SSC Constable Jobs 2025: 7565 ಕಾನ್ಸ್‌ಟೇಬಲ್ ಹುದ್ದೆಗಳಿಗೆ ನೇಮಕಾತಿ; ಪಿಯುಸಿ ಪಾಸ್ ಆಗಿದ್ರೆ ಕೂಡಲೇ ಅರ್ಜಿ ಸಲ್ಲಿಸಿ

ಸಿಬ್ಬಂದಿ ಆಯ್ಕೆ ಆಯೋಗ (SSC) 7565 ಕಾನ್‌ಸ್ಟೇಬಲ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಪಿಯುಸಿ ಪಾಸ್ ಆದವರು ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. 18ರಿಂದ 25 ವರ್ಷ ವಯಸ್ಸಿನೊಳಗಿನ ಅಭ್ಯರ್ಥಿಗಳು ಅಕ್ಟೋಬರ್ 21ರೊಳಗೆ ಆನ್‌ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಆಯ್ಕೆ ಪ್ರಕ್ರಿಯೆ ಕಂಪ್ಯೂಟರ್ ಆಧಾರಿತ ಪರೀಕ್ಷೆ, ದೈಹಿಕ ಪರೀಕ್ಷೆ, ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಗಳನ್ನು ಒಳಗೊಂಡಿದೆ.

ಸಿಬ್ಬಂದಿ ಆಯ್ಕೆ ಆಯೋಗವು (SSC) ಅಧಿಕೃತ ಅಧಿಸೂಚನೆಯ ಮೂಲಕ ಕಾನ್ಸ್‌ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಭಾರತ ಸರ್ಕಾರದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 21ರ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು.

SSC ಹುದ್ದೆಯ ಅಧಿಸೂಚನೆ:

ಸಂಸ್ಥೆಯ ಹೆಸರು : ಸಿಬ್ಬಂದಿ ಆಯ್ಕೆ ಆಯೋಗ (SSC)

ಹುದ್ದೆಗಳ ಸಂಖ್ಯೆ: 7565

ಉದ್ಯೋಗ ಸ್ಥಳ: ಭಾರತದಾದ್ಯಂತ

ಹುದ್ದೆ ಹೆಸರು: ಕಾನ್ಸ್‌ಟೇಬಲ್

ಸಂಬಳ: ತಿಂಗಳಿಗೆ ರೂ.21700-69100/-

SSC ಹುದ್ದೆಯ ವಿವರಗಳು:

ಪೋಸ್ಟ್‌ಗಳ ಸಂಖ್ಯೆ:

ಕಾನ್‌ಸ್ಟೆಬಲ್ (ಮಹಿಳೆ) -2496

ಕಾನ್‌ಸ್ಟೆಬಲ್ (ಪುರುಷ)- 5069

ಅರ್ಹತಾ ವಿವರಗಳು:

ಶೈಕ್ಷಣಿಕ ಅರ್ಹತೆ: SSC ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 12 ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.

ವಯಸ್ಸಿನ ಮಿತಿ: ಸಿಬ್ಬಂದಿ ಆಯ್ಕೆ ಆಯೋಗದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು 01-ಜುಲೈ-2025 ರಂತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 25 ವರ್ಷಗಳನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ:

ಒಬಿಸಿ ಅಭ್ಯರ್ಥಿಗಳು: 03 ವರ್ಷಗಳು

SC/ST ಅಭ್ಯರ್ಥಿಗಳು: 05 ವರ್ಷಗಳು

ಅರ್ಜಿ ಶುಲ್ಕ:

SC/ST/ಮಾಜಿ ಸೈನಿಕರಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ. ಆದರೆ ಇತರ ಅಭ್ಯರ್ಥಿಗಳು ಆನ್‌ಲೈನ್ ಮೂಲಕ 100ರೂ. ಪಾವತಿಸಬೇಕಾಗುತ್ತದೆ.

ಆಯ್ಕೆ ಪ್ರಕ್ರಿಯೆ:

ಕಂಪ್ಯೂಟರ್ ಆಧಾರಿತ ಪರೀಕ್ಷೆ

ದೈಹಿಕ ಪರೀಕ್ಷೆ

ದಾಖಲೆ ಪರಿಶೀಲನೆ

ವೈದ್ಯಕೀಯ ಪರೀಕ್ಷೆ

ಇದನ್ನೂ ಓದಿ: ಸಹಕಾರಿ ಹಾಲು ಉತ್ಪಾದಕರ ಸಂಘದಲ್ಲಿ ನೇಮಕಾತಿ; ಪದವೀಧರರು ಕೂಡಲೇ ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಸುವುದು ಹೇಗೆ?

ಮೊದಲನೆಯದಾಗಿ SSC ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ.(7565-Constable-Posts-Advt-Details-SSC)

SSC ಕಾನ್ಸ್‌ಟೇಬಲ್ ಹುದ್ದೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ.

SSC ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ನಿಮ್ಮ ಇತ್ತೀಚಿನ ಛಾಯಾಚಿತ್ರದೊಂದಿಗೆ ಅಪ್‌ಲೋಡ್ ಮಾಡಿ.

ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.

SSC ನೇಮಕಾತಿ 2025 ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಕೊನೆಯದಾಗಿ ಸಲ್ಲಿಸು ಬಟನ್ ಮೇಲೆ ಕ್ಲಿಕ್ ಮಾಡಿ. ಬಹು ಮುಖ್ಯವಾಗಿ ಅರ್ಜಿ ಸಂಖ್ಯೆ ಅಥವಾ ಹೆಚ್ಚಿನ ಉಲ್ಲೇಖಕ್ಕಾಗಿ ಅರ್ಜಿಯ ಕಾಪಿಯನ್ನು ತೆಗೆದಿಟ್ಟುಕೊಳ್ಳಿ.

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಅಕ್ಟೋಬರ್ 21

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: ಅಕ್ಟೋಬರ್ 22

‘ಆನ್‌ಲೈನ್ ಅರ್ಜಿ ನಮೂನೆ ತಿದ್ದುಪಡಿಗಾಗಿ ವಿಂಡೋ’ ಮತ್ತು ತಿದ್ದುಪಡಿ ಶುಲ್ಕಗಳ ಆನ್‌ಲೈನ್ ಪಾವತಿ ದಿನಾಂಕಗಳು: ಅಕ್ಟೋಬರ್ 29 ರಿಂದ 31

ಕಂಪ್ಯೂಟರ್ ಆಧಾರಿತ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ: ಡಿಸೆಂಬರ್ 2025/ಜನವರಿ 2026




Previous Post Next Post