ ಸೇನಾ ಆಯ್ಕೆಗೆ ಪೂರ್ವ ಸಿದ್ಧತಾ ತರಬೇತಿ

Indian Army: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಭಾರತೀಯ ಸೇನೆ (Indian Army) /ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗಳ ಅರ್ಹ ಅಭ್ಯರ್ಥಿಗಳಿಗೆ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಉಚಿತವಾಗಿ ನೀಡಲಾಗುತ್ತಿದ್ದು, ಜಿಲ್ಲೆಯ ಅರ್ಹ ಅಭ್ಯರ್ಥಿಗಳಿಂದ (ಬಾಲಕರು) ಅರ್ಜಿ ಆಹ್ವಾನಿಸಲಾಗಿದೆ.

ತರಬೇತಿಯು ಬ್ರಹ್ಮಾವರ ತಾಲೂಕು ಬಾರ್ಕೂರು ಹನೆಹಳ್ಳಿ ನ್ಯಾಷನಲ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದ್ದು, ಅಭ್ಯರ್ಥಿಯು 2005 ರ ಸೆಪ್ಟಂಬರ್ 26 ರಿಂದ 2008 ರ ಸೆಪ್ಟಂಬರ್ 26 ರ ಅವಧಿಯಲ್ಲಿ ಜನಿಸಿರುವ ಅರ್ಹರು ಸೆಪ್ಟಂಬರ್ 26 ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಹ ಅಭ್ಯರ್ಥಿಗಳನ್ನು ಅಕ್ಟೋಬರ್ 6 ರಂದು ನಡೆಯುವ ನಗರದ ಅಜ್ಜರಕಾಡು ಮಹಾತ್ಮಗಾಂಧಿ ಮೈದಾನದಲ್ಲಿ ರ‍್ಯಾಲಿಯಲ್ಲಿ ಆಯ್ಕೆ ಮಾಡಲಾಗುವುದು. ಸದರಿ ರ‍್ಯಾಲಿಯಲ್ಲಿ ಭಾಗವಹಿಸಲು ಇಚ್ಛೆ ಇರುವ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಕೊಠಡಿ ಸಂಖ್ಯೆ: 304, ಬಿ ಬ್ಲಾಕ್, ಎರಡನೇ ಮಹಡಿ, ರಜತಾದ್ರಿ, ಮಣಿಪಾಲ ಉಡುಪಿ ದೂ.ಸಂಖ್ಯೆ: 0820-2574881 / ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಥವಾ ವೆಬ್‌ಸೈಟ್ https://udupi.nic.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.

Previous Post Next Post