BPL Card: ನಿಮ್ಮ‌ ಪಡಿತರ ಚೀಟಿ ರದ್ದಾಗಿದ್ರೆ ನೀವು ಮಾಡಬೇಕಾದ ಮೊದಲ ಕೆಲಸ: ಇಲ್ಲಿದೆ ಮಹತ್ವದ ಮಾಹಿತಿ

BPL Ration Card: ಪ್ರಮುಖ ದಾಖಲೆಗಳಲ್ಲಿ ಪಡಿತರ ಚೀಟಿ ಕೂಡ ಒಂದಾಗಿದೆ. ಇದರಲ್ಲೂ ಹಲವು ವಿಧಗಳಿದ್ದು, ಈ ಪೈಕಿ ಬಿಪಿಎಲ್‌ ಕಾರ್ಡ್‌ಗೆ ಹೆಚ್ಚಿನ ಸರ್ಕಾರಿ ಸೌಲಭ್ಯಗಳು ದೊರೆಯಲಿವೆ. ಆದ್ದರಿಂದ ಈ ಕಾರ್ಡನ್ನು ಅನರ್ಹರು ಕೂಡ ಪಡೆದುಕೊಂಡಿದ್ದು, ಇವುಗಳನ್ನು ರದ್ದುಪಡಿಸುವ ಮಹತ್ವದ ಕಾರ್ಯಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಇದರ ಜೊತೆಗೆ ಗುಡ್‌ ನ್ಯೂಸ್‌ವೊಂದನ್ನು ಕೂಡ ನೀಡಿದೆ. ಒಂದು ವೇಳೆ ನಿಮ್ಮ ಕಾರ್ಡ್‌ ರದ್ದಾದರೆ ನೀವು ಏನು ಮಾಡಬೇಕೆನ್ನುವ ಮಾಹಿತಿಯನ್ನು ನೀಡಿದೆ. ಹಾಗಾದ್ರೆ, ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ರಾಜ್ಯದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಪಡೆದಂತಹ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದುಪಡಿಸುವ ಮಹತ್ವದ ಕಾರ್ಯವನ್ನು ಸರ್ಕಾರ ಮುಂದುವರೆಸಿದೆ. ಅಲ್ಲದೆ, ಇಂತಹವರನ್ನು ಎಪಿಎಲ್‌ಗೆ ವರ್ಗಾವಣೆ ಮಾಡುವ ಕೆಲಸವನ್ನು ಕೂಡ ಮಾಡುತ್ತಿದೆ. ಜೊತೆಗೆ ಕಾರ್ಡ್‌ ರದ್ದಾಗಿದ್ದರೆ ಏನು ಮಾಡಬೇಕು ಎನ್ನುವ ಮಾಹಿತಿಯನ್ನು ನೀಡಿದೆ. ಹಾಗಾದ್ರೆ ಇದು ಯಾರಿಗೆಲ್ಲಾ ಅನ್ವಯ ಆಗಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ನೋಡಿ.

Karnataka Government to Cancel Ineligible BPL Ration Cards Steps for Affected Families

ಸಾಮಾನ್ಯವಾಗಿ ಬಿಪಿಎಲ್‌ ಪಡಿತರ ಚೀಟಿಯನ್ನು ಬಡತನ ರೇಖೆಗಿಂತ ಕೆಳಗಿರುವವರಿಗೆ ನೀಡಿಲಾಗುತ್ತದೆ. ಆದರೆ, ಇದನ್ನು ಶ್ರೀಮಂತರು ಅಂದರೆ ಅರ್ಹರಲ್ಲದವರು ಕೂಡ ಪಡೆದುಕೊಂಡಿದ್ದು, ಇದಕ್ಕೆ ಕಡಿವಾಣ ಹಾಕುವ ಕೆಲಸವನ್ನು ಸರ್ಕಾರ ಮುಂದುವರೆಸಿದೆ. ನಿಜವಾದ ಬಡವರಿಗೆ ಬಿಪಿಎಲ್‌ ಕಾರ್ಡ್‌ಗಳನ್ನು ನೀಡಿ ಅವರಿಗೆ ಸಿಗಬೇಕಾದ ಸೌಕರ್ಯಗಳನ್ನು ಒದಗಿಸುವುದಾಗಿದೆ.

