ಬ್ಯೂಟಿ ಪಾರ್ಲರ್ ತರಬೇತಿಗೆ ಭರ್ಜರಿ ಚಾನ್ಸ್, ಎಲ್ಲಾ ಉಚಿತ.. ಉಚಿತ.. Skill Development

ಪ್ರತಿದಿನ ಬೆಳಗ್ಗೆ ಹೋಗಿ 10 ಗಂಟೆ 12 ಗಂಟೆ ಕಾಲ ದುಡಿದು ಬರುವ ಬದಲು ಸ್ವಂತಕ್ಕೆ ಒಂದು ಉದ್ಯೋಗ ಕಟ್ಟಿ ಬೆಳೆಸಬೇಕು ಅನ್ನೋದು ಬಹುತೇಕರ ಆಸೆ. ಅದರಲ್ಲೂ ಗೃಹಣಿಯರು ಮನೆ ನಿಭಾಯಿಸಿಕೊಂಡು ಕೆಲಸಕ್ಕೆ ಹೋಗಿ ಬರುವುದು ಸಾಕಷ್ಟು ಕಷ್ಟಕರ. ಹೀಗಿದ್ದಾಗ, ಸ್ವಂತ ಉದ್ದಿಮೆ ಶುರು ಮಾಡಬೇಕು & ಆ ಮೂಲಕ ಜೀವನದಲ್ಲಿ ಹೊಸದಾಗಿ ಏನಾದ್ರೂ ಮಾಡಬೇಕು ಅಂತಾ ಪ್ರಯತ್ನ ಮಾಡುತ್ತಾ ಇರ್ತಾರೆ. ಇದೀಗ ಅಂತಹವರಿಗೆ ಭರ್ಜರಿ ಸುದ್ದಿ ಸಿಕ್ಕಿದ್ದು, ಬ್ಯೂಟಿ ಪಾರ್ಲರ್ ತರಬೇತಿಗೆ ಭರ್ಜರಿ ಚಾನ್ಸ್ ಒಲಿದು ಬಂದಿದೆ.

ಹೌದು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ & ಕೆನರಾ ಬ್ಯಾಂಕ್ ಸಹಯೋಗದಲ್ಲಿ ರುಡ್ಸೆಟ್ ಸಂಸ್ಥೆಯಿಂದ ಹಮ್ಮಿಕೊಂಡಿರುವ 30 ದಿನಗಳ ಉಚಿತ ಬ್ಯೂಟಿ ಪಾರ್ಲರ್ ತರಬೇತಿ ಇನ್ನೇನು ಕೆಲವೇ ದಿನಗಳಲ್ಲಿ ಆರಂಭ ಆಗಲಿದೆ. ನವೆಂಬರ್ 05 ಬುಧವಾರದಿಂದ 30 ದಿನಗಳ ಉಚಿತ ಬ್ಯೂಟಿ ಪಾರ್ಲರ್ ತರಬೇತಿ ಶುರು ಆಗಲಿದ್ದು, ಆಸಕ್ತ ಗ್ರಾಮೀಣ ನಿರುದ್ಯೋಗಿ ಯುವತಿಯರಿಂದ ಅರ್ಜಿಗಳನ್ನು ಆಹ್ವಾನ ಮಾಡಲಾಗಿದೆ. 18 ರಿಂದ 45 ವರ್ಷ ವಯೋಮಾನದ ಆಸಕ್ತರು ಅರ್ಜಿ ಸಲ್ಲಿಸಬಹುದು. ಕನ್ನಡ ಭಾಷೆ ಓದಲು ಮತ್ತು ಬರೆಯಲು ಬರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ & ಆಧಾರ್ ಕಾರ್ಡ್ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು ಎಂದು ತಿಳಿಸಲಾಗಿದೆ.

ಹೆಚ್ಚಿನ ಮಾಹಿತಿ ಪಡೆಯಲು ಸಂಪರ್ಕಿಸಿ

30 ದಿನಗಳ ಉಚಿತ ಬ್ಯೂಟಿ ಪಾರ್ಲರ್ ತರಬೇತಿ ಸಮಯದಲ್ಲಿ ಉಚಿತ ಊಟ & ವಸತಿ ಸೌಲಭ್ಯ ಕೂಡ ಇರಲಿದೆ. ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರ ವಿತರಿಸಲಾಗುವುದು ಎಂದು ಮಾಹಿತಿ ನೀಡಲಾಗಿದೆ. ಟ್ರೈನಿಂಗ್ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಲು ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಈ ವಿಳಾಸಕ್ಕೆ ಸಂಪರ್ಕ ಮಾಡಬಹುದು. ಅಥವಾ ಮೊಬೈಲ್ ಸಂಖ್ಯೆ ಆಗಿರುವ 9380162042 & 9740982585 ಕೂಡ ಸಂಪರ್ಕ ಮಾಡಬಹುದು.

ಸಿಸಿ ಟಿವಿ ಕ್ಯಾಮೆರಾ ತರಬೇತಿ

ಇದರ ಜೊತೆಗೆ ಅಕ್ಟೋಬರ್ 06 ಸೋಮವಾರದಿಂದ 13 ದಿನಗಳ ಕಾಲ ಉಚಿತವಾಗಿ ಸಿಸಿ ಟಿವಿ ಕ್ಯಾಮೆರಾ ಅಳವಡಿಕೆ & ಸರ್ವೀಸ್ ಟ್ರೈನಿಂಗ್ ಶಿಬಿರ ಕೂಡ ಹಮ್ಮಿಕೊಳ್ಳಲಾಗಿದೆ. ಈ ತರಬೇತಿಗಾಗಿ ಬೆಂಗಳೂರು ಗ್ರಾಮಾಂತರ, ರಾಮನಗರ & ತುಮಕೂರು ಜಿಲ್ಲಾ ವ್ಯಾಪ್ತಿಯ ಆಸಕ್ತ ಗ್ರಾಮೀಣ ನಿರುದ್ಯೋಗಿ ಯುವಕ ಹಾಗೂ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ತರಬೇತಿ ಪಡೆಯಲು ಆಸಕ್ತಿ ಇರುವವರು 18 ರಿಂದ 45 ವರ್ಷದ ಒಳಗಿರಬೇಕು. ಅರ್ಜಿಗಳನ್ನು ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನಾಂಕ, ಇನ್ನು ಈ ಬಗ್ಗೆ ಹೆಚ್ಚಿನ ಮಾಹಿತಿಗೆ ಮೊಬೈಲ್‌ ಸಂಖ್ಯೆ 9241482541, 9740982585, 9113880324 ಅನ್ನು ಸಂಪರ್ಕಿಸಲು ತಿಳಿಸಲಾಗಿದೆ.

Previous Post Next Post