ಪಡಿತರ ಚೀಟಿ ಪರಿಷ್ಕರಣೆಗೆ ಕೇಂದ್ರ ಸರ್ಕಾರ ಮಹತ್ವದ ಮಾರ್ಗಸೂಚಿಯನ್ನು ಹೊರಡಿಸಿದೆ. ಇದರ ಅನ್ವಯ ಅನರ್ಹ ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದುಪಡಿಸಿ ಅಂತಹವರನ್ನು ಎಪಿಎಲ್‌ಗೆ ವರ್ಗಾವಾಣೆ ಮಾಡಲು ಸೂಚನೆ ನೀಡಿದೆ. ಒಂದು ವೇಳೆ ಬಡವರ ಬಳಿಯ ಬಿಪಿಎಲ್ ಕಾರ್ಡ್ ರದ್ದಾದರೆ, ಸರ್ಕಾರಿ ಯೋಜನೆಗಳನ್ನು ಪಡೆದುಕೊಳ್ಳಲು ಸಾಧ್ಯವಿರುವುದಿಲ್ಲ. ಆದ್ದರಿಂದ ಸರ್ಕಾರದ ಈ ನಿರ್ಧಾರ ಬಡವರನ್ನು ಆತಂಕಕ್ಕೀಡು ಮಾಡಿದೆ. ಆದರೆ, ಇದರ ಮಧ್ಯೆಯೇ ರಾಜ್ಯ ಆಹಾರ ನಾಗರೀಕ ಸರಬರಾಜು ಸಚಿವ ಕೆ.ಹೆಚ್.ಮುನಿಯಪ್ಪ ನೆಮ್ಮದಿಯ ಸುದ್ದಿಯನ್ನು ಕೊಟ್ಟಿದ್ದಾರೆ.

ಆದರೆ, ಕೆಲವರು ಅಕ್ರಮವಾಗಿ ಬಿಪಿಎಲ್ ಕಾರ್ಡ್ ಹೊಂದಿದ್ದು, ಅಂತಹವರ ವಿರುದ್ಧ ಸಮರ ಸಾರಿರುವ ಕೇಂದ್ರ ಸರ್ಕಾರ ಮಹತ್ವದ ಮಾರ್ಗಸೂಚಿಯನ್ನ ಹೊರಡಿಸಿದೆ. ಈ ಪ್ರಕಾರ, ಅನರ್ಹರ ಬಿಪಿಎಲ್ ಕಾರ್ಡುಗಳನ್ನು ರದ್ದುಗೊಳಿಸಿ, ಅವರನ್ನು ಎಪಿಎಲ್‌ ಕಾರ್ಡ್‌ ನೀಡಬೇಕೆಂದು ಸರ್ಕಾರ ಸೂಚಿಸಿದೆ.

ಮಾಹಿತಿ ಪ್ರಕಾರ, ರಾಜ್ಯದ ಸರ್ಕಾರ ಪಡಿತರ ಚೀಟಿಗಳ ಇದೆ ತರಹದ ನೇಮಕಾತಿ,ವಿದ್ಯಾರ್ಥಿವೇತನ,ಕೇಂದ್ರ/ರಾಜ್ಯ ಯೋಜನೆಗಳಿಗಾಗಿ ನಮ್ಮ ಟೆಲಿಗ್ರಾಮ ಚಾನಲ್ ಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ ಮುಂದಾಗಿದ್ದು, ಈ ವೇಳೆ ಕರ್ನಾಟಕದಲ್ಲಿ ಸುಮಾರು 7,00,000 ರಿಂದ 12,00,000 ಅನರ್ಹ ಬಿಪಿಎಲ್ ಕಾರ್ಡ್‌ಗಳು ಇರುವುದು ಪತ್ತೆಯಾಗಿದೆ. ಇದೀಗ ಇವುಗಳನ್ನು ರದ್ದುಗೊಳಿಸಲಾಗುವುದು ಎನ್ನುವ ಶಾಕಿಂಗ್‌ ಸಂಗತಿಯೊಂದು ಎದುರಾಗಿದೆ.

ಪಡಿತರ ಚೀಟಿ ಪರಿಷ್ಕರಣೆಯ ಮುಖ್ಯ ಉದ್ದೇಶ ಪಡಿತರ ವ್ಯವಸ್ಥೆಯಲ್ಲಿ ಪಾರದರ್ಶಕತೆಯನ್ನು ತರುವುದಾಗಿದೆ. ಅನರ್ಹರ ಬಳಿಯ ಬಿಪಿಎಲ್ ಕಾರ್ಡ್ ರದ್ದುಗೊಳಿಸಿ, ಅರ್ಹರಿಗೆ ಬಿಪಿಎಲ್ ಕಾರ್ಡ್ ಸೌಲಭ್ಯ ಸಿಗುವಂತೆ ಮಾಡುವುದಾಗಿದೆ. ಈ ಮೂಲಕ, ಅಗತ್ಯ ಇರುವವರಿಗೆ ಬಿಪಿಎಲ್ ಕಾರ್ಡ್ ನೀಡಿ ಅವರಿಗೆ ಸರ್ಕಾರದ ಸೌಲಭ್ಯಗಳು ತಲುಪುವಂತೆ ಮಾಡುವುದಾಗಿದೆ. ಒಂದು ವೇಳೆ ನಿಮ್ಮ ಬಿಪಿಎಲ್ ಕಾರ್ಡ್ ತಪ್ಪಾಗಿ ರದ್ದಾಗಿದ್ದಾರೆ, ಮತ್ತೆ ಪಡೆದುಕೊಳ್ಳಲು ಪರಿಹಾರ ನೀಡಲಾಗಿದೆ.

ಬಿಪಿಎಲ್ ಕಾರ್ಡ್‌ ರದ್ದು ಕುರಿತು ಜನಸಾಮಾನ್ಯರು ಆತಂಕಪಡುವ ಅಗತ್ಯ ಇಲ್ಲ. ಒಂದು ವೇಳೆ ನಿಮ್ಮ ಬಿಪಿಎಲ್ ಕಾರ್ಡ್ ತಪ್ಪಾಗಿ ಎಪಿಎಲ್‌ಗೆ ವರ್ಗಾವಣೆ ಆಗಿದ್ದರೆ, ಅಂತಹ ಫಲಾನುಭವಿಗಳು ಕೂಡಲೇ ಆಹಾರ ಇಲಾಖೆಗೆ ಈ ಬಗ್ಗೆ ವರದಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಕೆ ಮಾಡಿ ಮತ್ತೆ ಬಿಪಿಎಲ್‌ ಕಾರ್ಡ್‌ ಪಡೆದುಕೊಳ್ಳಬಹುದು ಎಂದು ಆಹಾರ ನಾಗರೀಕ ಸರಬರಾಜು ಸಚಿವ ಕೆ.ಹೆಚ್.ಮುನಿಯಪ್ಪ ತಿಳಿಸಿದ್ದಾರೆ.

ಅರ್ಹ ಫಲಾನುಭವಿಗಳು ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗುವುದನ್ನು ತಪ್ಪಿಸಲು ಮತ್ತು ಪಡಿತರ ಪರಿಷ್ಕರಣೆಯಿಂದ ಅರ್ಹರಿಗೆ ಯಾವುದೇ ರೀತಿಯ ತೊಂದರೆ ಆಗುವುದನ್ನು ತಪ್ಪಿಸಲು ಸರ್ಕಾರ ಈ ಮಹತ್ವದ ನಿರ್ಧಾರಕ್ಕೆ ಕೈಹಾಕಿದೆ. ಬಿಪಿಎಲ್ ಕಾರ್ಡ್ ರದ್ದಾಗಿ ಎಪಿಎಲ್‌ಗೆ ವರ್ಗಾವಣೆ ಆಗಿದ್ದರೆ, ಅಂತಹವರಿಗೆ ಅರ್ಜಿ ಸಲಿಸಿದ 24 ಗಂಟೆಗಳೊಳಗೆ ಕಾರ್ಡ್ ಸರಿಪಡಿಸಿ ಸಿಗಬೇಕಾದ ಪಡಿತರವನ್ನು ನೀಡಲಾಗುವುದು. ಇದಕ್ಕಾಗಿ ನಿಗದಿತ ಮಾನದಂಡಗಳನ್ನೂ ಪೂರೈಸುವುದು ಅಗತ್ಯ ಆಗಿದೆ ಎಂದು ಅಂತಲೂ ತಿಳಿಸಿದ್ದಾರೆ.

Previous Post Next Post